Bengaluru: ಎಂಇಎಸ್‌ ವಿರುದ್ಧ ಪ್ರತಿಭಟನೆ ಮಾಡಲು ಬೆಳಗಾವಿಗೆ ಹೊರಟ ಕನ್ನಡಿಗರು

By Sathish Kumar KHFirst Published Dec 4, 2022, 5:49 PM IST
Highlights

ರಾಜ್ಯದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಪುಂಡರಿಗೆ ಕುಮ್ಮಕ್ಕು ನೀಡುತ್ತಿರುವ ಮಹಾರಾಷ್ಟ್ರ ಸಚಿವರ ವಿರುದ್ಧ ಪ್ರತಿಭಟನೆ ಮಾಡಲು ಬೆಂಗಳೂರಿನಿಂದ ಬೆಳಗಾವಿಗೆ ನೂರಾರು ಸಂಖ್ಯೆ ಯ ಕಾರ್ಯಕರ್ತರು ಹೊರಟಿದ್ದಾರೆ. ನಾಳೆ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ ಎಂಇಎಸ್‌ ಪುಂಡಾಟಿಕೆಗೆ ಕಡಿವಾಣ ಹಾಕುವಂತೆ ಮನವಿ ಸಲ್ಲಿಸಲಿದ್ದಾರೆ.

ಬೆಂಗಳೂರು (ಡಿ.4) : ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಪುಂಡರಿಗೆ ಕುಮ್ಮಕ್ಕು ನೀಡುತ್ತಿರುವ ಮಹಾರಾಷ್ಟ್ರ ಸಚಿವರ ವಿರುದ್ಧ ಪ್ರತಿಭಟನೆ ಮಾಡಲು ಬೆಂಗಳೂರಿನಿಂದ ಬೆಳಗಾವಿಗೆ ನೂರಾರು ಸಂಖ್ಯೆ ಯ ಕಾರ್ಯಕರ್ತರು ಹೊರಟಿದ್ದಾರೆ. ನಾಳೆ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ ಎಂಇಎಸ್‌ ಪುಂಡಾಟಿಕೆಗೆ ಕಡಿವಾಣ ಹಾಕುವಂತೆ ಮನವಿ ಸಲ್ಲಿಸಲಿದ್ದಾರೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ಸಂಧರ್ಭದಲ್ಲಿ ಎಂಇಎಸ್ ಪುಂಡರು ಮತ್ತೆ ಕ್ಯಾತೆ ತೆಗೆಯಲು ಆರಂಭಿಸಿದ್ದಾರೆ. ಇದನ್ನು ವಿರೋಧಿಸಿ ನಾಳೆ ಬೆಳಗಾವಿಯ ಚನ್ನಮ್ಮ ಸರ್ಕಲ್ ನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿವೆ. ಇಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ಹತ್ತು ಟೆಂಪೋ ಟ್ರಾವೆಲರ್ ವಾಹನಗಳಲ್ಲಿ ಬೆಳಗಾವಿಗೆ ಪ್ರಯಾಣ ಬೆಳೆಸಿದ ಸಂಘಟನೆಗಳು ನಾಳೆ ಮುಂಜಾನೆ ಹೊತ್ತಿಗೆ ಬೆಳಗಾವಿ ಪ್ರವೇಶ ಮಾಡಲಿವೆ. ನಾಳೆ ಚೆನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ನೀಡಲಿದ್ದಾರೆ.

ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ತರ್ಲೆ ಮಾಡೋಕೆ ಬಂದರೆ ಕಠಿಣ ಕ್ರಮ: ಎಡಿಜಿಪಿ ವಾರ್ನಿಂಗ್

ಕಳೆದ ವರ್ಷ ಪುಂಡಾಟಿಕೆ: ಕಳೆದ ವರ್ಷ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರಿ ದಾಖಲಾತಿ ಪತ್ರವನ್ನು ಮರಾಠಿಯಲ್ಲಿ ನೀಡಬೇಕು ಎಂದು ಆಗ್ರಹಿಸಿ ಎಂಇಎಸ್‌ ನಾಯಕರು ಹಾಗೂ ಕಾರ್ಯಕರ್ತರು ಬೆಳಗಾವಿಯ ಸದಾರ್ಸ್‌ ಮೈದಾನದಿಂದ ರಾರ‍ಯಲಿ ನಡೆಸಿದ್ದರು.  ರಾಜ್ಯ ಸರ್ಕಾರವನ್ನು ನಾಲಾಯಕ್‌ ಸರ್ಕಾರ ಎಂದು ಘೋಷಣೆ ಕೂಗಿ ಉದ್ದಟತನ ಮೆರೆದಿದ್ದರು. ಬೆಳಗಾವಿಯಲ್ಲಿ ಮರಾಠಿಗರ ಸಂಖ್ಯೆ ಅಧಿಕವಾಗಿರುವಾಗ ಕರ್ನಾಟಕ ಸರ್ಕಾರ ಸ್ಥಳೀಯ ಭಾಷೆಗೆ ಆದ್ಯತೆ ಕೊಡುವ ಅಗತ್ಯ ಇದೆ. ಆದ್ದರಿಂದ ಸರ್ಕಾರದ ದಾಖಲಾತಿಯ ಕಾಗದ ಪತ್ರಗಳನ್ನು ಮರಾಠಿ ಭಾಷೆಯಲ್ಲಿ ನೀಡಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ಮರಾಠಿ ಭಾಷೆಯಲ್ಲಿ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿದರು. ಮಾತ್ರವಲ್ಲದೆ ಕರ್ನಾಟಕ ಸರ್ಕಾರವನ್ನು ನಾಲಾಯಕ್‌ ಸರ್ಕಾರ ಎಂದು ಹೀಗಳೆದಿದ್ದರು. ಕೂಡಲೇ ನಮ್ಮ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರ ರೂಪ ಪಡೆಯುತ್ತದೆ ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ವೇಳೆ ಎಂಇಎಸ್‌ ಪುಂಡಾಟಿಕೆಯನ್ನು ಖಂಡಿಸಲಾಗಿತ್ತು.

ಕರ್ನಾಟಕ ರಾಜ್ಯೋತ್ಸವದಂದೇ ಎಂಇಎಸ್ ಪುಂಡಾಟ: ಬೆಳಗಾವಿಯಲ್ಲಿ ಕರಾಳ ದಿನಾಚರಣೆ

ಕನ್ನಡಿಗರಿಂದ ಮರು ಹೋರಾಟ: ಬೆಳಗಾವಿಯ ಎಂಇಎಸ್‌ ಪುಂಡರಿಗೆ ಪಾಠ ಕಲಿಸುವ ಉದ್ದೇಶದಿಂದ ಬೆಂಗಳೂರು ಸೇರಿ ವಿವಿಧೆಡೆಯಿಂದ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿಗೆ ಹೋಗಿ ಚನ್ನಮ್ಮ ವೃತ್ಗತದ ಬಳಿ ಪ್ರತಿಭಟನೆ ಂಆಡಲು ಮುಂದಾದರು. ಈ ವೇಳೆ ಪ್ರತಿಭಟನೆಯಿಂದ ಗಲಾಟೆಗಳು ಸಂಭವಿಸುವ ಮುನ್ನೆಚ್ಚರಿಕೆಯಿಂದ ಪೊಲೀಸರು ಕನ್ನಡಪರ ಹೋರಾಟಗಾರರನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಕಚೇರಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು. 

ಈ ವರ್ಷ ಗಡಿ ವಿವಾದದ ಕ್ಯಾತೆ: ಕಳೆದ ವರ್ಷ ಸರ್ಕಾರದ ಸುತ್ತೋಲೆಗಳನ್ನು ಹೊರಡಿಸುವ ವಿಚಾರದಲ್ಲಿ ಕ್ಯಾತೆ ತೆಗೆದಿದದ ಎಂಎಇಸ್‌ ಪುಂಡರ ಹಾವಳಿ ಹೆಚ್ಚಿಕೊಂಡಿತ್ತು. ಆದರೆ, ಈ ವರ್ಷ ಮಹಾರಾಷ್ಟ್ರದಿಂದ ಗಡಿ ಕ್ಯಾತೆಯನ್ನು ಆರಂಭಿಸಿ ಸುಪ್ರೀಂ ಕೋರ್ಟ ಮೊರೆ ಹೋಗಿದೆ. ಚಳಿಗಾಲದ ಅಧಿವೇಶನ ವೇಳೆ ಎಂಇಎಸ್‌ ಕಾರ್ಯಕರ್ತರನ್ನು ಭೇಟಿ ಮಾಡಲು ಮಹಾರಾಷ್ಟ್ರ ಗಡಿ ಸಂರಕ್ಷಣಾ ಪ್ರಾಧಿಕಾರದ ಇಬ್ಬರು ಸಚಿವರು ಕರ್ನಾಟಕಕ್ಕೆ ಬರುವುದಾಗಿ ತಿಳಿಸಿದ್ದರು. ಆದರೆ, ಯಾವುದೇ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶಿಸಿದ್ದಾರೆ. ಈಗ ಅಧಿವೇಶನದ ವೇಳೆ ಗೊಂದಲ ಸೃಷ್ಟಿಸುವ ಬಗ್ಗೆ ಮುನ್ಸೂಚನೆ ಕಂಡುಬರುತ್ತಿದೆ.
 

click me!