ಕೋಲಾರ (ಡಿ.21): ಅಂಗನವಾಡಿ (Anganawadi) ಕೇಂದ್ರಗಳಿಗೆ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ (NEP) ಜಾರಿಯ ಅಪಾಯಗಳು ಸೇರಿದಂತೆ ನೌಕರರ ವಿವಿಧ ಬೇಡಿಕೆಗಳು ಈಡೇರಿಸಲು ಒತ್ತಾಯಿಸಿ ಜನವರಿ 10ರಿಂದ ಅಂಗನವಾಡಿ ಕೇಂದ್ರಗಳನ್ನು ಬಂದ್ (Bandh) ಮಾಡಿ ಅನಿರ್ಧಿಷ್ಟಾವದಿ ಧರಣಿಯನ್ನು ಬೆಂಗಳೂರಿನಲ್ಲಿ (Bengaluru) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎನ್‌ಇಪಿ (NEP) ಜಾರಿಯಾದರೆ ಅಂಗನವಾಡಿ ಕೇಂದ್ರಗಳು ಮುಚ್ಚಬೇಕಾಗುತ್ತದೆ ಸರಕಾರ ಈಗಾಗಲೇ ಅಂಗನವಾಡಿ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲಿಲ್ಲ ಬಜೆಟ್ ನಲ್ಲಿ ನೀಡಬೇಕಾದ ಅನುದಾನ ನೀಡಲಿಲ್ಲ ಸರ್ಕಾರದ ಇಲಾಖೆಯ ಎಲ್ಲಾ ಕೆಲಸಗಳಿಗೆ ನಾವು ಬೇಕಾಗಿದೆ ಎಂದು ಸರ್ಕಾರದ ನಡೆಯನ್ನು ಖಂಡಿಸಿದರು.
ಕಾರ್ಯಕರ್ತೆಯರ ಬೇಡಿಕೆಗಳು : ಅಂಗನವಾಡಿ ನೌಕರರನ್ನು ಐಸಿಡಿಎಸ್‌ನ (ICDS) 6 ಸೇವೆಗಳಿಗೆ ಮಾತ್ರ ಸೀಮಿತ ಮಾಡಬೇಕು. ಕಾರ್ಯಕರ್ತೆಯರನ್ನು ಶಿಕ್ಷಕಿ ಎಂದು ಗುರುತಿಸಬೇಕು. ಇಸಿಸಿಇ (ECCE) ಮಾರ್ಗದರ್ಶನ ಪ್ರಕಾರ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ (Education) ಒತ್ತು ನೀಡಬೇಕು. ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳಿಗೆ ಸಮವಸ್ತ್ರ, ಷೂ ಸೇರಿದಂತೆ ಅಗತ್ಯವಿರುವ ವಿದ್ಯಾಭ್ಯಾಸದ (Education) ಪರಿಕರಗಳನ್ನು ಕೊಡಬೇಕು. ಅಂಗನವಾಡಿ ನೌಕರರ ವೇತನವನ್ನು ಹೆಚ್ಚಿಸಬೇಕು. ಕೊರೋನಾ (Corona) ವಾರಿಯರ್ಸ್ ಆಗಿ ಕೆಲಸ ಮಾಡಿ ಸೋಂಕಿತರಾಗಿ ನಿಧನರಾದ ಅಂಗನವಾಡಿ ನೌಕರರಿಗೆ ಕೂಡಲೇ 30 ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು. ಕೊರೋನಾ ಸಂದರ್ಭದ ಕೆಲಸದ ಒತ್ತಡದಿಂದ ಮೃತರಾದವರಿಗೆ ಮರಣ ಪರಿಹಾರ 1 ಲಕ್ಷ ರೂ. ಕೊಡಬೇಕು ಎಂಬ ಬೇಡಿಕೆ ಸೇರಿದಂತೆ 25 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗಳ ಈಡೇರಿಕೆಗಾಗಿ ಜನವರಿ 19ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕೃಷ್ಣ, ಅಂಗನವಾಡಿ ನೌಕರರ ಸಂಘದ ಕಲ್ಪನಾ,ಲಕ್ಷ್ಮೀದೇವಮ್ಮ, ಸುಜಾತ ಇದ್ದರು.
ವಿವಿಧ ಹುದ್ದೆಗೆ ಅರ್ಜಿ ಆಹ್ವಾನ : GTTC Recruitment 2022 : ಶಿವಮೊಗ್ಗ (Shivamogga) ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Govt. Tool Room and Training Centre -GTTC ) ಶಿವಮೊಗ್ಗ ಇಲ್ಲಿ ಅತಿಥಿ ಉಪನ್ಯಾಸಕರ (Guest Lecturer) ಹುದ್ದೆಗೆ ಆಸಕ್ತ ನತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನವಾಗಿದೆ.
undefined
ಡಿಟಿಡಿಎಂ/ಡಿಪಿಎಂ, ಬಿ.ಇ & ಎಂ.ಟೆಕ್(ಮೆಕ್ಯಾನಿಕಲ್), ಬಿ.ಇ/ಎಂ.ಟೆಕ್(ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ.ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577 222 ಇಲ್ಲಿ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ https://gttc.co.in/shivamogga/ ಗೆ ಭೇಟಿ ನೀಡಿ.
Davangere Anganwadi Recruitment 2022: ದಾವಣಗೆರೆ ಜಿಲ್ಲೆ (Davangere District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 120 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಮಾತ್ರವೇ ಜನವರಿ 18 ರವರೆಗೆ ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.
ವಯೋಮಿತಿ ಮತ್ತು ಆಯ್ಕೆ ವಿಧಾನ: ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯ ಆಯ್ಕೆ ನಡೆಯಲಿದೆ.
ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.