
ಗೋಕರ್ಣ (ಫೆ.20): ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ ಗೋಕರ್ಣಕ್ಕೆ ಗುರುವಾರ ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಪದ್ಮಶ್ರೀ ಡಾ. ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಗುರುವಾರ ಗೋಕರ್ಣದ ಪವಿತ್ರ ಮಹಾಬಲೇಶ್ವರ ಮಂದಿರಕ್ಕೆ ಭೇಟಿ ನೀಡಿದರು. ತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ ಅವರು, ಕ್ಷೇತ್ರದ ಮುಖ್ಯ ದೈವವಾದ ಆತ್ಮಲಿಂಗದ ದರ್ಶನ ಪಡೆದು ಪುನೀತರಾದರು. ದೇವಾಲಯದ ವತಿಯಿಂದ ಅವರಿಗೆ ಆತ್ಮಲಿಂಗದ ವಿಶೇಷ ಪ್ರಸಾದ ನೀಡಿ ಗೌರವಿಸಲಾಯಿತು.
ನಟಿಯ ಭೇಟಿಯ ಸಂದರ್ಭದಲ್ಲಿ ಮಂದಿರದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯ ಹೆಗಡೆ ಹಾಗೂ ವೇದಮೂರ್ತಿ ಗಣಪತಿ ಜಂಭೆ ಅವರು ಉಪಸ್ಥಿತರಿದ್ದು, ಭಾರತಿ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಕುಟುಂಬ ಸದಸ್ಯರೊಂದಿಗೆ ದೇವಸ್ಥಾನದ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾದ ನಟಿಯ ಮುಖದಲ್ಲಿ ಭಕ್ತಿಭಾವ ಎದ್ದು ಕಾಣುತ್ತಿತ್ತು.
ಲಕ್ಷಾಂತರ ಅಭಿಮಾನಿಗಳ ಮನಗೆದ್ದಿರುವ ಭಾರತಿ ವಿಷ್ಣುವರ್ಧನ್ ಅವರು ದೇವಸ್ಥಾನಕ್ಕೆ ಬಂದಿರುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪ್ರವಾಸಿಗರು ದೇವಸ್ಥಾನದ ಆವರಣದಲ್ಲಿ ಜಮಾಯಿಸಿದರು. ತಮ್ಮ ನೆಚ್ಚಿನ ನಟಿಯ ಜೊತೆ ಫೋಟೋ ಮತ್ತು ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದ ಕಾರಣ, ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ನಟಿಯ ರಕ್ಷಣೆಗಾಗಿ ಪೊಲೀಸರು ಹರಸಾಹಸ ಪಡಬೇಕಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ