ರಾಜ್ಯ ಕಾಂಗ್ರೆಸ್ ಸರ್ಕಾರದ ನಿಗಮ ಮಂಡಳಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಸಚಿವರು ತಮ್ಮ ಆಪ್ತರ ಕಂಪನಿಗಳಿಗೆ ಟೆಂಡರ್ ಕೊಟ್ಟು, ಉಳಿದ ಕಂಪನಿಗಳನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸುತ್ತಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಆರೋಪಿಸಿದ್ದಾರೆ.
ಬೆಂಗಳೂರು (ಜು.01): ರಾಜ್ಯದ ಹಲವು ನಿಗಮ ಮಂಡಳಿಗಳಲ್ಲಿ ಭಾರಿ ದೊಡ್ಡ ಮಟ್ಟದ ಅವ್ಯವಹಾರಗಳು ನಡೆಯುತ್ತಿವೆ. ಸುಮಾರು 15ಕ್ಕೂ ಅಧಿಕ ಗೋಲ್‌ಮಾಲ್ ಕಂಪನಿಗಳು ರಾಜ್ಯದ ವಿವಿಧ ನಿಗಮ ಮಂಡಳಿಗಳ ಟೆಂಡರ್ ಪಡೆದುಕೊಳ್ಳುತ್ತಿವೆ. ಈ ಬಗ್ಗೆ ನಗರಾಭಿವೃದ್ಧಿ ಸಚಿವರಿಗೆ ದೂರು ಕೊಟ್ಟರೆ ತಮ್ಮ ಆಪ್ತರ ಕಂಪನಿಗಳಿಗೆ ಟೆಂಡರ್ ಕೊಟ್ಟು, ಬೇರೆ ಕಂಪನಿಗಳನ್ನು ಬ್ಲಾಕ್ ಲಿಸ್ಟ್‌ಗೆ ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವಿನಯ್ ಕುಲಕರ್ಣಿ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಶಾಸಕರು ಅಥವಾ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿಲ್ಲ, ಪ್ರಸಂಗ ಬಂದರೆ ವ್ಯಕ್ತಪಡಿಸುತ್ತೇನೆ. ಅಲ್ಲಿ ನಡೆಯುವಂತ ದುರಾಡಳಿತವನ್ನು ನಾನು ಸಹಿಸುವುದಿಲ್ಲ. ನಮ್ಮ ಬೋರ್ಡ್‌ನಲ್ಲಿ (ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ) ದುರಾಡಳಿವಿದೆ. ಆ ಬೋರ್ಡ್ ಗೆ ನಾನು ಮುಖ್ಯಸ್ಥನಾದರೂ ಅಲ್ಲಿಯ ವ್ಯವಸ್ಥೆ ಸರಿಯಿಲ್ಲ. ಈ ಹಿಂದೆ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಅಲ್ಲಿ ಪರಿಶೀಲನೆ ಮಾಡುವ ಹಕ್ಕು ಇಲ್ಲದಂತಹ ದುರಾಡಳಿತ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
undefined
Breaking: ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರಕ್ಕೆ ಒಂದು ತಿಂಗಳ ಗಡುವು ಕೊಟ್ಟ ಕರ್ನಾಟಕ ರಕ್ಷಣಾ ವೇದಿಕೆ
ಈಗಾಗಲೇ ರಾಜ್ಯದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಸ್ಥೆ ನೋಡಿದ್ದೇವೆ. ಆದರೆ, ಅದಕ್ಕಿಂತ ಕೆಟ್ಟ ವ್ಯವಸ್ಥೆ ನಮ್ಮ ಬೋರ್ಡ್‌ನಲ್ಲಿ ಆಗುವುದು ಬೇಡವೆಂದು ಈಗಾಗಲೇ ಸಿಎಂ ಸೇರಿದಂತೆ ವಿವಿಧ ಮೇಲ್ಪಟ್ಟದ ನಾಯಕರಿಗೆ ತನಿಖೆ ಮಾಡುವಂತೆ ಮನವಿ ಪತ್ರವನ್ನು ಕೊಟ್ಟಿದ್ದಾರೆ. ಇನ್ನು ನಮ್ಮ ಮಂಡಳಿ ಮಾತ್ರವಲ್ಲದೇ ಹಲವು ಮಂಡಳಿಗಳಲ್ಲಿ ಹಗರಣ ನಡೆಯುತ್ತಿರುವುದರ ಬಗ್ಗೆ ಪತ್ರಗಳನ್ನು ಕೊಟ್ಟಿದ್ದೇನೆ. ಆದರೆ, ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗಿದ್ದು ನಿಜ. ಆದರೆ, ಪಕ್ಷದ ಮುಖಂಡರಿಗೆ ಏನು ಹೇಳಬೇಕು ಅದನ್ನು ಹೇಳಿದ್ದೇನೆ. ಎಲ್ಲಾ ಕಂಪನಿಗಳ ತನಿಖೆಗಳ ಬಗ್ಗೆ ತನಿಖೆ ಆಗಬೇಕು. ಯಾವ ಕಂಪನಿಗಳು ಗೋಲ್ ಮಾಲ್ ಮಾಡಿವೆ ಅಂತಹ ಕಂಪನಿಗಳನ್ನು ಬ್ಲಾಕ್ ಲಿಸ್ಟ್ ಗೆ ಹಾಕಲಿ ಎಂದು ಆಗ್ರಹಿಸಿದರು.
ರೀಲ್ಸ್ ಶೋಕಿದಾರಿನಿಗೆ ಜೈಲು ತೋರಿಸಿದ ಖಾಕಿ; ಅರುಣ್ ಕಟಾರೆ ಈಗ ಕೇರ್ ಆಫ್ ಪರಪ್ಪನ ಅಗ್ರಹಾರ
ಈಗಾಗಲೇ ನಾನು ಅಧ್ಯಕ್ಷನಾಗಿ ಆಯ್ಕೆಯಾದ ಬೋರ್ಡ್‌ನ ಅವ್ಯವಹಾರದ ಬಗ್ಗೆ ತನಿಖೆ ಮಾಡುವಂತೆ ಮನವಿ ಪತ್ರವನ್ನು ಕೊಟ್ಟು ಎರಡೂವರೆ ತಿಂಗಳು ಆಗಿದೆ. ನಾನು ಕೊಟ್ಟಿರುವ ಹಗರಣದ ಪಟ್ಟಿಯಲ್ಲಿ ಸುಮಾರು 10-15 ಕಂಪನಿಗಳು ಭಾಗಿಯಾಗಿವೆ. ಆದರೆ, ಸಂಬಂಧಪಟ್ಟ ಸಚಿವರು ಹಾಗೂ ಮುಖ್ಯಮಂತ್ರಿಗಳು ತಮಗೆ ಬೇಡವಾದ ಕಂಪನಿಗಳನ್ನ ಬ್ಲಾಕ್ ಲಿಸ್ಟ್ ಹಾಕುವುದು ಹಾಗೂ ಮಂತ್ರಿಗಳ ಆಪ್ತರ ಕಂಪನಿಗಳಿಗೆ ಟೆಂಡರ್ ನೀಡಲಾಗುತ್ತಿದೆ. ಇದು ಸೂಕ್ತವಲ್ಲ, ಸಮಯ ಬಂದಾಗ ಮಾತಾಡುತ್ತೇನೆ. ಸಿಎಂ ಅವರ ಗಮನಕ್ಕೆ ಹಲವಾರು ಬಾರಿ ತಂದಿದ್ದೇನೆ. ಇಂತಹದನ್ನು ನಾವು ಸಹಿಸಿಕೊಳ್ಳುವುದಿಲ್ಲ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವಿನಯ್ ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.