
ಬೆಂಗಳೂರು (ಸೆ.15) : ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ನೀತಿ, ಹಿಂದಿ ದಿವಸ್ ಆಚರಣೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಭಾರತದ ಐಕ್ಯತೆ ಒಡೆಯುತ್ತಿರುವ ಹಿಂದಿ ದಿವಸ್ ಆಚರಣೆಯನ್ನು ಸ್ಥಗಿತಗೊಳಿಸಲು ಆಗ್ರಹಿಸಿದರು. ಕೇಂದ್ರ ಸರ್ಕಾರ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರುತ್ತಿದ್ದು, ಸಮಸ್ತ 7 ಕೋಟಿ ಕನ್ನಡಿಗರ ಪರವಾಗಿ ವಿರೋಧಿಸಿ ಕರಾಳ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಘೋಷಿಸಿದರು.
Hindi Diwas: ರಾಜ್ಯದಲ್ಲಿ ಹಿಂದಿ ದಿವಸ ಆಚರಿಸುವವರು ಅಭಿಮಾನಶೂನ್ಯರು
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಿತು. ಟಿ.ಎ.ನಾರಾಯಣ ಗೌಡ, ಅರುಣ ಜಾವಗಲ್, ಸಣ್ಣೀರಪ್ಪ ಸೇರಿ ಹಲವರಿದ್ದರು. ಮಲ್ಲೇಶ್ವರ ಮೇಲ್ಸೇತುವೆಯ ಕುವೆಂಪು ಪ್ರತಿಮೆ ಎದುರು ಕರ್ನಾಟಕ ರಕ್ಷಣಾ ವೇದಿಕೆ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದು, ಹಿಂದಿ ಭೂತ ಪ್ರತಿಕೃತಿ ಸುಡುವ ಮೂಲಕ ಪ್ರತಿಭಟನೆ ನಡೆಸಿತು. ಡಾ.ರಾಜ್‌ಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿ ಇತರರಿದ್ದರು.
ದಾವಣಗೆರೆ, ಬಳ್ಳಾರಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ಶಿಗ್ಗಾಂವಿ, ಕೊಪ್ಪಳ, ಬಳ್ಳಾರಿ ಜಿಲ್ಲೆ ಕಂಪ್ಲಿ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಕನಕಪುರ, ತುಮಕೂರು, ಸೇರಿದಂತೆ ಹಲವೆಡೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಬೈಕ್ ರಾರಯಲಿ ನಡೆಸಲಾಯಿತು. ಶಿವಮೊಗ್ಗ, ದಾವಣಗೆರೆ, ಧಾರವಾಡ, ರಾಯಚೂರು, ಬಳ್ಳಾರಿ, ಹೊಸಪೇಟೆ, ಸಿರುಗುಪ್ಪ ಮತ್ತು ಕೊಪ್ಪಳ ಜಿಲ್ಲೆ ಕನಕಗಿರಿಯಲ್ಲಿ ಜೆಡಿಎಸ್ ವತಿಯಿಂದ ಪ್ರತಿಭಟನಾ ಮೆರವಣಿಗೆಗಳು ನಡೆದವು.Hindi Diwas: ''ಅಧಿಕೃತ ಭಾಷೆ ಹಿಂದಿ ದೇಶವನ್ನು ಒಗ್ಗೂಡಿಸುತ್ತದೆ'' ಎಂದ ಅಮಿತ್ ಶಾ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ