
ಬೆಂಗಳೂರು (ಮೇ.11): ರಾಜ್ಯದ 224 ಕ್ಷೇತ್ರಗಳಲ್ಲಿ ನಿನ್ನೆ ಶಾಂತಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮತ ಎಣಿಕೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
Karnataka Elections 2023: ಎಕ್ಸಿಟ್ ಪೋಲ್ ಅತಂತ್ರ ಕೈಬಿಟ್ಟು, ಒಂದೇ ಪಕ್ಷಕ್ಕೆ ಬಹುಮತ ಕೊಟ್ಟ ಸಟ್ಟಾ ಬಜಾರ್‌ಗಳು!
ಶನಿವಾರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು ಐದು ಜನರಿಗಿಂತ ಹೆಚ್ಚು ಜನರು ಗುಂಪು ಸೇರದಂತೆ ಸೂಚನೆ ನೀಡಿದ್ದಾರೆ. ಇನ್ನು ಶವಸಂಸ್ಕಾರ, ಮದುವೆ ಬಿಟ್ಟು ಉಳಿದೆಲ್ಲದಕ್ಕೂ ನಿಷೇಧಾಜ್ಞೆ ಅನ್ವಯವಾಗಲಿದೆ.
ಮೇ 13ರಂದು ಸ್ಫೋಟಕ ವಸ್ತುಗಳ ಸಾಗಾಟ, ಪಟಾಕಿ ಸಿಡಿಸುವುದು, ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದು, ಭಿತ್ತಿಪತ್ರ ಪ್ರದರ್ಶನ ಕೂಡ ನಿಷೇಧಿಸಲಾಗಿದೆ.
ಫಲಿತಾಂಶಕ್ಕೂ ಮುನ್ನವೇ ಅಭ್ಯರ್ಥಿಗಳ ಸೆರೆ ಹಿಡಿದಿಟ್ಟ ಕಾಂಗ್ರೆಸ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ