
ಬೆಂಗಳೂರು (ಮೇ.15): ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ನಿರ್ದೇಶನದ ಮೇರೆಗೆ ಮುಂದುವರೆದಿದ್ದರು. ಇದೀಗ ವಿಧಾನಸಭಾ ಚುನಾವಣೆಯ ಸೋಲಿನ ಕಾರಣಕ್ಕಾಗಿ ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪೂರಕವಾಗಿ ರಾಜೀನಾಮೆ ನೀಡಬೇಕು ಎಂಬ ಅಭಿಪ್ರಾಯವೂ ಪಕ್ಷದ ಆಂತರಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಅಂತಿಮವಾಗಿ ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಂಡು ಕಟೀಲ್(nalin kumar kateel) ಅವರಿಗೆ ಮುಂದಿನ ಹಾದಿಯ ಬಗ್ಗೆ ಸೂಚಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗ ಸರ್ಕಾರ ರಚಿಸುತ್ತಿರುವ ಕಾಂಗ್ರೆಸ್‌ಗೆ ಪ್ರತಿಯಾಗಿ ಪ್ರಬಲವಾಗಿ ಎದಿರೇಟು ನೀಡಲು ಹಾಗೂ ಪಕ್ಷದ ಸಂಘಟನೆ ಬಲಪಡಿಸಲು ಸಮರ್ಥ ರಾಜ್ಯಾಧ್ಯಕ್ಷರ ಅಗತ್ಯವಿದೆ. ಕಟೀಲ್ ಅವರು ಇದುವರೆಗೆ ತಮ್ಮ ಜವಾಬ್ದಾರಿ ನಿಭಾಯಿಸಿದ್ದಾರೆ. ಮುಂದಿನ ಚುನಾವಣೆ ಎದುರಿಸಲು ಬೇರೊಬ್ಬರ ಸಾರಥ್ಯ ಬೇಕು ಎಂಬುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.
ಲೋಕಸಭಾ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು: 3-4 ಡಿಸಿಎಂ ಹುದ್ದೆ ಸೃಷ್ಟಿಆಗುತ್ತಾ?...
ಬಿಜೆಪಿ ಶಾಸಕಾಂಗ ನಾಯಕ ಯಾರು?
ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಪ್ರತಿಪಕ್ಷದ ಸ್ಥಾನದಲ್ಲಿ ಕೂಡಲಿರುವ ಬಿಜೆಪಿಗೆ ಶಾಸಕಾಂಗ ಪಕ್ಷದ ನಾಯಕ ಯಾರು ಎಂಬುದರ ಬಗ್ಗೆ ಚರ್ಚೆ ಆರಂಭಗೊಂಡಿದೆ.
ಮೇಲ್ನೋಟಕ್ಕೆ ಇದುವರೆಗೆ ಮುಖ್ಯಮಂತ್ರಿಯಾಗಿದ್ದ ಮತ್ತು ಚುನಾವಣೆಯ ನೇತೃತ್ವ ವಹಿಸಿದ್ದ ಬಸವರಾಜ ಬೊಮ್ಮಾಯಿ ಅವರೇ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಯಬಹುದು ಎನ್ನಲಾಗುತ್ತಿದ್ದರೂ ಹೊಸಬರಿಗೆ ಅವಕಾಶ ಕೊಡಬಹುದೇ ಎಂಬ ಮಾತೂ ಪಕ್ಷದಲ್ಲಿ ಕೇಳಿಬರುತ್ತಿದೆ.
ಕಾಂಗ್ರೆಸ್‌ನಿಂದ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಅಂತಿಮಗೊಂಡ ಬಳಿಕವೇ ಬಿಜೆಪಿಯು ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದೆ. ಇನ್ನೂ ಈ ಬಗ್ಗೆ ಗಂಭೀರ ಚರ್ಚೆ ಆರಂಭಗೊಂಡಿಲ್ಲ ಎಂದು ತಿಳಿದು ಬಂದಿದೆ.
ಚುನಾವಣೆ ಮುಗೀತಿದ್ದಂತೆ ಶುರುವಾಯ್ತಾ ದ್ವೇಷ ರಾಜಕಾರಣ? ಶಾಸಕ ನಾಗೇಂದ್ರಗೆ ಬಿಜೆಪಿ ಬೆಂಬಲಿಗರು ಜೀವ ಬೆದರಿಕೆ!
ಬಹುತೇಕ ಲಿಂಗಾಯತ ಸಮುದಾಯದವರಿಗೇ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ನೀಡುವ ಸಾಧ್ಯತೆಯಿದ್ದು, ಬೊಮ್ಮಾಯಿ ಅವರ ಬದಲು ಅದೇ ಸಮುದಾಯಕ್ಕೆ ಸೇರಿದ ಬೇರೊಬ್ಬರನ್ನು ಪರಿಗಣಿಸಬಹುದೇ ಎಂಬ ಕುತೂಹಲವೂ ಇದೆ. ಈ ನಿಟ್ಟಿನಲ್ಲಿ ಬಸನಗೌಡ ಪಾಟೀಲ ಯತ್ನಾಳ ಅವರ ಹೆಸರೂ ಪ್ರಸ್ತಾಪವಾಗುತ್ತಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಎದುರಿಸಲು ಯತ್ನಾಳ ಅವರು ಸೂಕ್ತವಾಗಬಹುದು ಎಂಬ ಲೆಕ್ಕಾಚಾರವೂ ಇದೆ. ಆದರೆ, ಯತ್ನಾಳ ಅವರ ಕಾರ್ಯನಿರ್ವಹಣೆ ಮತ್ತು ಹೇಳಿಕೆಗಳಿಂದ ವಿವಾದವಾಗಬಹುದು ಎಂಬ ಆತಂಕವೂ ಇದೆ.
ಹೀಗಾಗಿ, ಬೊಮ್ಮಾಯಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಿದಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜತಾಂತ್ರಿಕ ಮಾರ್ಗದಲ್ಲಿ ಎದುರಿಸಲು ಅನುಕೂಲವಾಗಬಹುದು. ಇದುವರೆಗೆ ಮುಖ್ಯಮಂತ್ರಿಯಾಗಿ ಪ್ರತಿಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ನಾಯಕರನ್ನು ನಿಭಾಯಿಸಿದ್ದಾರೆ. ಈಗ ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತು ಆಡಳಿತಾರೂಢ ಕಾಂಗ್ರೆಸ್ ನಾಯಕರನ್ನು ಎದುರಿಸುವುದು ಸುಲಭವಾಗಬಹುದು ಎಂಬ ಅಭಿಪ್ರಾಯವೂ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ