ಕರ್ನಾಟಕದ 25 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಅತ್ಯಧಿಕ 46 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು (ಮೇ 02): ಈಗಾಗಲೇ ಬರಗಾಲದಿಂದ ಕರುನಾಡ ಜನತೆಗೆ ಬಿಸಿಲು ಬರೆ ಹಾಕುತ್ತಿದೆ. ಮೇ 1ರಂದು ರಾಜ್ಯದ 25 ಜಿಲ್ಲೆಗಳಲ್ಲಿ ಬರೋಬ್ಬರಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಪೈಕಿ ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು 46 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬಂದಿದೆ.
ರಾಜ್ಯದಲ್ಲಿ ಈಗಾಗಲೇ ಕಳೆದ ವರ್ಷದ ಮಳೆಯಿಲ್ಲದೇ ಬರಗಾಲವನ್ನು ಎದಿರಿಸಲಾಗಿದೆ. ಬರದಿಂದ ಬೇಸತ್ತಿರುವ ರಾಜ್ಯದ ಜನತೆಗೆ ಈ ವರ್ಷದ ಮಳೆಗಾಲ ಆರಂಭಕ್ಕೂ ಮುನ್ನವೇ ನೆತ್ತರನ್ನು ಸುಡುವ ಬೇಸಿಗೆ ಆರಂಭವಾಗಿದೆ. ನಮ್ಮ ರಾಜ್ಯದ 29 ಜಿಲ್ಲೆಗಳ ಪೈಕಿ 25 ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಹಾಗೂ ಗುಡ್ಡಗಾಡು ಪ್ರದೇಶವಾದ ಕೊಡಗು ಜಿಲ್ಲೆಯಲ್ಲಿ ಮಾತ್ರ 40 ಡಿಗ್ರಿ ಸೆಲ್ಸಿಯಸ್‌ನಿಂದ ಕಡಿಮೆ ಉಷ್ಣಾಂಶವಿದೆ.
undefined
41.8 ಡಿಗ್ರಿ ಉಷ್ಣಾಂಶ: ಕೆಂಗೇರಿ, ಉಲ್ಲಾಳ ತಾಪಮಾನದ ಹೊಸ ದಾಖಲೆ
ಇನ್ನು ರಾಜ್ಯದಲ್ಲಿ ಸರ್ವಕಾಲಕ್ಕೂ ಸಮಶೀತೋಷ್ಣವನ್ನು ಹೊಂದಿರುತ್ತಿದ್ದ ಬೆಂಗಳೂರು ನಗರ ಜಿಲ್ಲೆಯ ಹೊರಭಾಗ ಕೆಂಗೇರಿಯಲ್ಲಿ ಶೇ.41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಮೂಲಕ ಕಳೆದ ನಾಲ್ಕು ದಶಕಗಳ ಹಿಂದೆ ದಾಖಲೆಉಯೊಂದನ್ನು ಸರಿಗಟ್ಟಿದಂತಾಗಿದೆ. ಉಳಿದಂತೆ ಬೆಂಗಳೂರು ನಗರದ ನೆರೆಹೊರೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ 40.6, ರಾಮನಗರ 42, ಕೋಲಾರ 43, ಚಿಕ್ಕಬಳ್ಳಾಪುರ 41 ಡಿಡ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವ ವರದಿಯಾಗಿದೆ.
ರಾಜ್ಯದ ಆರು ಜಿಲ್ಲೆಗಳಿಗೆ ಬಿಸಿಗಾಳಿಯ ರೆಡ್ ಅಲರ್ಟ್!
ಬೆಂಗಳೂರು (ಮೇ.02): ರಾಜ್ಯದಲ್ಲಿ ಬಿಸಿ ಗಾಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.
ಬಿಸಿಲ ಧಗೆ ಮಧ್ಯೆ ಸ್ವಲ್ಪ ರಿಲ್ಯಾಕ್ಸ್..ಟ್ರಾಫಿಕ್ ಸಿಗ್ನಲ್‌ನಲ್ಲಿ ಗ್ರೀನ್ ರೂಫ್ ಹಾಕಿದ ಸರ್ಕಾರ, ವೀಡಿಯೋ ವೈರಲ್
ಬಿಸಿಗಾಳಿ ಮಾನದಂಡ ಏನು?: ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ದಾಖಲಾಗುವ ಜಿಲ್ಲೆಗಳಿಗೆ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗುತ್ತಿದೆ. ವಾಡಿಕೆ ಪ್ರಮಾಣಕ್ಕಿಂತ 6.5 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಿನ ಗರಿಷ್ಠ ಉಷ್ಣತೆ ದಾಖಲಾಗುವ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ 4.5 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ಬಿಸಿಲು ದಾಖಲಾಗುವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಮುನ್ನೆಚ್ಚರಿಕೆ ಕ್ರಮಗಳು: ಜನರು ಮಧ್ಯಾಹ್ನ 12 ರಿಂದ 3 ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ಹೆಚ್ಚು ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು,