ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ನ್ಯಾಯಮೂರ್ತಿಗಳ ಪ್ರಮಾಣ ವಚನ: ನ್ಯಾಯಾಧೀಶರ ಸಂಖ್ಯೆ 54ಕ್ಕೆ ಏರಿಕೆ

Sathish Kumar KH   | Kannada Prabha
Published : Aug 10, 2026, 11:10 AM IST
Karnataka High Court 6 new Judges

ಸಾರಾಂಶ

ಕರ್ನಾಟಕ ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡ ಆರು ಹೆಚ್ಚುವರಿ ನ್ಯಾಯಮೂರ್ತಿಗಳು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ನೇಮಕದಿಂದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.

ಬೆಂಗಳೂರು (ಆ.10): ಕರ್ನಾಟಕ ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳು ನೇಮಕಗೊಂಡಿದ್ದು, ಭಾನುವಾರ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನ ನ್ಯಾಯಮೂರ್ತಿಗಳಾದ ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ಥಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ್‌ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿಭೂಷಣ ಅವರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಪ್ರಮಾಣ ವಚನ ಬೋಧಿಸಿದರು.ಈ ಸಂದಭದಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಉಪಸ್ಥಿತರಿದ್ದರು.

ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆ

ಕರ್ನಾಟಕ ಹೈಕೋರ್ಟ್‌ ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿವೆ. ಸದ್ಯ ಮುಖ್ಯ ನ್ಯಾಯಮೂರ್ತಿ ಸೇರಿ ಒಟ್ಟು 48 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಆರು ಹೊಸ ನ್ಯಾಯಮೂರ್ತಿಗಳ ನೇಮಕ ಆಗಿರುವುದರಿಂದ ಹೈಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿದೆ. ಅವರಲ್ಲಿ 11 ಮಂದಿ ಮಹಿಳಾ ನ್ಯಾಯಮೂರ್ತಿಗಳಿದ್ದಾರೆ. ಇನ್ನೂ 8 ನ್ಯಾಯಮೂರ್ತಿಗಳ ಸ್ಥಾನಗಳು ಖಾಲಿಯಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದ ಎಸ್‌ಸಿ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ₹1,178.20 ಕೋಟಿ ಬಿಡುಗಡೆ
ವಿಶ್ವದರ್ಜೆಯ ಎಐ ಸಿಟಿಯಾಗಿ ಬಿಡದಿ ಅಭಿವೃದ್ಧಿ: ಮುಖ್ಯಮಂತ್ರಿ ಡಿಕೆಶಿ, ರೈತರಿಗೆ ಬಂಪರ್ ಆಫರ್!