
ಬೆಂಗಳೂರು (ಅ.30): ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್, ನಟಿ ಹೇಮಾ ಚೌಧರಿ ಸೇರಿದಂತೆ ಒಟ್ಟು 69 ಮಂದಿಗೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ. ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2024ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು 69 ಸಾಧಕರ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಲಾದ ಪಟ್ಟಿಯಲ್ಲಿ ಸಾಧಕರ ಹೆಸರು, ಕ್ಷೇತ್ರ ಮತ್ತು ಅವರ ಜಿಲ್ಲೆಯನ್ನು ತಿಳಿಸಲಾಗಿದೆ.
ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1 575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳಲಾಗಿದೆ. ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ - 2024
ಕ್ಷೇತ್ರ-ಜಾನಪದ
ಇಮಾಮಸಾಬ ಎಮ್ ವಲ್ಲೆಪ್ಪನವರ- ಧಾರವಾಡ
ಅಕ್ಕ ರಾಮಣ್ಣ- ಬಳ್ಳಾರಿ
ಕುಮಾರಯ್ಯ- ಹಾಸನ
ವೀರಭದ್ರಯ್ಯ - ಚಿಕ್ಕಬಳ್ಳಾಪುರ
ನರಸಿಂಹಲು (ಅಂಧ ಕಲಾವಿದ) - ಬೀದರ್
ಬಸವರಾಜ ಸಂಗಪ್ಪ ಹಾರಿವಾಳ- ವಿಜಯಪುರ
ಶ್ರೀಮತಿ ಎಸ್ ಜಿ ಲಕ್ಷ್ಮೀದೇವಮ್ಮ -ಚಿಕ್ಕಬಳ್ಳಾಪುರ
ಪಿಚ್ಚಳ್ಳಿ ಶ್ರೀನಿವಾಸ- ಕೋಲಾರ
ಲೋಕಯ್ಯ ಶೇರ (ಭೂತಾರಾಧನೆ)- ದಕ್ಷಿಣ ಕನ್ನಡ
ಕ್ಷೇತ್ರ - ಚಲನಚಿತ್ರ /ಕಿರುತೆರೆ
ಶ್ರೀಮತಿ ಹೇಮಾ ಚೌದರಿ- ಬೆಂಗಳೂರು ನಗರ
ಎಂ.ಎಸ್.ನರಸಿಂಹಮೂರ್ತಿ- ಬೆಂಗಳೂರು ನಗರ
ಕ್ಷೇತ್ರ-ಸಂಗೀತ
ಶ್ರೀ ಪಿ.ರಾಜಗೋಪಾಲ- ಮಂಡ್ಯ
ಎ.ಎನ್ ಸದಾಶಿವಪ್ಪ - ರಾಯಚೂರು
ಕ್ಷೇತ್ರ - ನೃತ್ಯ
ವಿದುಷಿ ಲಲಿತಾ ರಾವ್ - ಮೈಸೂರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ