ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವಧಿ ವಿಸ್ತರಣೆ: ಸರ್ಕಾರದ ಕೈ ಸೇರಲಿದೆ ಜಾತಿಗಣತಿ ವರದಿ

By Sathish Kumar KHFirst Published Jan 31, 2024, 6:51 PM IST
Highlights

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಅವಧಿಯನ್ನು ಮತ್ತೊಂದು ತಿಂಗಳು ವಿಸ್ತರಣೆ ಮಾಡಿ (ಫೆ.1ರಿಂದ ಫೆ.29ರವರೆಗೆ) ಸರ್ಕಾರ ಆದೇಶ ಹೊರಡಿಸಲಾಗಿದೆ.

ಬೆಂಗಳೂರು  (ಜ.31): ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಅವಧಿಯನ್ನು ಮತ್ತೊಂದು ತಿಂಗಳು ವಿಸ್ತರಣೆ ಮಾಡಿ (ಫೆ.1ರಿಂದ ಫೆ.29ರವರೆಗೆ) ಸರ್ಕಾರ ಆದೇಶವನ್ನು ಹೊರಡಿಸಲಾಗಿದೆ.

ರಾಜ್ಯದಲ್ಲಿ ಕಳೆದ ಬಾರಿ ಅಧಿಕಾರದಲ್ಲಿದ್ದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂತರಾಜು ಅವರ ಆಯೋಗವನ್ನು ರಚಿಸಿ ಜಾತಿಗಣತಿ ವರದಿಯನ್ನು (ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ) ಸಿದ್ಧಪಡಿಸಲು ಸೂಚಿಸಿದ್ದರು. ಆದರೆ, ಈ ವರದಿ ಕೈ ಸೇರುವ ಮುನ್ನವೇ ಸರ್ಕಾರ ಬದಲಾಗಿತ್ತು. ನಂತರ ಬಂದ ಬಿಜೆಪಿ ಸರ್ಕಾರ ಕಾಂತರಾಜು ವರದಿ ಪಡೆಯದೇ ಅಧಿಕಾರ ಪೂರ್ಣಗೊಳಿಸಿತ್ತು. ಆದರೆ, ಈಗ ಪುನಃ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿ ಪಡೆಯುವುದಾಗಿ ತಿಳಿಸಿದ್ದರು.

ಹಿಂದುಳಿದ ಸಮುದಾಯಗಳ ಮಠಾಧೀಶರಿಂದ ಸಿಎಂ ಭೇಟಿ, ಜಾತಿಗಣತಿ ವರದಿ ಸ್ವೀಕರಿಸುವಂತೆ ಆಗ್ರಹ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ಅವರಿಗೆ ಜಾತಿಗಣತಿ ವರದಿ ಸಲ್ಲಿಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇನ್ನು ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ಈಗಾಗಲೇ ವಿಸ್ತರಣೆ ಮಾಡಿ ಅವಕಾಶ ನೀಡಲಾಗಿತ್ತು. ಇನ್ನು ಜಯಪ್ರಕಾಶ್‌ ಹೆಗ್ಡೆ ಅವರ ಅಧಿಕಾರ ಜ.31ಕ್ಕೆ ಮುಕ್ತಾಯವಾಗಲಿದೆ. ಆದರೆ, ಜಾತಿಗಣತಿ ವರದಿ ಸಲ್ಲಿಕೆಗೆ ಇನ್ನೂ ಒಂದು ತಿಂಗಳು ಕಾಲಾವಕಾಶ ಬೇಕು ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಸರ್ಕಾರಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಶಾಶ್ವತ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಅವರ ಅಧಿಕಾರಾವಧಿಯನ್ನು ಒಂದು ತಿಂಗಳ ಕಾಲ (ಫೆ.1ರಿಂದ ಫೆ.29ರವರೆಗೆ) ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

click me!