Bengaluru Road Rage Case: ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಗೂಂಡಾಗಿರಿ: ಕೊನೆಗೂ ಎಫ್‌ಐಆರ್ ದಾಖಲು

Published : Apr 23, 2025, 09:02 AM ISTUpdated : Apr 23, 2025, 10:59 AM IST
Bengaluru Road Rage Case: ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಗೂಂಡಾಗಿರಿ: ಕೊನೆಗೂ ಎಫ್‌ಐಆರ್ ದಾಖಲು

ಸಾರಾಂಶ

ಬೆಂಗಳೂರಿನಲ್ಲಿ ಸೋಮವಾರ ನಡೆದಿದ್ದ ರಸ್ತೆ ಹೊಡೆದಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕನ್ನಡಿಗ ಬೈಕ್ ಸವಾರನಿಂದ ತನ್ನ ಮೇಲೆ ಹಲ್ಲೆಯಾಯಿತು ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮಾಡಿದ್ದ ಆರೋಪ ಸುಳ್ಳು ಎಂದು ಸಿಸಿಟೀವಿ ದೃಶ್ಯಾವಳಿಗಳಲ್ಲಿ ಬಹಿರಂಗವಾಗಿದೆ.

ಬೆಂಗಳೂರು (ಏ.23): ಬೆಂಗಳೂರಿನಲ್ಲಿ ಸೋಮವಾರ ನಡೆದಿದ್ದ ರಸ್ತೆ ಹೊಡೆದಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕನ್ನಡಿಗ ಬೈಕ್ ಸವಾರನಿಂದ ತನ್ನ ಮೇಲೆ ಹಲ್ಲೆಯಾಯಿತು ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮಾಡಿದ್ದ ಆರೋಪ ಸುಳ್ಳು ಎಂದು ಸಿಸಿಟೀವಿ ದೃಶ್ಯಾವಳಿಗಳಲ್ಲಿ ಬಹಿರಂಗವಾಗಿದೆ. ಕನ್ನಡಿಗ ಬೈಕ್ ಸವಾರನ ಮೇಲೆ ಅತ್ಯಂತ ಕ್ರೂರವಾಗಿ ವಿಂಗ್ ಕಮಾಂಡರೇ ಹಲ್ಲೆ ಮಾಡಿರುವುದು ದೃಶ್ಯಗಳಿಂದ ಸಾಬೀತಾದ ಹಿನ್ನೆಲೆಯಲ್ಲಿ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಅತಿದೊಡ್ಡ ಅಭಿಯಾನವನ್ನೇ ನಡೆಸಿದ್ದಾರೆ. ಕನ್ನಡಿಗರ ಘನತೆಗೆ ಮಸಿ ಬಳಿಯಲು ಯತ್ನಿಸಿದ ಶಿಲಾದಿತ್ಯ ಬೋಸ್‌ನನ್ನು ಬಂಧಿಸಬೇಕು ಎಂಬ ಆಗ್ರಹ ಮುಗಿಲುಮುಟ್ಟಿದೆ. 

ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದೆ. ಆದರೆ ಅದರಲ್ಲಿ ವಿಂಗ್ ಕಮಾಂಡರ್ ಹೆಸರಿನ ಬದಲು ಕಾರಿನ ಸಂಖ್ಯೆ ಆಧರಿಸಿ ದಾಖಲಿಸದಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ, ಠಾಣಾ ಜಾಮೀನಿನ ಮೇರೆಗೆ ಬಂಧಿತ ಬೈಕ್ ಸವಾರ, ಕನ್ನಡಿಗ ವಿಕಾಸ್ ಕುಮಾರ್ ಮಂಗಳವಾರ ಬಿಡುಗಡೆಗೊಂಡಿದ್ದಾರೆ. ಕನ್ನಡಿಗ ಬೈಕ್‌ ಸವಾರನ ಮೇಲೆ ಗೂಂಡಾಗಿರಿ ನಡೆಸಿದ ಆರೋಪ ಹೊತ್ತಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಪತ್ನಿ ಮಧುಮಿತಾ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇನ್ನೊಂದೆಡೆ ಕನ್ನಡಿಗನ ಮೇಲೆ ಭಾಷಾ ತಾರತಮ್ಯದ ಸುಳ್ಳು ಆರೋಪ ಮಾಡಿದ್ದ ಶಿಲಾದಿತ್ಯ ವಿರುದ್ಧ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿವಿಧ ಪಕ್ಷಗಳ ಹಲವು ಮುಖಂಡರು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕನ್ನಡಿಗರ ತಂಟೆಗೆ ಬಂದರೆ ಜೋಕೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಾಮಾಜಿಕ ಜಾಲತಾಣದಲ್ಲೂ ಕನ್ನಡಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಗಲಾಟೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಂಗ್ ಕಮಾಂಡರ್‌ಲಾದಿತ್ಯ ಮಾಡಿರುವ ಆರೋ ಪಗಳು ಸತ್ಯಕ್ಕೆ ದೂರವಾಗಿವೆ ಎಂದು ಖುದ್ದು ನಗರ ಪೊಲೀಸ್ ಆಯುಕ್ತ ದಯಾನಂದ್ ಕೂಡ ಸ್ಪಷ್ಟಪಡಿ ಸಿದ್ದಾರೆ. ನನ್ನ ಮೇಲೆ ವಿಂಗ್ ಕಮಾಂಡರ್‌ಸುಳ್ಳು ಆರೋಪ ಹೊರಿಸಿದ್ದಾರೆ. ಇದರಿಂದ ನಾನು ಕೆಲಸ ಕಳೆದುಕೊಳ್ಳುವ ಸಂಕಷ್ಟ ಎದುರಾಗಿದೆ ಎಂದು ಸಂತ್ರಸ್ತ ವಿಕಾಸ್ ಕುಮಾರ್‌ನೊಂದು ನುಡಿದ್ದಾರೆ. ವಿಂಗ್ ಕಮಾಂಡರ್‌ಗೂ ಸಾಮಾನ್ಯ ಜನರಿಗೆ ಒಂದೇ ಕಾನೂನಿರೋದು. ನನ್ನ ಮಗನ ಮೇಲೆ ಹಲ್ಲೆ ನಡೆಸಿರುವ ವಿಂಗ್‌ ಕಮಾಂಡರ್‌ನನ್ನು ಬಂಧಿಸಬೇಕು ಎಂದು ವಿಕಾಸ್ ಕುಮಾರ್‌ತಾಯಿ ಜ್ಯೋತಿ ಆಗ್ರಹಿಸಿದ್ದಾರೆ.

ಆಗಿದ್ದೇನು?: ಹಳೇ ಮದ್ರಾಸ್ ರಸ್ತೆಯ ಗ್ಯಾಂಡ್ ಗೋಪಾಲನ್ ಮಾಲ್ ಬಳಿ ವಾಹನ ಹಿಂದಿಕ್ಕುವ ವಿಚಾರವಾಗಿ ವಿಂಗ್ ಕಮಾಂಡರ್‌ಲಾದಿತ್ಯ ದಂಪತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ವಿಕಾಸ್ ಮಧ್ಯೆ ಸೋಮವಾರ ಗಲಾಟೆಯಾಗಿತ್ತು. ಈ ವೇಳೆ ಬೈಕ್ ಸವಾರನ ಮೇಲೆ ಮನಬಂದಂತೆ ಥಳಿಸಿ ವಿಂಗ್ ಕಮಾಂಡರ್ ರೋಷಾವೇಷ ತೋರಿಸಿ ದ್ದರು. ಈ ಹಲ್ಲೆಯ ಸಿಸಿಟಿವಿ ಕ್ಯಾಮೆರಾದ ವಿಡಿ ಯೋಗಳು ಬಹಿರಂಗವಾಗಿ ಕಮಾಂಡರ್‌ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ತಮ್ಮ ತಂದೆಯ ಶಸ್ತ್ರಚಿಕಿತ್ಸೆ ನಿಮಿತ್ತ ಕೋಲ್ಕತ್ತಾಕ್ಕೆ ವಿಮಾನದಲ್ಲಿ ಕಮಾಂಡರ್‌ ಲಾದಿತ್ಯ ತೆರಳಬೇಕಿತ್ತು. ಹೀಗಾಗಿ ತಮ್ಮ ಪತಿಯನ್ನು ಹಳೇ ಮದ್ರಾಸ್ ರಸ್ತೆಯ ಗೋಪಾಲನ್ ಮಾಲ್ ಸಮೀಪದ ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಲು ಸೋಮವಾರ ಬೆಳಗ್ಗೆ 6.30ರ ವೇಳೆ ಕಾರಿನಲ್ಲಿ ಮಧುಮಿತಾ ಬಂದಿದ್ದರು. 

ಅದೇ ವೇಳೆ ಹಳೇ ಮದ್ರಾಸ್ ರಸ್ತೆಯಲ್ಲಿ ಖಾಸಗಿ ಕಂಪನಿ ಉದ್ಯೋಗಿ ವಿಕಾಸ್ ಕುಮಾರ್‌ ಅವರು ಬೈಕ್‌ನಲ್ಲಿ ಬಂದಿದ್ದಾರೆ. ತಮ್ಮ ಕಾರಿಗೆ ಡಿಕ್ಕಿ ಹೊಡೆ ಯುವಂತೆ ಅತಿವೇಗವಾಗಿ ಬೈಕ್ ಓಡಿಸಿಕೊಂಡು ಬಂದಿದ್ದಾನೆ ಎಂದು ಆರೋಪಿಸಿ ಶಿಲಾದಿತ್ಯ ಪತ್ನಿ ಆಕ್ಷೇಪಿಸಿದ್ದಾರೆ. ಈ ಮಾತಿಗೆ ಬೈಕ್ ಸವಾರ ವಿಕಾಸ್ ತಿರುಗೇಟು ನೀಡಿದ್ದಾರೆ. ಈ ಹಂತದಲ್ಲಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಆಗ ಕೆರಳಿದ ವಿಂಗ್ ಕಮಾಂಡ್ ಶಿಲಾದಿತ್ಯ, ಕಾರಿ ನಿಂದಿಳಿದು ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ದ್ದಾರೆ. ಕಾಲಿನಿಂದ ಒದ್ದು ಮುಖಕ್ಕೆ ಗುದ್ದಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಲಾಗಿದೆ. 

ಇದಕ್ಕೆ ಸವಾರ ಸಹ ಪ್ರತಿರೋಧ ತೋರಿದ್ದಾರೆ. ಕೊನೆಗೆ ಸ್ಥಳೀಯರ ಮಧ್ಯಪ್ರವೇಶದಿಂದ ಪರಿಸ್ಥಿತಿ ಶಾಂತವಾಗಿದೆ. ಈ ಹಲ್ಲೆ ಸಂಬಂಧ ದೂರು-ಪ್ರತಿ ದೂರು ದಾಖಲಾಗಿದ್ದವು. ವಿಂಗ್ ಕಮಾಂಡರ್ ದೂರು ಆಧರಿಸಿ ಬೈಕ್‌ ಸವಾರ ವಿಕಾಸ್ ಕುಮಾರ್ ನನ್ನು ಸೋಮವಾರ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ಇತ್ತ ಬೈಕ್ ಸವಾರನ ದೂರು ಆಧರಿಸಿ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಆರೋಪಿ ಕಮಾಂಡ‌ ದಂಪತಿ ತಲೆಮರೆಸಿಕೊಂಡಿದ್ದಾರೆ. ಬೈಕ್‌ ಸವಾರನ ಪರವಾಗಿ ರೂಪೇಶ್ ರಾಜಣ್ಣ ಸೇರಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಸಂಜೆ ಯಿಂದಲೇ ನಿರಂತರವಾಗಿ ಕಾನೂನು ಹೋರಾಟ ನಡೆಸಿದ್ದರು. ಕೊನೆಗೆ ಠಾಣಾ ಮಂಜೂರು ಮಾಡಿ ವಿಕಾಸ್‌ನನ್ನು ಪೊಲೀಸರು ಮಂಗಳವಾರ ಬಿಡುಗಡೆಗೊಳಿಸಿದ್ದಾರೆ. 

ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆಗೆ ತಡೆ, ರಾಜ್ಯದಲ್ಲಿ ಬೀಳುತ್ತಾ ಬ್ರೇಕ್‌?

ವಿಂಗ್ ಕಮಾಂಡ್ ಪತ್ನಿಗೆ ನೋಟಿಸ್: ಬೈಕ್‌ ಸವಾರನ ಮೇಲಿನ ಹಲ್ಲೆ ಪ್ರಕರಣ ಸಂಬಂಧ ವಿಂಗ್ ಕಮಾಂಡರ್‌ಲಾದಿತ್ಯ ಪತ್ನಿ ಮಧುಮಿತಾ ಅವರಿಗೆ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರ ತನಿಖೆ ಬಿಸಿ ತಟ್ಟಿದೆ. ಈ ಗಲಾಟೆ ಸಂಬಂಧ ಕಾರಿನ ಡ್ಯಾಶ್ ಕ್ಯಾಮೆರಾ ದಲ್ಲಿ ಸೆರೆಯಾಗಿರುವ ದೃಶ್ಯಾವಳಿ ಹಾಗೂ ತಾವು ಮೊಬೈಲ್ ಚಿತ್ರೀಕರಿಸಿದ್ದರೆ ದೃಶ್ಯಾವಳಿ ಸೇರಿದಂತೆ ಕೆಲ ಮಾಹಿತಿ ಕೋರಿ ಮಧುಮಿತಾ ಅವರಿಗೆ ನೋಟಿಸ್ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ ಶಿಲಾದಿತ್ಯ ದಂಪತಿ ನಾಪತ್ತೆಯಾಗಿಲ್ಲ. ಸಿ.ವಿ.ರಾಮನ್ ನಗರದಲ್ಲೇ ಮನೆಯಲ್ಲೇ ಶಿಲಾದಿತ್ಯ ಪತ್ನಿ ಮಧುಮಿತಾ ಇದ್ದಾರೆ. ತಮ್ಮ ತಂದೆ ಶಸ್ತ್ರಚಿಕಿತ್ಸೆ ಸಲುವಾಗಿ ಕೋಲ್ಕತ್ತಾಗೆ ವಿಂಗ್ ಕಮಾಂಡರ್ ತೆರಳಿದ್ದಾರೆ. ಕೋಲ್ಕತ್ತಾದಿಂದ ಮರಳಿದ ನಂತರ ಅವರನ್ನು ವಿಚಾರಣೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Kannada Prabha Big Impact: ರೈಲ್ವೆ ಬಡ್ತಿ ಪರೀಕ್ಷೆ ರದ್ದು; ಕನ್ನಡಿಗರ ಹೋರಾಟಕ್ಕೆ ಮಣಿದ ಅಧಿಕಾರಿಗಳು!
Drug Smuggling ಪೋಟೋ ಫ್ರೇಮ್‌ನಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 37 ಲಕ್ಷದ ಗಾಂಜಾ ಜಪ್ತಿ, ಇನ್ನೊಂದು ಘಟನೆ ಭಯಂಕರ!