ಬಿಜೆಪಿ ಟಿಕೆಟ್ ವಂಚನೆ ಕೇಸ್ ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್‌ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ!

By Sathish Kumar KH  |  First Published Dec 4, 2023, 8:47 PM IST

ರಾಜ್ಯದಲ್ಲಿ ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್‌ಗೆ ಜಾಮೀನು ಲಭ್ಯವಾಗಿದೆ. ಆದ್ರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.


ಬೆಂಗಳೂರು (ಡಿ.4): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯ ಬೈಂದೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಹಣವನ್ನು ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಸೋಮವಾರ ಜಾಮೂನು ಸಿಕ್ಕಿದೆ. ಮಂಗಳವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆಯಿದೆ.

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಆಕೆಯ ಗ್ಯಾಂಗ್‌ನಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡದು ವಂಚನೆ ಮಾಡಿದ್ದ ಪ್ರಕರಣ ಬಹುದಿನಗಳ ಕಾಲ ನೆನಪುಳಿಯುವಂತಹ ಕೇಸ್ ಆಗಿದೆ. ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದಳು. ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜಾಮೀನು ಸಿಕ್ಕಿದೆ.

Latest Videos

undefined

ಮೈಸೂರು ದಸರಾದಲ್ಲಿ 7 ಬಾರಿ ಅಂಬಾರಿ ಹೊತ್ತ ಅರ್ಜುನ ಆನೆ ವೀರಮರಣ: ಮಾವುತನ ಪ್ರಾಣಕ್ಕಾಗಿ ತನ್ನ ಜೀವ ಬಲಿದಾನ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ‌ ಮಾಡಿದ ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಬೆಂಗಳೂರು ಬಿಟ್ಟು ತೆರಳಬಾರದು ಎಂದು ಆದೇಶವನ್ನು ಹೊರಡಿಸಲಾಗಿದೆ. ಜೊತೆಗೆ, ಸಾಕ್ಷಿಗಳ ನಾಶಕ್ಕೆ ಅಥವಾ ಆರೋಪಿಗಳ ವಿರುದ್ಧ ಇರುವ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಷರತ್ತು ಹಾಕಲಾಗಿದೆ. 

ಇನ್ನು ಚೈತ್ರಾ, ಶ್ರೀಕಾಂತ್‌ಗೆ ಜಾಮೀನು ಸಿಕ್ಕಿದ್ದರೂ ಇಂದು ಜೈಲಿನಿಂದ ಬಿಡುಗೆ ಆಗುವ ಭಾಗ್ಯ ಸಿಗಲಿಲ್ಲ. ನ್ಯಾಯಾಲಯ ವಿಧಿಸಿದ್ದ 1 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶೂರಿಟಿ ಇಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಚೈತ್ರಾಳ ಜೈಲಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ಇನ್ನು ನಾಳೆ (ಮಂಗಳವಾರ) ನ್ಯಾಯಾಲಯದ ಅವಧಿಯಲ್ಲಿ ಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಪೂರೈಸಿದ ನಂತರ ಪರಪ್ಪನ ಅಗ್ರಹಾರ ಜೈಲಿನಿಂದ‌ ಚೈತ್ರಾ ಮತ್ಉ ಶ್ರೀಕಾಂತ್ ಬಿಡುಗಡೆಯಾಗುವ ಸಾಧ್ಯತೆಯಿದೆ.

ರಾಜ್ಯದ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿದ ಸರ್ಕಾರ: ಶೀಘ್ರ ದಿನಾಂಕ ಪ್ರಕಟ

ಸಹ ಖೈದಿಗಳಿಂದ ಹಲ್ಲೆಗೊಳಗಾಗಿದ್ದ ಚೈತ್ರ: ಕಳೆದ ತಿಂಗಳು ರಾಷ್ಟ್ರಗೀತೆ ವಿಚಾರಕ್ಕೆ ನಡೆದ ಜಗಳದಲ್ಲಿ ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರುವ ಘಟನೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿತ್ತು. ಮಹಿಳಾ‌‌ ವಿಚಾರಣಾಧೀನ ಖೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಕುಂದಾಪುರ ನಡುವೆ ನಡೆದ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಚೈತ್ರಾ ಪರಪ್ಪನ ಅಗ್ರಹಾರ ಪೊಲೀಸರಿಗೆ ದೂರು ನೀಡಿದ್ದರು. ಹಲ್ಲೆ ಬಳಿಕ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಕರೆ ಮಾಡಿ ನೋವು ತೋಡಿಕೊಂಡಿರೋ ಚೈತ್ರಾ. ಕೈದಿಗಳಿಗೆ ವಾರಕ್ಕೊಮ್ಮೆ ಲ್ಯಾಂಡ್ ಲೈನ್ ನಿಂದ ಕುಟುಂಬಸ್ಥರ ಜೊತೆ ಮಾತನಾಡೋಕೆ ಅವಕಾಶ ಇರುತ್ತದೆ. ಲ್ಯಾಂಡ್ ಲೈನ್ ಮೂಲಕ ಕುಟುಂಬಸ್ಥರು, ಸ್ನೇಹಿತರಿಗೆ ಕರೆ ಮಾಡಿದ್ದ ಚೈತ್ರಾ ಮಾಹಿತಿ ನೀಡಿದ್ದರು.

click me!