ಉಸ್ತುವಾರಿ ಸಚಿವರ ಹೆಸರಲ್ಲಿ ಹಣ ವಸೂಲಿ: ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷನ ವಿರುದ್ಧ ದೂರು

By Ravi Janekal  |  First Published Nov 4, 2023, 2:26 PM IST

ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಹಣ ವಸೂಲಿ ಮಾಡಿರುವ ಆರೋಪ ಹಿನ್ನೆಲೆ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿ ಎಂಟು ಜನರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಹುಬ್ಬಳ್ಳಿ (ನ.4): ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಹಣ ವಸೂಲಿ ಮಾಡಿರುವ ಆರೋಪ ಹಿನ್ನೆಲೆ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿ ಎಂಟು ಜನರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕರ್ನಾಟಕ ರಾಜ್ಯೋತ್ಸವ ವೇಳೆ ನಡೆದಿರುವ ಪ್ರಕರಣ. ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂ. ಇಲ್ಲದಿದ್ರೆ ಉಸ್ತುವಾರಿ ಸಚಿವರಿಗೆ ಹೇಳಿ ಅಂಗಡಿ ಮುಚ್ಚಿಸುತ್ತೇವೆ ಎಂದು ಉದ್ಯಮಿ ವಿಜಯ ಅಳಗುಂಡಗಿಯವರಿಗೆ  ಬೆದರಿಕೆ ಹಾಕಿರುವ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ.

Tap to resize

Latest Videos

 

ಸುಧಾಮೂರ್ತಿ ಹೆಸರಲ್ಲಿ ಎನ್‌ಆರ್‌ಐಗಳಿಂದ ಹಣ ವಸೂಲಿ; ಆರೋಪಿ ಅರುಣ್ ಸುದರ್ಶನ್ ಬಂಧನ

 ಕಳೆದ ಎರಡು ಮೂರು ವರ್ಷಗಳಿಂದಲೂ ಮಂಜುನಾಥ ಲೂತಿಮಠ ಕನ್ನಡ ಸಂಘಟನೆ ಹೆಸರಲ್ಲಿ ಸಹಚರರೊಂದಿಗೆ ಬಂದು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನಗರದ ಬಟರ್‌ ಮಾರ್ಕೆಟ್‌, ಜವಳಿ ಸಾಲ, ಉಳ್ಳಾಗಡ್ಡಿ ಓಣಿ ವ್ಯಾಪರಸ್ಥರಿಗೆ ಹೆದರಿಸಿ ₹3 ಲಕ್ಷ ಹಣ ವಸೂಲಿ ಮಾಡಿದ್ದಾರೆ. ಕಳೆದ ತಿಂಗಳು ಅಕ್ಟೋಬರ್‌ 26ರಂದು ಉಳ್ಳಾಗಡ್ಡಿಮಠದ ಬಳಿಯ ನಿಖಿತಾ ಪ್ಲಾಸ್ಟಿಕ್‌ ಅಂಗಡಿ ಬಳಿ ಉದ್ಯಮಿ ವಿಜಯ ಅವರನ್ನು ಕರೆಸಿಕೊಂಡು ರಾಜ್ಯೋತ್ಸವಕ್ಕೆ ₹2 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಕೆಐಎಡಿಬಿ ಹಂಚಿಕೆದಾರರಿಂದ 4,248 ಕೋಟಿ ರೂ. ಬಾಕಿ: ನಾಲ್ಕು ತಿಂಗಳಲ್ಲಿ ಹಣ ವಸೂಲಿಗೆ ಸಚಿವರ ಸೂಚನೆ

ಅಷ್ಟು ಸಾಲದೆಂಬಂತೆ ಪ್ರತಿ ಮೂರು ತಿಂಗಳಿಗೆ ನೀಡಬೇಕಾದ ₹1.70 ಲಕ್ಷ ಕಡ್ಡಾಯವಾಗಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆಂದು ಧಮ್ಕಿ ಹಾಕಿದ್ದಾರೆ. ಹೀಗಾಗಿ ಕನ್ನಡ ಸಂಘಟನೆ ಹೆಸರಲ್ಲಿ ಲೂಟಿ ಮಾಡುವುದನ್ನೇ ಕಾಯಕ ಮಾಡಿಕೊಂಡಿರುವ ಮಂಜುನಾಥ ಲೂತಿಮಠ  ಮತ್ತವನ ಸಹಚರರಾದ ರಾಹುಲ್‌, ಅಮಿತ್‌, ಪ್ರವೀಣ, ಬಸವರಾಜ, ಬಾಲು, ಪ್ರಕಾಶ ಮತ್ತು ವಿಜಯ ವಿರುದ್ಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ.

click me!