ತಾಳ್ಮೆ, ಸಹನೆ, ಪರೋಪಕಾರಿತನ ಕನ್ನಡಗರ ಮೂಲ ಗುಣ: ಇತಿಹಾಸಕಾರ ಧರ್ಮೇಂದ್ರ ಕುಮಾರ್‌

Published : Nov 24, 2025, 11:00 PM IST
Kannadigas Core Traits Patience Altruism Dharmendra Kumar

ಸಾರಾಂಶ

ಬೆಂಗಳೂರಿನ ಪೂರ್ವ ಹೈಲ್ಯಾಂಡ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಮಯ ಭಾಷೆ ಕನ್ನಡವಾಗಲಿ" ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ವಿಶೇಷತೆಯೆಂದರೆ, ಸಾವಿರಕ್ಕೂ ಹೆಚ್ಚು ಕನ್ನಡೇತರ ನಿವಾಸಿಗಳು ಒಟ್ಟಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದು.

ಬೆಂಗಳೂರೂ (ನ.24): ತಾಳ್ಮೆ, ಸಹನೆ, ದೇಶಸೇವೆ, ಪರೋಪಕಾರಿ ನಡತೆ ಕನ್ನಡಿಗರ ಮೂಲ ಗುಣ, ಸದಾ ಮತ್ತೊಬ್ಬರ ಭಾವನೆಗೆ ಸ್ಪಂದಿಸುವುದು ನಮ್ಮ ನೆಲದ ಸಂಸ್ಕೃತಿ ಎಂದು ಕನ್ನಡ ಇತಿಹಾಸಕಾರ ಧರ್ಮೇಂದ್ರ ಕುಮಾರ್‌ ಅಭಿಪ್ರಾಯಪಟ್ಟರು.

ಪೂರ್ವ ಹೈಲ್ಯಾಂಡ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ನಿವಾಸಿಗಳೇ ಸೇರಿ "ಮಾತೃ ಭಾಷೆ ಯಾವುದೇ ಇರಲಿ, ಸ್ನೇಹಮಯ ಭಾಷೆ ಕನ್ನಡವಾಗಲಿ" ಶೀರ್ಷಿಕೆಯಡಿ "ಕನ್ನಡ ರಾಜ್ಯೋತ್ಸವ"ದ ವನ್ನು ಅದ್ಧೂರಿಯಾಗಿ ಆಚರಿಸಿದರು, ಈ ವೇಳೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಕೇವಲ ಭಾಷೆಯಲ್ಲ, ಅದೊಂದು ಭಾವನೆ, ನಮ್ಮ ಭಾಷೆ ನಮ್ಮವರ ನಡೆ, ನುಡಿಯನ್ನೂ ಪ್ರತಿಬಿಂಬಿಸುತ್ತದೆ. ಕನ್ನಡಿಗರೆಂದರೇ ನೆನಪಾಗುವುದೇ ತಾಳ್ಮೆ, ಸಹನೆ, ಪರೋಪಕಾರಿ ಗುಣ ಹೊಂದಿರುವ ಮನಸ್ಸುಗಳು ಎಂದು. ಎಲ್ಲರೂ ನಮ್ಮವರೇ ಎಂದು ಅಪ್ಪಿಕೊಂಡು ನಮ್ಮ ನಾಡಿನಲ್ಲಿ ಅವರಿಗೂ ಸ್ಥಳ ಹಾಗೂ ಅವಕಾಶಗಳನ್ನು ನೀಡುತ್ತಾ, ಅವರನ್ನೂ ನಮ್ಮವನ್ನಾಗಿಸಿಕೊಳ್ಳುವ ಗುಣವಿರುವವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕ ಎಸ್‌.ಎನ್‌. ಸೀತಾರಾಮ್‌, ಗಾಯಕ ಶಶಿಧರ್‌ ಕೋಟೆ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡೇತರ ನಿವಾಸಿಗಳಿಂದ ಕನ್ನಡ ರಾಜ್ಯೋತ್ಸವ:

ಈ ಕನ್ನಡ ರಾಜ್ಯೋತ್ಸವದ ವಿಶೇಷವೆಂದರೆ, ಕನ್ನಡೇತರರು ಸೇರಿ ಆಚರಣೆ ಮಾಡಲಾಗಿದೆ. ೩ ಸಾವಿರಕ್ಕೂ ಹೆಚ್ಚು ನಿವಾಸಿಗಳಿರುವ ಪೂರ್ವ ಹೈಲ್ಯಾಂಡ್‌ ಅಪಾರ್ಟ್‌ಮೆಂಟ್‌ನಲ್ಲಿ ೧ ಸಾವಿರಕ್ಕೂ ಹೆಚ್ಚು ಕನ್ನಡೇತರ ನಿವಾಸಿಗಳು ಒಟ್ಟುಗೂಡಿ ರಾಜ್ಯೋತ್ಸವವನ್ನು ಪ್ರತಿ ವರ್ಷ ತುಂಬೂ ಪ್ರೀತಿಯಿಂದ ಆಚರಿಸುತ್ತಾ ಬಂದಿದ್ದಾರೆ. ಅಷ್ಟೆ ಅಲ್ಲದೆ, ಇಲ್ಲಿರುವ ಕನ್ನಡೇತರರು ಕನ್ನಡ ಭಾಷೆ ಕಲಿಯುವ ಮೂಲಕ ಕನ್ನಡಕ್ಕೆ ಗೌರವ ಸಮರ್ಪಣೆ ಮಾಡುತ್ತಾ ಬಂದಿದ್ದಾರೆ. ಮಕರಂದ ಸಂಸ್ಥೆ ಸಹಯೋಗದಲ್ಲಿ ಇಲ್ಲಿ, ಪ್ರತಿನಿತ್ಯ ಕನ್ನಡ ಕಲಿಕೆ ನಡೆಯುತ್ತಿದೆ.

ಇನ್ನು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಪಾರ್ಟ್‌ಮೆಂಟ್‌ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮ ಜರುಗಿದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ