KIA Bengaluru: ಏರ್‌ಪೋರ್ಟ್‌ ವೆಬ್‌ಸೈಟ್ ಇನ್ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯ!

Published : Apr 02, 2025, 08:37 AM ISTUpdated : Apr 02, 2025, 09:15 AM IST
KIA Bengaluru: ಏರ್‌ಪೋರ್ಟ್‌ ವೆಬ್‌ಸೈಟ್ ಇನ್ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯ!

ಸಾರಾಂಶ

ಬೆಂಗಳೂರು ವಿಮಾನ ನಿಲ್ದಾಣವು ತನ್ನ ಅಂತರ್ಜಾಲದಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಪರಿಚಯಿಸಿದೆ. ಇದರಿಂದ ವಿಮಾನ ಹಾರಾಟದ ಮಾಹಿತಿ, ಆಗಮನ, ನಿರ್ಗಮನ, ಮತ್ತು ಇತರ ಸೇವೆಗಳ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ ಪಡೆಯಬಹುದು.

 ಬೆಂಗಳೂರು (ಏ.2): ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ (ಬಿಐಎಎಲ್‌) ತನ್ನ ಅಂತರ್ಜಾಲದಲ್ಲಿ ಆಂಗ್ಲ ಭಾಷೆಯ ಜತೆಗೆ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಿದೆ.

ಈವರೆಗೆ ತನ್ನ ಅಂತರ್ಜಾಲದಲ್ಲಿ ಕನ್ನಡ ಭಾಷೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಬಿಐಎಎಲ್‌ ಇದೀಗ ಕನ್ನಡ ಭಾಷೆಯಲ್ಲೂ ಮಾಹಿತಿ ದೊರೆಯುವಂತೆ ಮಾಡಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸುವ ಮೂಲಕ ವಿಮಾನಯಾನ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಉದ್ದೇಶ ಬಿಐಎಎಲ್‌ ಹೊಂದಿದೆ. ಅದರಂತೆ ವಿಮಾನ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಕುರಿತು ಮಾಹಿತಿಗಳನ್ನು ಕನ್ನಡದಲ್ಲಿಯೇ ನೀಡಲಾಗುತ್ತದೆ. ಜತೆಗೆ ವಿಮಾನಗಳನ್ನು ಕಾಯ್ದಿರಿಸಲು, ವಿಮಾನ ನಿಲ್ದಾಣಕ್ಕೆ ತೆರಳಲು ಅಥವಾ ಅಲ್ಲಿಂದ ಬರಲು ಸಾರಿಗೆ ಆಯ್ಕೆ, ಭದ್ರತಾ ಕಾರ್ಯವಿಧಾನ, ಬ್ಯಾಗೇಜ್‌ ನಿಯಮಗಳು ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಕನ್ನಡದಲ್ಲಿಯೇ ನೀಡುವ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕಳೆದ ಒಂದು ವರ್ಷದಲ್ಲಿ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಅತಿಹೆಚ್ಚು ಸೀಜ್‌ ಆದ ವಸ್ತು ಯಾವುದು? ಇಲ್ಲಿದೆ ಡೀಟೇಲ್ಸ್..

ಈ ಕುರಿತು ಮಾಹಿತಿ ನೀಡಿರುವ ಬಿಐಎಎಲ್‌ನ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರಾರ್‌, ಸ್ಥಳೀಯ ಭಾಷೆಯಲ್ಲಿಯೇ ವಿಮಾನ ನಿಲ್ದಾಣದ ಮಾಹಿತಿ ನೀಡಲು ಅಂತರ್ಜಾಲದಲ್ಲಿ ಕನ್ನಡ ಭಾಷಾ ಆಯ್ಕೆಯನ್ನು ಪರಿಚಯಿಸಲಾಗಿದೆ. ಆಮೂಲಕ ನಮ್ಮ ಭಾಷಾ ಪರಂಪರೆಯ ಶ್ರೀಮಂತಿಕೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಉತ್ತಮ ಸೇವೆ ಸಾಧ್ಯ.

ಕನ್ನಡ ಭಾಷೆಯ ಪರಿಚಯದಿಂದ ಪ್ರಯಾಣಿಕರು ಮತ್ತಷ್ಟು ಉತ್ತಮವಾಗಿ ವಿಮಾನಯಾನ ಸೇವೆ ಪಡೆಯಲು ಸಾಧ್ಯವಾಗಲಿದೆ. ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡವನ್ನು ಅಳವಡಿಸಿ ಮಾಹಿತಿ ಪ್ರದರ್ಶಿಸಲಾಗುತ್ತಿದೆ. ಇದೀಗ ಅಂತರ್ಜಾಲದಲ್ಲೂ ಕನ್ನಡಕ್ಕೆ ಆದ್ಯತೆ ನೀಡಲಾಗಿದೆ.

-ಹರೀಶ್‌ ಮಾರಾರ್‌, ಎಂಡಿ, ಬಿಐಎಎಲ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌