ವಿಧಾನಸಭಾ ಚುನಾವಣೆ: ರಾಜ್ಯದಲ್ಲಿ ನಾಳೆಯಿಂದ ನಾಮಪತ್ರ ಸಲ್ಲಿಕೆ ಶುರು!

By Kannadaprabha News  |  First Published Apr 12, 2023, 2:34 AM IST

ಬರುವ ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಇದರೊಂದಿಗೆ ವಿಧಾನಸಭೆ ಚುನಾವಣೆಯ ಅಧಿಕೃತ ಪ್ರಕ್ರಿಯೆಗಳು ಆರಂಭವಾಗಲಿವೆ.


ಬೆಂಗಳೂರು (ಏ.12) : ಬರುವ ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಇದರೊಂದಿಗೆ ವಿಧಾನಸಭೆ ಚುನಾವಣೆಯ ಅಧಿಕೃತ ಪ್ರಕ್ರಿಯೆಗಳು ಆರಂಭವಾಗಲಿವೆ.

ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ಮತ್ತು ಮೇ 13ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಣೆಯಾಗಲಿದೆ. ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಏ.20ಕ್ಕೆ ನಾಮಪತ್ರ ಸಲ್ಲಿಕೆ ಮಾಡಲು ಕಡೆಯ ದಿನವಾಗಿದೆ. ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಿಸಲಿದ್ದಾರೆ. ಏ.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಏ.24ರಂದು ಕೊನೆಯ ದಿನವಾಗಿದೆ.

Tap to resize

Latest Videos

ಮುಂದಿನ ನಾಯಕತ್ವ ಬೆಳೆಸಲು ಹೊಸಬರಿಗೆ ಮಣೆ: ಅರುಣ್ ಸಿಂಗ್ ಸಮರ್ಥನೆ...

ಮುಖ್ಯ ಚುನಾವಣಾಧಿಕಾರಿ ಕಚೇರಿಯು ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ರಾಜಕೀಯ ಪಕ್ಷಗಳು ಈಗಾಗಲೇ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಸುತ್ತಿವೆ. ಕಾಂಗ್ರೆಸ್‌ ಎರಡನೇ ಪಟ್ಟಿಪ್ರಕಟಿಸಿದ್ದು, ಜೆಡಿಎಸ್‌ ಮೊದಲ ಪಟ್ಟಿಬಿಡುಗಡೆ ಮಾಡಿದೆ. ಬಿಜೆಪಿ ಕೂಡ ಕಸರತ್ತಿನ ಬಳಿಕ ಮೊದಲ ಪಟ್ಟಿಬಿಡುಗಡೆ ಮಾಡಿದೆ. ಈಗಾಗಲೇ ಘೋಷಿಸಿರುವ ಅಭ್ಯರ್ಥಿಗಳು ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಿದ್ದಾರೆ.

5.24 ಕೋಟಿ ಮತದಾರರು:

ರಾಜ್ಯದಲ್ಲಿ 5.24 ಕೋಟಿ ಮತದಾರರಿದ್ದು, 2.63 ಕೋಟಿ ಪುರುಷರು ಮತ್ತು 2.60 ಕೊಟಿ ಮಹಿಳಾ ಮತದಾರರಿದ್ದಾರೆ. 18-19 ವರ್ಷದೊಳಗಿನ ಯುವ ಮತದಾರರು 9.58 ಲಕ್ಷ ನೋಂದಣಿಯಾಗಿದ್ದು, 80 ವರ್ಷಕ್ಕಿಂತ ಮೇಲ್ಪಟ್ಟಮತದಾರರು 12.15 ಲಕ್ಷ ಮಂದಿ ಇದ್ದಾರೆ. 100 ವರ್ಷ ದಾಟಿರುವ 16,976 ಮತದಾರರಿದ್ದಾರೆ. 5.60 ಲಕ್ಷ ಅಂಗವಿಕಲ ಮತದಾರರಿದ್ದು, ಒಂದು ಲಕ್ಷಕ್ಕೂ ಅಧಿಕ ಲೈಂಗಿಕ ಕಾರ್ಯಕರ್ತ ಮತದಾರರಿದ್ದಾರೆ. 41,312 ತೃತೀಯ ಲಿಂಗಿಗಳಿದ್ದು, ಈ ಪೈಕಿ ತಾವು ತೃತೀಯಲಿಂಗಿಗಳು ಎಂದು ಗುರುತಿಸಿಕೊಂಡವರು 4751 ಮಂದಿ ಇದ್ದಾರೆ.

ಕೊಟ್ಟ ಮಾತು ಉಳಿಸಿಕೊಳ್ಳದೇ ಮೋಸ ಮಾಡಿದ ನಾಯಕರು: ಟಿಕೆಟ್ ಕೈತಪ್ಪಿದ್ದಕ್ಕೆ ಲಕ್ಷ್ಮಣ ಸವದಿ ಕಣ್ಣೀರು!

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿದ್ದು, ಎಸ್‌ಸಿಗೆ 36 ಮತ್ತು ಎಸ್‌ಟಿಗೆ 15 ವಿಧಾನಸಭಾ ಕ್ಷೇತ್ರಗಳನ್ನು ಮೀಸಲಿಡಲಾಗಿದೆ. ಪ್ರತಿ ಮತಗಟ್ಟೆಗೆ ಸರಾಸರಿ 883 ಮತದಾರರಂತೆ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಗರ ಪ್ರದೇಶಗಳಲ್ಲಿ 24,063 ಮತ್ತು ಗ್ರಾಮೀಣ ಪ್ರದೇಶದಲ್ಲಿ 34,219 ಮತಗಟ್ಟೆಗಳು ಇರಲಿವೆ. ವಿಶೇಷವಾಗಿ 1320 ಮಹಿಳಾ ಮತಗಟ್ಟೆಗಳು, 224 ಯುವ ಅಧಿಕಾರಿಗಳು ನಿರ್ವಹಣೆಯ, 224 ವಿಶೇಷ ಚೇತನರು ಮತ್ತು 240 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಸುಮಾರು 1200 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿದ್ದು, ಇವುಗಳ ನಿರ್ವಹಣೆಗೆ ಅಗತ್ಯ ಹೆಚ್ಚಿನ ಭದ್ರತೆಯ ಸೌಲಭ್ಯಗಳನ್ನು ಒದಗಿಸಲಾಗುವುದು. ರಾಜ್ಯದ ಶೇ.50ರಷ್ಟುಮತಗಟ್ಟೆಗಳು ವೆಬ್‌ಕಾಸ್ಟಿಂಗ್‌ ಸೌಲಭ್ಯವನ್ನು ಹೊಂದಿವೆ.

click me!