Kasturirangan Report on Western Ghats ಜಾರಿಗೆ ರಾಜ್ಯದಿಂದ ವಿರೋಧ : ಕೇಂದ್ರ ಸಚಿವರ ಮುಂದೆ ಸಿಎಂ ವಾದ!

Published : Dec 05, 2021, 07:36 AM IST
Kasturirangan Report on Western Ghats ಜಾರಿಗೆ ರಾಜ್ಯದಿಂದ ವಿರೋಧ : ಕೇಂದ್ರ ಸಚಿವರ ಮುಂದೆ ಸಿಎಂ ವಾದ!

ಸಾರಾಂಶ

*ಉಪಗ್ರಹ ಸಮೀಕ್ಷೆ ಆಧರಿಸಿ ವರದಿ ರೂಪಿಸಲಾಗಿದೆ *ವಸ್ತುಸ್ಥಿತಿ ಭಿನ್ನವಾಗಿದೆ: ಕೇಂದ್ರ ಸಚಿವರ ಮುಂದೆ ಸಿಎಂ ವಾದ *ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ : ಬೊಮ್ಮಾಯಿ *ರಾಜ್ಯಕ್ಕೆ ತಂಡ ಕಳುಹಿಸುತ್ತೇನೆ: ಭೂಪೇಂದ್ರ ಯಾದವ್‌ 

ಬೆಂಗಳೂರು(ಡಿ. 04): ಪಶ್ಚಿಮಘಟ್ಟವನ್ನು (Western Ghats) ‘ಪರಿಸರ ಸೂಕ್ಷ್ಮ ವಲಯ’ (ecological sensitive area) ಎಂದು ಘೋಷಿಸುವುದಕ್ಕೆ ರಾಜ್ಯ ಸರ್ಕಾರ (Karnataka Government) ವಿರೋಧ ವ್ಯಕ್ತಪಡಿಸಿದೆ. ‘ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavraj Bommai) ಕಳವಳ ವ್ಯಕ್ತಪಡಿಸಿದ್ದಾರೆ. ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವ ಕುರಿತಾದ ಕಸ್ತೂರಿ ರಂಗನ್‌ ವರದಿ (Kasturirangan Report) ಜಾರಿ ಕುರಿತಂತೆ ಶನಿವಾರ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದ್ರ ಯಾದವ್‌  (Bhupendra Yadav) ನಡೆಸಿದ ವರ್ಚುವಲ್‌ ಸಭೆಯಲ್ಲಿ (Virtual Meet) ಭಾಗವಹಿಸಿದ ಮುಖ್ಯಮಂತ್ರಿಗಳು ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದರು.

ಜನತೆಯ ಒಕ್ಕೊರಲಿನ ವಿರೋಧ!

‘ಪಶ್ಚಿಮಘಟ್ಟಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್‌ ವರದಿ ಜಾರಿ ವಿರೋಧಿಸಲಾಗಿದೆ. ಈ ಕುರಿತು ರಾಜ್ಯ ಸಚಿವ ಸಂಪುಟ (Karnataka Cabinet) ನಿರ್ಣಯ ಕೈಗೊಂಡಿದೆ. ವರದಿ ಜಾರಿಗೆ ರಾಜ್ಯ ಸರ್ಕಾರ (State Government) ಮತ್ತು ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ. ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು (Forest Land) ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಮತ್ತು ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ, ಕಾನೂನು ಜಾರಿಯಾಗುವ ಮುನ್ನವೇ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ. ಪರಿಸರಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ’ ಎಂದು ಹೇಳಿದರು.

Foreign Languages: ಮಲ್ಲೇಶ್ವರಂ ಬಾಲಕಿಯರ ಕಾಲೇಜಲ್ಲಿ ವಿದೇಶಿ ಭಾಷಾ ಕಲಿಕೆ ಕೇಂದ್ರ

ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ!

‘ಪಶ್ಚಿಮಘಟ್ಟಭಾಗದ ಜನರು ಅದರ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ. ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್‌ ವರದಿ ರೂಪಿಸಲಾಗಿದೆ. ಆದರೆ, ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ’ ಎಂದು ತಿಳಿಸಿದರು.

Egg Scheme : ಶಾಲಾ‌ ಮಕ್ಕಳಿಗೆ ಮೊಟ್ಟೆ ಆದೇಶ ವಾಪಸ್ ಪಡೆಯದಿದ್ದಲ್ಲಿ ಹೋರಾಟ, ಸ್ವಾಮೀಜಿಗಳಿಂದ ಎಚ್ಚರಿಕೆ

ರಾಜ್ಯಕ್ಕೆ ತಂಡ ಕಳುಹಿಸುತ್ತೇನೆ: ಭೂಪೇಂದ್ರ ಯಾದವ್‌

ಈ ವೇಳೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ (Environment, Forest and Climate Change Department) ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಆನಂದ್‌ ಸಿಂಗ್‌, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್