* ಚನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕ
* ನಾಡೋಜ ಚನ್ನವೀರ ಕಣವಿ ಹೆಲ್ತ್ ಬುಲೆಟಿನ್ ಬಿಡುಗಡೆ
* ಧಾರವಾಡದ ಎಎಸ್‌ಡಿಂ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ
ಧಾರವಾಡ, (ಜ.28): ನಾಡೋಜ ಚನ್ನವೀರ ಕಣವಿ Kannada Litterateur Chennaveera Kanavi) ಅವರ ಆರೋಗ್ಯಸ್ಥಿತಿ ಕುರಿತು ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಉಸಿರಾಟದ ತೊಂದರೆಯಿಂದ ಸ್ಥಳೀಯ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಕವಿ ನಾಡೋಜ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
Chennaveera Kanavi ಕವಿ ಚನ್ನವೀರ ಕಣವಿ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧಾರ
ಚನ್ನವೀರ ಕಣವಿ ಅವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡು ಆರೋಗ್ಯಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.
ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಕಣವಿ, ಹುಬ್ಬಳ್ಳಿಯ ಎಸ್ ಡಿಎಂ ಆಸ್ಪತ್ರೆಗೆ(Hospital) ತಪಾಸಣೆಗೆ ಹೋಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅಂದು ಅವರು ಅದೇ ಎಸ್ ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ ತೊಂದರೆ ಇಲ್ಲ ಆರೋಗ್ಯವಾಗಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕೋವಿಡ್ ಸೋಂಕು ತಗುಲಿದ್ದ ಡಾ. ಚೆನ್ನವೀರ ಕಣವಿ ಜನವರಿ 14 ರಂದು ಎಸ್.ಡಿ.ಎಮ್.ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಡಾ. ಚೆನ್ನವೀರ ಕಣವಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಚಿಕಿತ್ಸೆಗೆ ಐಸಿಯು ಬೆಡ್ ಮೀಸಲಿರಿಸಿ, ಉತ್ತಮ ಚಿಕಿತ್ಸೆಗೆ ಕ್ರಮ ಕೈಗೊಂಡಿದೆ ಮತ್ತು ಅವರು ಗುಣಮುಖರಾಗಿ ಮನೆಗೆ ಬರುವವರೆಗೆ ಎಲ್ಲಾ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ. ಈ ಕುರಿತು ಜನವರಿ 15 ರಂದು ಎಸ್. ಡಿ. ಎಮ್. ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಡಾ. ಕಣವಿ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ಹೇಳಿತ್ತು.
ಚನ್ನವೀರ ಕಣವಿ ಆಸ್ಪತ್ರೆ ವೆಚ್ಚ ಭರಿಸಲಿರವ ರಾಜ್ಯ ಸರ್ಕಾರ
ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ (Kannada Litterateur Chennaveera Kanavi) ಅವರ ಆಸ್ಪತ್ರೆ ವೆಚ್ಚ (Hospital Bill) ಭರಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಆದೇಶ ಹೊರಡಿಸಿದ್ದಾರೆ.