Breaking: PUC ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ

Published : Apr 08, 2026, 11:13 AM ISTUpdated : Apr 08, 2026, 11:22 AM IST
karnataka 2nd puc results 2026 to be declared tomorrow

ಸಾರಾಂಶ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಚಿತಪಡಿಸಿದ್ದಾರೆ. ಉಪ ಚುನಾವಣೆ ಮುಗಿದ ನಂತರ ಸಂಜೆ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ.

ಬೆಂಗಳೂರು (ಏ.8): ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್ 9) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಸಂಜೆ ವೇಳೆಗೆ ಸಚಿವರು ಫಲಿತಾಂಶವನ್ನು ಘೋಷಿಸಲಿದ್ದಾರೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿಯ ಫಲಿತಾಂಶವು ಅತ್ಯುತ್ತಮವಾಗಿ ಬರಲಿದೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದೀಗ ತಮ್ಮ ಭವಿಷ್ಯದ ಅಂಕಪಟ್ಟಿಗಾಗಿ ಕಾಯುತ್ತಿದ್ದಾರೆ. ಯಾವುದೇ ಲೋಪದೋಷವಿಲ್ಲದೆ ಅತ್ಯಂತ ಪಾರದರ್ಶಕವಾಗಿ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ಮಂಡಳಿ ಫಲಿತಾಂಶ ನೀಡಲು ಸರ್ವ ಸನ್ನದ್ಧವಾಗಿದೆ.

ಫಲಿತಾಂಶ ನೋಡುವುದು ಹೇಗೆ? (Step-by-Step Guide)

ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಲೇಜಿಗೆ ಅಲೆಯಬೇಕಿಲ್ಲ. ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಿ ಮೊಬೈಲ್‌ನಲ್ಲೇ ರಿಸಲ್ಟ್ ನೋಡಬಹುದು:

ವೆಬ್‌ಸೈಟ್‌ಗೆ ಭೇಟಿ ನೀಡಿ: ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಲಾಗ್ ಇನ್ ಆಗಿ.

ಲಿಂಕ್ ಕ್ಲಿಕ್ ಮಾಡಿ: ಮುಖಪುಟದಲ್ಲಿ ಕಾಣುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಮಾಹಿತಿ ಭರ್ತಿ ಮಾಡಿ: ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಿಖರವಾಗಿ ನಮೂದಿಸಿ.

ಸಲ್ಲಿಸಿ: ಮಾಹಿತಿ ಭರ್ತಿ ಮಾಡಿದ ನಂತರ ‘Submit’ ಬಟನ್ ಒತ್ತಿರಿ.

ಡೌನ್‌ಲೋಡ್ ಮಾಡಿ: ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸಲಿದೆ. ಭವಿಷ್ಯದ ಬಳಕೆಗಾಗಿ ಇದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಅನುಭವಿ ರಾಜಕಾರಣಿ ಆಗಿದ್ರೂ ರಾಹುಲ್ ಗಾಂಧಿಯನ್ನ ಮೆಚ್ಚಿಸಲು ಕೇಂದ್ರದ ವಿರುದ್ಧ ಟೀಕೆ: ಪ್ರಲ್ಹಾದ್ ಜೋಶಿ ಖಡಕ್ ತಿರುಗೇಟು
ಲೋಕಾಯುಕ್ತ ದಾಳಿ: ಬಳ್ಳಾರಿ ಅಧಿಕಾರಿ ಬಳಿ 44 ಎಕರೆ, 14 ಸೈಟ್‌, 3 ಮನೆ!