
ಧಾರವಾಡ/ತುಮಕೂರು, (ಜ.14): ಹಿರಿಯ ಕವಿ ನಾಡೋಜ ಚನ್ನವೀರ ಕಣವಿ (Chennaveera Kanavi) ಹಾಗೂ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಅವರಿಗೂ ಕೊರೋನಾ ಸೋಂಕು(Coronavirus) ದೃಢಪಟ್ಟಿದೆ.
ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಕಣವಿ, ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ(Hospital) ತಪಾಸಣೆಗೆ ಹೋಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ವರದಿ ಪಾಸಿಟಿವ್ ಬಂದಿದೆ.
Karnataka Lockdown ಕರ್ನಾಟಕ ಲಾಕ್‌ಡೌನ್ ಆಗುತ್ತಾ? ಮೋದಿ ಸಭೆ ಬಳಿಕ ಸ್ಪಷ್ಟನೆ ಕೊಟ್ಟ ಆರೋಗ್ಯ ಸಚಿವ
ಸದ್ಯ ಚನ್ನವೀರ ಕಣವಿ ಅವರು ಧಾರವಾಡ(Dharwad) ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಜಯಚಂದ್ರಗೂ ಕೊರೋನಾ
ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಅವರಿಗೂ ಕೊರೋನಾ ಸೋಂಕು ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರಿಗೆ ಆತಂಕ ಶುರುವಾಗಿದೆ. ಇನ್ನು ಎರಡನೇ ಅಲೆ ವೇಳೆಯೂ ಜಯಚಂದ್ರ ಅವರಿಗೆ ಕೊರೋನಾ ವಕ್ಕರಿಸಿತ್ತು. ಇದೀಗ ಎರಡನೇ ಬಾರಿಗೆ ಸೋಂಕು ತಗುಲಿದೆ.
ಒಂದೇ ದಿನ 23 ಜನ ವಿದ್ಯಾರ್ಥಿಗಳಿಗೆ ಕೊರೋನಾ
ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಸ್ಪೋಟವಾಗಿದೆ. ಒಂದೇ ದಿನ 23 ಜನ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು, ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಟೆಸ್ಟಿಂಗ್ ನಡೆಯುತ್ತಿರೋ ಬೆನ್ನಲ್ಲೆ ಒಂದೇ ದಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಬಾಗಲಕೋಟೆ ನಗರದ ಒಂದೇ ಶಾಲೆಯಲ್ಲಿ 12 ವಿದ್ಯಾರ್ಥಿಗಳಿಗೆ ಕೊರೋನಾ ತಗುಲಿದೆ ಎಂದು ಬಾಗಲಕೋಟೆ ಡಿಎಚ್ಓ ಡಾ.ಅನಂತ ದೇಸಾಯಿ ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ಕಂಡು ಬಂದ ಶಾಲಾ ವಿದ್ಯಾರ್ಥಿಗಳಿಗೆ ಹೋಮ್ ಐಸೋಲೇಶನ್ ಮಾಡಲಾಗಿದ್ದು, ಶಾಲೆಗಳಿಗೆ ರಜೆ ನೀಡುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.
ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು(ಜ.14) ರಾಜ್ಯದಲ್ಲಿ 28,723 ಮಮದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸಾವನ್ನಪ್ಪಿರುವ 14 ಮಂದಿಯಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.12.98ಕ್ಕೆ ಏರಿಕೆಯಾಗಿದೆ. 3,105 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ