* ರಾಜ್ಯದ ಎಲ್ಲಾ ಸಬ್ ರಿಜಿಸ್ಟರ್ ಕಚೇರಿಗಳು ಬಂದ್
* ಕೋರೋನಾ ಹಿನ್ನೆಲೆಯಲ್ಲಿ ಸಬ್ ರಿಜಿಸ್ಟರ್ (ಉಪನೋಂದಣಿ) ಕಚೇರಿಗಳಿಗೆ ರಜೆ
* ಈ ಕುರಿತು ಆದೇಶ ಹೊರಡಿಸಿದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು
ಬೆಂಗಳೂರು, (ಮೇ.10): ರಾಜ್ಯದಲ್ಲಿ ಕೊರೋನಾ ಎಡರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಪರಿಣಾಮ ರಾಜ್ಯದ ಎಲ್ಲ ಸಬ್ ರಿಜಿಸ್ಟರ್ (ಉಪನೋಂದಣಿ) ಕಚೇರಿಗಳಿಗೆ ರಜೆ ನೀಡಲಾಗಿದೆ.
ಈ ಕುರಿತು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಇಂದು (ಸೋಮವಾರ) ಆದೇಶ ಹೊರಡಿಸಿದ್ದು, ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು, ಮೇ 23 ರವರೆಗೆ ಕಚೇರಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
undefined
ಕೊಂಚ ಬದಲಾವಣೆ: ವಾಹನ ಬಳಕೆಗೆ ಷರತ್ತುಬದ್ಧ ಅನುಮತಿ
ರಜೆ ಕೊಟ್ಟರೂ ಸಹ ಅಧಿಕಾರಿಗಳು ಮತ್ತು ಸಿಬ್ಬಂದಿ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.
ಕೊರೋನಾ ಸೋಂಕು ಹೆಚ್ಚಾಗಿದ್ದರೂ ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಜನರು ಸಹ ನೋಂದಣಿಗೆ ಬರುತ್ತಿದ್ದರು. ನೋಂದಣಿ ಪ್ರಕ್ರಿಯೆಯ ಸಂದರ್ಭದಲ್ಲಿ ಅನಿವಾರ್ಯವಾಗಿ ಬಯೋಮೆಟ್ರಿಕ್ ಮಾಡಿಸಲು, ಫೋಟೋ ತೆಗೆಯಲು ಮಾಸ್ಕ್ ತೆಗೆಯಬೇಕಾಗಿತ್ತು. ಇದರ ವಿರುದ್ಧ ಸಾರ್ವಜನಿಕರಲ್ಲಿ ಮತ್ತು ಇಲಾಖೆ ಅಧಿಕಾರಿ-ಸಿಬ್ಬಂದಿಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.