ಕಾಸರಗೋಡು ಕಲೋತ್ಸವದಲ್ಲಿ ಕನ್ನಡ ಕಡೆಗಣನೆ: ಮಲಯಾಳಿ ಹೇರಿಕೆ, ಕನ್ನಡಿಗರು ಗರಂ

By Kannadaprabha News  |  First Published Dec 2, 2024, 11:22 AM IST

ಕಾಸರಗೋಡಿನ ಶಾಲಾ ಕಲೋತ್ಸವದಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕನ್ನಡ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರ ನೇಮಕ, ಕಚೇರಿಗಳಲ್ಲಿ ಮಲಯಾಳಿ ಬಳಕೆಯಂತಹ ಹಿಂದಿನ ವಿವಾದಗಳ ನಡುವೆ ಈಗ ಕಲೋತ್ಸವದಲ್ಲೂ ಕನ್ನಡ ಕಡೆಗಣನೆ ವಿವಾದ ಸೇರ್ಪಡೆಯಾಗಿದೆ.


ಕನ್ನಡಪ್ರಭ ವಾರ್ತೆ ಮಂಗಳೂರು
ಗಡಿನಾಡಿನಲ್ಲಿ ಕೇರಳ ಸರ್ಕಾರದ ಕನ್ನಡ ವಿರೋಧಿ ನೀತಿ ಮತ್ತೆ ಮುಂದುವರಿದಿದೆ. ಕಾಸರಗೋಡಿನ ಹೊಸದುರ್ಗದ ಉದಿನೂರಿನಲ್ಲಿ ನಡೆದ 3 ದಿನಗಳ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡವನ್ನು ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈಗಾಗಲೇ ಕನ್ನಡ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರ ನೇಮಕ, ಕಚೇರಿಗಳಲ್ಲಿ ಕನ್ನಡ ಬದಲು ಮಲಯಾಳಿ ಭಾಷೆಯಲ್ಲಿ ಕಡತ ವಿಲೇವಾರಿ ಮಾಡುತ್ತಿರುವ ಆರೋಪಗಳು ವ್ಯಕ್ತವಾಗುತ್ತಿರುವ ನಡುವೆಯೇ ಈಗ ಕಲೋತ್ಸವಗಳಲ್ಲೂ ಕನ್ನಡದ ಕಡೆಗಣನೆ ಆರೋಪ ಸೇರ್ಪಡೆಯಾಗಿದೆ.

ಒಟ್ಟು 12 ವೇದಿಕೆಗಳಲ್ಲಿ ಕಾರ್ಯಕ್ರಮಗಳು ನಡೆದಿದ್ದು, ಯಾವುದೇ ವೇದಿಕೆಯಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಸ್ಥಾಪಿಸಿರಲಿಲ್ಲ. ಕನ್ನಡದ ಸ್ಪರ್ಧೆ ನಡೆಯುವ ಕೇವಲ ಒಂದೆಡೆ ಮಾತ್ರ ವೇದಿಕೆ ಸಮೀಪ 'ಪ್ಲಾಸ್ಟಿಕ್ ಮುಕ್ತ ಆವರಣವೇ ಉದನೂರಿಗೆ ಸ್ವರ್ಣಾಭರಣ' ಎಂದು ಬರೆದಿರುವುದನ್ನು ಹೊರತುಪಡಿಸಿದರೆ, ಬೇರೆಲ್ಲೂ ಕನ್ನಡ ಭಾಷೆ ಕಂಡುಬಂದಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. . ಒಟ್ಟು 7 ಉಪ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಈ ಪೈಕಿ ಕಾಸರಗೋಡು, ಕುಂಬಳೆ, ಮಂಜೇಶ್ವರ ಉಪಜಿಲ್ಲೆಗಳಿಂದ ಭಾಗವಹಿಸುವ ವಿದ್ಯಾರ್ಥಿಗಳ ಪೈಕಿ ಬಹುಪಾಲು ಕನ್ನಡ ಭಾಷಿಕ ಮಕ್ಕಳೇ ಆಗಿದ್ದಾರೆ. ಹಾಗಿರುವಾಗ ಯಾವುದಾದರೂ ವೇದಿಕೆಗೆ ಕನ್ನಡ ಭಾಷೆಯಲ್ಲಿ ಹೆಸರಿಡಲು ಅಥವಾ ಸೂಚನೆಗಳನ್ನು ಮಲೆಯಾಳಂ ಜತೆಗೆ ಕನ್ನಡದಲ್ಲೂ ಬರೆಯಲು ಸಂಬಂಧ ಪಟವರು ಆಸಕ್ತಿ ವಹಿಸಿಲ್ಲ ಎಂಬುದು ಆರೋಪ.

Latest Videos

undefined

ಮಕ್ಕಳ ಹಕ್ಕು ಆಯೋಗಕ್ಕೂ ದೂರು: 2 ವರ್ಷಗಳ ಹಿಂದೆ ಕನ್ನಡದಲ್ಲಿ ಸಾಂಸ್ಕೃತಿಕ ಕಾಠ್ಯಕ್ರಮಗಳಿಗೆ ಅವಕಾಶ ನೀಡದ ಕಾರಣ ಕನ್ನಡ ಅಧ್ಯಾಪಕರ ಸಂಘಟನೆ ನೇತೃತ್ವದಲ್ಲಿ ಕೇರಳದ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿತ್ತು. ಆಯೋಗದ ಅಧ್ಯಕ್ಷರು ಜಿಲ್ಲಾ ವಿದ್ಯಾಂಗ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ನಡೆಸಿದ್ದರು. ಬಳಿಕ ಅಲ್ಪಸಂಖ್ಯಾತರಾಗಿರುವ ಕನ್ನಡಿಗರಿಗೆ ಕನ್ನಡದಲ್ಲೇ ಕಾರ್ಯಕ್ರಮ ನಡೆಸಲು ಅವಕಾಶ ನೀಡಬೇಕು. ಈ ಬಗ್ಗೆ ಯಾವುದೇ ಅಡ್ಡಿ ಆತಂಕ ಸಲ್ಲದು ಎಂದಿತ್ತು. ರಾಜ್ಯ ಮಟ್ಟದ ಕಲೋತ್ಸವದಲ್ಲಿ ಕಾವ್ಯಾಲಾಪನೆ ಕಂಠಪಾಠ ಮತ್ತು ಕವಿತಾ ರಚನೆ ವಿಭಾಗದಲ್ಲಿ ಮಾತ್ರ ಕನ್ನಡ ಭಾಷೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾಸರಗೋಡು ಹಾಗೂ ಮಂಜೇಶ್ವರ ಹೊರತುಪಡಿಸಿ ಬೇರೆ ಕಂದಾಯ ವಿಭಾಗಗಳಲಿ ಮಲಯಾಳಿ ಭಾಷೆಗೆ ಒತ್ತು ನೀಡಲಾಗುತ್ತಿದೆ. ಈ ಪ್ರದೇಶಗಳಲ್ಲಿ ಕನ್ನಡಿಗರು ವಿರಳ. ಇದನ್ನೇ ವಿದ್ಯಾಂಗ ಇಲಾಖೆ ಅಧಿಕಾರಿಗಳು ಮಲಯಾಳಿ ಭಾಷೆ ಪ್ರಸರಣ ಉಪಯೋಗಕ್ಕೆ ಬಳಕೆ ಮಾಡುತ್ತವೆ ಎನುವುದು ಕನ್ನಡಿಗರ ಆರೋಪವಾಗಿದೆ.

ಇದನ್ನೂ ಓದಿ:'ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ' ಎಂದ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಆದೇಶಿಸಿದ ಮಧು ಬಂಗಾರಪ್ಪ

 

click me!