ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಅ.1ರಿಂದ ನಗದುರಹಿತ ಚಿಕಿತ್ಸೆ ನೀಡುವ 'ಆರೋಗ್ಯ ಸಂಜೀವಿನಿ' ಜಾರಿ

Published : Sep 23, 2025, 07:25 PM IST
Karnataka Arogya Sanjeevini Scheme

ಸಾರಾಂಶ

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KASS) ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತಗೊಳಿಸಲಾಗುವುದು.

ಬೆಂಗಳೂರು (ಸೆ.23): ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷೆಯ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KASS) ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಯೋಜನೆಯ ವಿವರಗಳು ಮತ್ತು ಮಾಸಿಕ ವಂತಿಕೆ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳ್ಳಲಿರುವ ಈ ಯೋಜನೆಗೆ ಸರ್ಕಾರಿ ನೌಕರರ ವೇತನದಿಂದ ಮಾಸಿಕ ವಂತಿಕೆಯನ್ನು ಕಡಿತಗೊಳಿಸಲಾಗುವುದು. ಅಕ್ಟೋಬರ್ 2025ರ ವೇತನದಿಂದ ಈ ವಂತಿಕೆ ಕಡಿತ ಆರಂಭವಾಗಲಿದೆ. ನೌಕರರ ಗ್ರೂಪ್‌ಗೆ ಅನುಗುಣವಾಗಿ ವಂತಿಕೆ ಈ ಕೆಳಗಿನಂತಿದೆ:

ನೌಕರರ ವರ್ಗವಾರು ವಂತಿಗ ಕಡಿತ:

  • ಗ್ರೂಪ್ ಎ: ₹1,000
  • ಗ್ರೂಪ್ ಬಿ: ₹500
  • ಗ್ರೂಪ್ ಸಿ: ₹350
  • ಗ್ರೂಪ್ ಡಿ: ₹250

ವಂತಿಕೆ ಪಾವತಿ ವಿಧಾನ ಮತ್ತು ಇತರ ನಿಯಮಗಳು

ಪಾವತಿ ವಿಧಾನ: ಸರ್ಕಾರಿ ನೌಕರರ ವೇತನದಿಂದ ಕಡಿತಗೊಂಡ ವಂತಿಕೆಯನ್ನು ಎಲ್ಲ ಡಿಡಿಒಗಳು (ವೇತನ ವಿತರಣಾ ಅಧಿಕಾರಿಗಳು) ಖಜಾನೆ-2 ಮೂಲಕ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ಬ್ಯಾಂಕ್ ಖಾತೆ ವಿವರಗಳನ್ನು ಎಚ್‌ಆರ್‌ಎಂಎಸ್ (HRMS) ಮೂಲಕ ಡಿಡಿಒಗಳಿಗೆ ತಿಳಿಸಲಾಗುವುದು.

ಪತಿ/ಪತ್ನಿ ಇಬ್ಬರೂ ನೌಕರರಾಗಿದ್ದರೆ: ಸರ್ಕಾರಿ ನೌಕರನ ಪತಿ ಅಥವಾ ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ, ಅವರಿಬ್ಬರಲ್ಲಿ ಒಬ್ಬರು ಮಾತ್ರ ವಂತಿಕೆ ಪಾವತಿಸುವ ಬಗ್ಗೆ ತಾವೇ ನಿರ್ಧರಿಸಿ, ಸಂಬಂಧಪಟ್ಟ ಡಿಡಿಒಗೆ ಮಾಹಿತಿ ನೀಡಬೇಕು.

ನಿಯೋಜಿತ ನೌಕರರು: ಎಚ್‌ಆರ್‌ಎಂಎಸ್ ವ್ಯಾಪ್ತಿಯಲ್ಲಿ ಇಲ್ಲದ (ಇತರ ಇಲಾಖೆಗಳು, ಸಾರ್ವಜನಿಕ ಸಂಸ್ಥೆಗಳಲ್ಲಿ ನಿಯೋಜನೆ, ಅನ್ಯ ಸೇವೆ) ನೌಕರರು ತಮ್ಮ ಮಾಸಿಕ ವೇತನದಲ್ಲಿ ವಂತಿಕೆ ಕಡಿತಗೊಳಿಸಿ, ಸಂಸ್ಥೆಯಿಂದ ನೇರವಾಗಿ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು.

ಈ ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ನಗದು ರಹಿತವಾಗಿ ಪಡೆಯಲು ಸಹಾಯಕವಾಗಲಿದೆ. ಯೋಜನೆ ಜಾರಿಗೆ ಬರುವ ಅಕ್ಟೋಬರ್‌ನಿಂದಲೇ ಇದರ ಪ್ರಯೋಜನಗಳು ಲಭ್ಯವಾಗಲಿವೆ.

ಹೆಚ್ಚಿನ ಮಾಹಿತಿಗೆ ಈ ಸರ್ಕಾರಿ ಆದೇಶ ಓದಿ:

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!