ಮಿಂಟೋ ವೈದ್ಯರ ಮೇಲೆ ಕರವೇ ಕಾರ್ಯಕರ್ತೆ ಹಲ್ಲೆ..?

By Kannadaprabha NewsFirst Published Nov 2, 2019, 10:17 AM IST
Highlights

ಜುಲೈ ತಿಂಗಳಲ್ಲಿ ನಡೆದ ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ತಪ್ಪಿನಿಂದಾಗಿ ಕಣ್ಣು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮಿಂಟೋ ಆಸ್ಪತ್ರೆ ಮುಂಭಾಗ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಕಾರ್ಯಕರ್ತರು ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು(ನ.02): ಜುಲೈ ತಿಂಗಳಲ್ಲಿ ನಡೆದ ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ತಪ್ಪಿನಿಂದಾಗಿ ಕಣ್ಣು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮಿಂಟೋ ಆಸ್ಪತ್ರೆ ಮುಂಭಾಗ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಕಾರ್ಯಕರ್ತರು ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ವೈದ್ಯರ ನಿರ್ಲಕ್ಷ್ಯದಿಂದ ದೃಷ್ಟಿ ಕಳೆದುಕೊಂಡ 15 ಮಂದಿ ಸಂತ್ರಸ್ತರು ಪರಿಹಾರಕ್ಕಾಗಿ ಶುಕ್ರವಾರ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಗೆ ಕರವೇ ಮಹಿಳಾ ಘಟಕದ ಸದಸ್ಯರು ಬೆಂಬಲ ಸೂಚಿಸಿ, ಹೋರಾಟದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ತರಬೇತಿಯಲ್ಲಿದ್ದ ವೈದ್ಯರು ಆಂಗ್ಲ ಭಾಷೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಗಂಟೇಲಿ ಪೊಲೀಸ್ ತುರ್ತು ಸ್ಪಂದನೆ 112ಕ್ಕೆ ಬಂತು 50 ಸಾವಿರ ಕರೆ..!

ಇದರಿಂದ ಸಿಟ್ಟಾದ ಕರವೇ ಕಾರ್ಯಕರ್ತರು ಕನ್ನಡದಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ವೈದ್ಯರನ್ನು ಸುತ್ತುವರೆದು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ವೈದ್ಯರು ಕ್ಷಮೆ ಕೇಳುವುದಿಲ್ಲ ಎಂದು ದಾರ್ಷ್ಟ್ಯದಿಂದ ನಡೆದುಕೊಂಡಿದ್ದು, ಇದರಿಂದ ಕರವೇ ಕಾರ್ಯಕರ್ತರ ಆಕ್ರೋಶಗೊಂಡು, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಕರವೇ ರಾಜ್ಯ ಮಹಿಳಾ ಉಪಾಧ್ಯಕ್ಷೆ ಅಶ್ವಿನಿ ಗೌಡ, ನೊಂದವರಿಗೆ ಪರಿಹಾರ ನೀಡುವಂತೆ ಕೇಳಲು ಆಸ್ಪತ್ರೆಗೆ ಹೋಗಿದ್ದು ನಿಜ. ಆಂಗ್ಲ ಭಾಷೆಯಲ್ಲಿ ಮಾತನಾಡಿದ ವೈದ್ಯರನ್ನು ಕ್ಷಮೆ ಕೇಳುವಂತೆ ಆಗ್ರಹಿಸಿದ್ದೇವೆ. ಆದರೆ, ಯಾವುದೇ ರೀತಿಯ ಹಲ್ಲೆ ನಡೆಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಕೋಟ್ಯಂತರ ವಂಚನೆ: ಕಣ್ವ ಗ್ರೂಪ್ ಎಂಡಿ ಸೆರೆ

ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬೆಂಗಳೂರು ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ರಾತ್ರಿ ೯ ಗಂಟೆಯವರೆಗೂ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದ ಕರವೇ ಕಾರ್ಯಕರ್ತರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಕ್ಷಮೆ ಕೇಳದಿದ್ದರೆ ಶನಿವಾರ ಹೊರ ರೋಗಿಗಳ ವಿಭಾಗ ಸ್ಥಗಿತಗೊಳಿಸುವುದಾಗಿ ಎಚ್ಚರ ನೀಡಿದ್ದಾರೆ. ಆದರೆ, ಹೊರ ರೋಗಿಗಳ ಘಟಕ ಸ್ಥಗಿತ ಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಿಂಟೋ ಆಸ್ಪತ್ರೆ ನಿರ್ದೇಶಕಿ ಸುಜಾತಾ ಹೇಳಿದ್ದಾರೆ.

ನವೆಂಬರ್ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

click me!