ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ ಬಂದ್‌ ಹೋರಾಟಗಾರರು: ರಾಷ್ಟ್ರೀಯ ಹೆದ್ದಾರಿ, ರೈಲು ಮಾರ್ಗಗಳೂ ತಡೆ

By Sathish Kumar KH  |  First Published Sep 28, 2023, 4:28 PM IST

ಕಾಂಗ್ರೆಸ್‌ ಸರ್ಕಾರಕ್ಕೆ ಸೆಡ್ಡು ಹೊಡೆದು ಕಾವೇರಿ ನೀರಿಗಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹೋರಾಟಗಾರರು ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲು ಮಾರ್ಗ ತಡೆಯಲೂ ಮುಂದಾಗಿದ್ದಾರೆ.


ಮೈಸೂರು (ಸೆ.28): ಕರ್ನಾಟಕದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಸೇರಿ ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ವೇಳೆ ಹೋರಾಟಗಾರರು ಪ್ರತಿಭಟನೆ ಮಾಡುವುದರ ಜೊತೆಗೆ ರಾಜ್ಯ ಹೆದ್ದಾರಿಗಳು, ರಾಷ್ಟ್ರೀಯ ಹೆದ್ದಾರಿಗಳು ಹಾಗೂ ರೈಲುಗಳನ್ನು ತಡೆಯಲಾಗುತ್ತದೆ ಎಂದು ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದರೂ ಸರ್ಕಾರದಿಂದ ಇದಕ್ಕೆ ಯಾವುದೇ ಅನುಮತಿಯನ್ನು ನೀಡಲಾಗಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಯಾವುದೇ ಆಸ್ತಿ-ಪಾಸ್ತಿ ಹಾನಿ ಮಾಡುವುದು ಹಾಗೂ ಒತ್ತಾಯ ಪೂರ್ವಕವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಬಾರದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಜೊತೆಗೆ, ಬೆಂಗಳೂರಿನಲ್ಲಿ 5 ಜನಕ್ಕಿಂತ ಹೆಚ್ಚಿನ ಜನರು ಗುಂಪಾಗಿ ಸೇರವುದನ್ನು ತಡೆಯುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ನಿಷೇಧಾಜ್ಞೆಯನ್ನು (144 ಸೆಕ್ಷನ್‌) ಜಾರಿ ಮಾಡಿದ್ದಾರೆ. ಆದರೂ, ಸರ್ಕಾರದ ವಿರುದ್ಧ ತೊಡೆತಟ್ಟಿ ಪ್ರತಿಭಟನೆಗೆ ಮುಂದಾಗಿರುವ ಪ್ರತಿಭಟನಾಕಾರರು ಕೇವಲ ಪ್ರತಿಭಟನೆ, ರ್ಯಾಲಿ ಮಾತ್ರವಲ್ಲದೇ ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಹಾಗೂ ಕೆಲವು ಕಡೆಗಳಲ್ಲಿ ರೈಲ್ವೆ ಮಾರ್ಗಗಳನ್ನೂ ತಡೆಯಲು ಮುಮದಾಗಿದ್ದಾರೆ.

Tap to resize

Latest Videos

ಕಾವೇರಿ ಬಂದ್‌ - ವೀಕೆಂಡ್‌ ಮಸ್ತಿಗಾಗಿ ಊರಿಗೆ ಹೊರಟವರಿಗೆ ಶಾಕ್‌! ಖಾಸಗಿ ಬಸ್ ದರ 3 ಪಟ್ಟು ಹೆಚ್ಚಳ

ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹೆದ್ದಾರಿಗಳು ಬಂದ್: ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್‌, ನಾಳೆ ರಾಜ್ಯಾದ್ಯಂತ ಬಂದ್ ಮಾಡ್ತೇವೆ. ನೀರು ಬಿಡಬೇಡಿ ಎಂದು ಹಿಂದೆಯೇ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದೆವು. ಆದರೂ, 3000 ಸಾವಿರ ಕ್ಯೂಸೆಕ್ ನೀರು ಬಿಡುತ್ತಿದ್ದಾರೆ. ಈ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿತ್ತೇವೆ. ನಾಳೆ  ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ರಾಜ್ಯಾದ್ಯಂತ ಹೆದ್ದಾರಿ ಬಂದ್ ಇರುತ್ತದೆ. ನನಗೆ ರಾಜ್ಯಾದ್ಯಂತ ಪ್ರತಿಭಟನೆಯಲ್ಲಿ ಭಾವಗಿಸಲು ಆಹ್ವಾನ ಇದೆ. ಎಲ್ಲಿಂದ ಭಾಗವಹಿಸಬೇಕು ತೀರ್ಮಾನ ಮಾಡಿಲ್ಲ. ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಇಂತಹ ಹೋರಾಟ ಅವಶ್ಯವಾಗಿದೆ. ನಾಳೆ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ರಾಷ್ಟ್ರೀಯ ರಾಜ್ಯ ಹೆದ್ದಾರಿ ಬಂದ್ ಚಳುವಳಿ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಬಂದ್‌ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೋಲಾರದಲ್ಲಿ 15 ಅಡಿ ಉದ್ದದ ಮುಸ್ಲಿಂ ಖಡ್ಗ, ಹಸಿರು ಬಟ್ಟೆ, ಉರ್ದು ಬರಹದ ಬ್ಯಾನರ್‌ ಅಳವಡಿಕೆ

ರಾಜ್ಯ ರೈತ ಸಂಘದಿಂದ ಗೆಜ್ಜೆಲಗೆರೆ ಬಳಿ ರೈಲು ಮಾರ್ಗದ ತಡೆ: 
ತಮಿಳುನಾಡಿಗೆ ನೀರು ಹರಿಸಿ ರಾಜ್ಯದ ರೈತರನ್ನು ಬೀದಿಗೆ ತಂದಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಈ ತಿಂಗಳ 29ರಂದು ಕರೆದಿರುವ ಕರ್ನಾಟಕ ಬಂದ್‌ಗೆ 'ಕರ್ನಾಟಕ ರಾಜ್ಯ ರೈತ ಸಂಘ' ಬೆಂಬಲಿಸುತ್ತದೆ. ಶಾಂತಿಯುತವಾಗಿ ಸ್ವಯಂ ಪ್ರೇರಿತ ಬಂದ್‌ ಆಚರಿಸಬೇಕೆಂದು ಸಂಘ ರಾಜ್ಯದ ಸಮಸ್ತ ಜನರನ್ನು ವಿನಂತಿಸುತ್ತದೆ. ಕನ್ನಡ ಪರ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ಎಲ್ಲಾ ಜನಪರ ಸಂಘಟನೆಗಳೊಗೂಡಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಶಾಂತಿಯುತವಾಗಿ ಬಂದ್‌ ಯಶಸ್ವಿಗೊಳಿಸಲು ಸಂಘದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಮೈಸೂರು- ಬೆಂಗಳೂರು ಹೆದ್ದಾರಿ ಗೌರಿಪುರದ ಬಳಿ ರಸ್ತೆ ಬಂದ್ ಆಗಲಿದೆ. ಜೊತೆಗೆ ಬೆಂಗಳೂರು ಮೈಸೂರು ರೈಲು ಮಾರ್ಗದಲ್ಲಿ ಗೆಜ್ಜಲಗೆರೆ ಬಳಿ ರೈಲು ಬಂದ್‌ ಮಾಡಲಾಗುತ್ತದೆ. 

click me!