
ಬೆಂಗಳೂರು (ಡಿ.24): ಬೆಂಗಳೂರಿನಲ್ಲಿ ಅಂಗಡಿ-ಮುಂಗಟ್ಟುಗಳು, ಶಾಪಿಂಗ್ ಮಾಲ್, ವಾಣಿಜ್ಯ ಕಟ್ಟಡಗಳು ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ನಾಪಫಲಕ ಆಳವಡಿಕೆ ಫೆಬ್ರವರಿ 28 ರಂದು ಡೆಡ್ಲೈನ್ ಕೊಟ್ಟಿರುವ ಆಯುಕ್ತರು. ಕನ್ನಡ ನಾಮಫಲಕ ಅಳವಡಿಸದೇ ನಿಯಮ ಉಲ್ಲಂಘಿಸಿದವರ ವಾಣಿಜ್ಯ ಪರವಾನಗಿ ರದ್ದುಪಡಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಕ್ರಿಸ್ಮಸ್, ಹೊಸವರ್ಷಕ್ಕೆ ಊರಿಗೆ ಹೊರಟವರಿಗೆ ಶಾಕ್; ಖಾಸಗಿ ಬಸ್ ಬುಕಿಂಗ್ ಆಪ್‌ಗಳಿಂದ ಪ್ರಯಾಣಿಕರ ಸುಲಿಗೆ!
ಇನ್ನು ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕುರಿತಂತೆ ಮಾತನಾಡಿದ ಅವರು, ಸರ್ಕಾರ ಕೊಟ್ಟಿರುವ ಟಾರ್ಗೆಟ್ ನಂತೆ ಟೆಸ್ಟಿಂಗ್ ಮಾಡಿದ್ದೇವೆ. ಮೊದಲ ದಿನ ಟಾರ್ಗೆಟ್ ಗಿಂತ ಹೆಚ್ಚು ಟೆಸ್ಟಿಂಗ್ ಮಾಡಿದ್ದೇವೆ. ಆರೋಗ್ಯ ಇಲಾಖೆ ಸೂಚನೆಯಂತೆ ಲ್ಯಾಬ್ ಗೆ ರವಾನೆಯಾಗ್ತಿದೆ. ಆರಂಭದಲ್ಲಿ ಸ್ವಲ್ಪ ಸಮಸ್ಯೆಯಾಗಿತ್ತು. ಆದರೆ ಅದನ್ನು ಸರಿಪಡಿಸಿ ಟೆಸ್ಟಿಂಗ್ ನಡೆಸಲಾಗ್ತಿದೆ ಎಂದರು.
ಹೊಸ ವರ್ಷಾಚರಣೆಗೆ ನೂತನವಾಗಿ ಗೈಡ್‌ಲೈನ್ ವಿಚಾರ ಸಂಬಂಧ ಮಾತನಾಡಿದ ಆಯುಕ್ತರು, ಈಗಾಗಲೇ ಪೊಲೀಸರಿಂದ ಸಭೆ ನಡೆಸಲಾಗಿದೆ. 27ನೇ ತಾರೀಕು ತಾಂತ್ರಿಕ ಸಲಹಾ ಸಮಿತಿಯಿಂದ ಸಭೆ ಇದೆ. ಈ ಸಭೆ ಬಳಿಕ ಏನು ನಿರ್ಧಾರ ಆಗುತ್ತೆ ನೋಡಬೇಕಿದೆ. ಪೊಲೀಸ್ ಇಲಾಖೆ, ತಾಂತ್ರಿಕ ಸಲಹಾ ಸಮಿತಿ, ಪಾಲಿಕೆ ಸೇರಿ ಗೈಡ್ ಲೈನ್ ರೆಡಿ ಮಾಡ್ತೀವೆ. ಸಭೆಯಲ್ಲಿ ನಿರ್ಧರಿಸಿದ ಬಳಿಕ ಗೈಡ್‌ಲೈನ್ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.
ತಾಕತ್ತು ಇದ್ರೆ ಹಿಂದೂ ರಾಷ್ಟ್ರವಾಗೋದನ್ನು ತಡೆಯಲಿ: ಸಿಎಂ ಸಿದ್ದರಾಮಯ್ಯಗೆ ಸಂಸದ ಅನಂತಕುಮಾರ ಹೆಗಡೆ ಸವಾಲು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ