ಕರ್ನಾಟಕದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್; ಮಕ್ಕಳು, ಗರ್ಭಿಣಿಯರು, ವೃದ್ಧರಿಗೆ ಮಾರ್ಗಸೂಚಿ ಪ್ರಕಟ

Published : May 23, 2025, 09:23 PM IST
Karnataka Covid-19 Guidelines

ಸಾರಾಂಶ

ಕರ್ನಾಟಕದಲ್ಲಿ ಕಳೆದ 20 ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ಸ್ವಲ್ಪ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂಬತ್ತು ತಿಂಗಳ ಮಗುವಿಗೆ ಸೋಂಕು ತಗುಲಿದೆ. ಸಾರ್ವಜನಿಕರು, ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆಗಳಿರುವವರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರು (ಮೇ 23): ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. 2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್ 19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.

ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಹಾಗೂ ಕೋವಿಡ್ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ (Covid Appropriate Behaviour_CAB) ಕೈಗಳ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ, ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

Severe Acute Respiratory Illness ( SARI ) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ - 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ.

ಬೆಂಗಳೂರಿನಲ್ಲಿ 9 ತಿಂಗಳ ಮಗುವಿಗೆ ಸೋಂಕು:

ಕಳೆದ ವಾರ ಬೆಂಗಳೂರು ಗ್ರಾಮಾಂತರದಲ್ಲಿ ಹೊಸಕೋಟೆ ಮೂಲದ 9 ತಿಂಗಳ ಮಗುವಿಗೆ ಜ್ವರ ಬಂದಿದ್ದು, ಪಿಟ್ಸ್ ಕೂಡ ಬಂದಿದೆ. ಕೂಡಲೇ, ಮಗುವಿನ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ವಾಣಿವಿಲಾಸ ಮಕ್ಕಳ ಆಸ್ಪತ್ರೆಗೆ ರವಾನಿಸಿದ್ದಾರೆ. ಆಗ ಮಗುವನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಿದಾಗ ಕರೊನಾ ಸೋಂಕು ಪಾಸಿಟಿವ್ ಬಂದಿತ್ತು. ಇದಾದ ನಂತರ ಮಗುವನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ.

ಸೋಂಕು ತಗುಲಿದ್ದು ಹೇಗೆ?
ಸಾಮಾನ್ಯವಾಗಿ ಮಕ್ಕಳಿಗೆ ಕೊರೊನಾ ಸೋಂಕು ಬರುವುದಿಲ್ಲ ಎಂದು ಹೇಳಲಾಗುತ್ತದೆ. ಆದರೆ, ಇಲ್ಲಿ 9 ತಿಂಗಳ ಮಗುವಿನಲ್ಲಿ ಪಾಸಿಟಿವ್ ಬಂದಿರುವುದು ವೈದ್ಯರಿಗೆ ಆಶ್ವರ್ಯ ಬಂದಿದೆ. ಅಷ್ಟಕ್ಕೂ ಅವರ ಅಪ್ಪ-ಅಮ್ಮ ಯಾವುದೇ ಹೊರ ರಾಜ್ಯಕ್ಕೆ ಹೋಗಿಲ್ಲ. ಹೊರ ಊರಿಗೆ ಹೋಗಿಲ್ಲ. ಅವರಲ್ಲಿ ಯಾವುದೇ ಅನಾರೋಗ್ಯ ಕೂಡ ಇಲ್ಲ. ಹಾಗಿದ್ದರೂ ಮಗುವಿಗೆ ಸೋಂಕು ಹೇಗೆ ಬಂದಿದೆ ಎಂಬುದನ್ನು ವೈದ್ಯರು ಪರಿಶೀಲನೆ ಮಾಡಿದಾಗ ಅಕ್ಕಪಕ್ಕದ ಮನೆಯವರು ಮಗುವನ್ನು ಆಟವಾಡಿಸಲು ಬಂದಾಗ ಅವರಿಂದ ಮಗುವಿಗೆ ಸೋಂಕು ಬಂದಿದೆ ಎಂಬುದು ಪತ್ತೆಯಾಗಿದೆ. ಇನ್ನು ಮಗುವನ್ನು ಆಡಿಸಲು ಬಂದಿದ್ದವರ ಪೈಕಿ ಕೆಲವು ಮಕ್ಕಳಿಗೆ ನೆಗಡಿ, ಶೀತಜ್ವರ ಇರುವುದು ಪತ್ತೆಯಾಗಿತ್ತು. 

ಮಕ್ಕಳು, ಗರ್ಭಿಣಿಯರು, ವೃದ್ಧರು ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಜೊತೆಗೆ, ಕೋವಿಡ್ ಸೋಂಕುಗಳ ಲಕ್ಷಣಗಳಾದ ಜ್ವರ, ಶೀತ, ಕೆಮ್ಮಿ, ನೆಗಡಿ, ತಲೆನೋವು ಹಾಗೂ ಮೈ-ಕೈನೋವು ಇರುವವರು ಸಾರ್ವಜನಿಕ ಸ್ಥಳಕ್ಕೆ ಹೋಗುವ ಮುನ್ನ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌