
ಬೆಂಗಳೂರು (ಜ.8): ರಾಜ್ಯ ಸರ್ಕಾರ 2020 ಹಾಗೂ 2021ರ ಸಾಲಿನ ಡಾ.ರಾಜ್‌ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನು ಪ್ರಕಟ ಮಾಡಿದೆ. 2020ರ ಸಾಲಿನ ಡಾ.ರಾಜ್‌ಕುಮಾರ್ ಪ್ರಶಸ್ತಿಯನ್ನು ಹಿರಿಯ ನಟಿ ಡಾ.ಜಯಮಾಲಾ ಅವರಿಗೆ ನೀಡಲಾಗಿದೆ, ಇನ್ನು 2021ರ ಸಾಲಿನ ಈ ಪ್ರಶಸ್ತಿಯನ್ನು ಹಿರಿಯ ನಿರ್ಮಾಪಕ ಸಾ.ರಾ.ಗೋವಿಂದ್ ಅವರಿಗೆ ಘೋಷಿಸಿಸಲಾಗಿದೆ.
ಇನ್ನು 2020ರ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಎಂಎಸ್ ಸತ್ಯು ಅವರಿಗೆ ಘೋಷಿಸಲಾಗಿದ್ದರೆ, 2021ರ ಸಾಲಿನ ಈ ಪ್ರಶಸ್ತಿಯನ್ನು ನಿರ್ದೇಶಕ ಶಿವರುದ್ರಯ್ಯ ಅವರಿಗೆ ನೀಡಲಾಗಿದೆ.
ಜೀವಮಾನದ ಸಾಧನೆಗಾಗಿ ಸರ್ಕಾರ ನೀಡುವ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನು 2020ರ ಸಾಲಿನಲ್ಲಿ ಪ್ರಗತಿ ಅಶ್ವಥ್ ನಾರಾಯಣ್ ಅವರಿಗೆ ನೀಡಲಾಗಿದ್ದರೆ, 2021ರ ಸಾಲಿನ ಪ್ರಶಸ್ತಿನ್ನು ಹಿರಿಯ ನಟ ಎಂಕೆ ಸುಂದರ್ ರಾಜ್ ಅವರಿಗೆ ನೀಡಲಾಗಿದೆ. ಡಾ. ರಾಜ್ ಕುಮಾರ್ ಪ್ರಶಸ್ತಿ, ಡಾ. ವಿಷ್ಣುವರ್ದನ್ ಪ್ರಶಸ್ತಿ ಹಾಗೂ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ವಿಜೇತರಿಗೆ ತಲಾ 5 ಲಕ್ಷ ರೂ. ನಗದು ಹಾಗೂ 50 ಗ್ರಾಂ. ಚಿನ್ನದ ಪದಕವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2020 ಹಾಗೂ 2021ನೇ ಕ್ಯಾಲೆಂಡರ್ ವರ್ಷಗಳ ಡಾ|| ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ॥ ವಿಷ್ಣುವರ್ಧನ್ ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡುವ ಸಂಬಂಧ ಆಯ್ಕೆ ಸಲಹಾ ಸಮಿತಿಯು ಸಲ್ಲಿಸಿರುವ ಅಂತಿಮ ವರದಿಯನ್ನು ಅಂಗೀಕರಿಸಿ, ಈ ಕೆಳಕಂಡಂತೆ ಪ್ರಶಸ್ತಿಗಳನ್ನು ಘೋಷಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ