
ಬೆಂಗಳೂರು (ಮಾ.21): ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.
ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿ, ‘ಕನ್ನಡಪರ ಕೆಲಸಗಳಿಗೆ ಮೊದಲಿನಿಂದಲೂ ಚಿತ್ರರಂಗದ ಬೆಂಬಲ ಇದೆ. ಬೆಳಗಾವಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ನೆಲ, ಜಲ ವಿಚಾರವಾಗಿ ನಾವು ರಾಜ್ಯದ ಪರ ಇರುತ್ತೇವೆ. ಈ ನಿಟ್ಟಿನಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇದೆ’ ಎಂದರು.
‘ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ತಡವಾಗಿ ನಮಗೆ ಕನ್ನಡ ಸಂಘಟನೆಗಳು ಮನವಿ ಮಾಡಿದವು. ಇದ್ದಕ್ಕಿದ್ದಂತೆ ಬಂದ ಈ ಮನವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ನಿಲ್ಲಿಸಲಿದ್ದೇವೆ. ಚಿತ್ರೀಕರಣಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ವಾಣಿಜ್ಯ ಮಂಡಳಿ ಈ ನಿರ್ಧಾರಕ್ಕೆ ಚಿತ್ರೋದ್ಯಮದ ಎಲ್ಲಾ ಸಂಸ್ಥೆಗಳು ಬೆಂಬಲಿಸಿವೆ’ ಎಂದು ನರಸಿಂಹಲು ತಿಳಿಸಿದರು.
ಇದನ್ನೂ ಓದಿ: ಮಾರ್ಚ್ 22 ರಂದು ಕರ್ನಾಟಕ ಬಂದ್
ಸಿನಿಮಾ ಪ್ರದರ್ಶಕರ ಸಂಘದ ಕಾರ್ಯದರ್ಶಿ ಕುಶಾಲ್ ಚಂದ್ರಶೇಖರ್ ಮಾತನಾಡಿ, ‘ಅಂದು ಮಧ್ಯಾಹ್ನ ನಂತರ ಸಿನಿಮಾ ಪ್ರದರ್ಶನ ಇರುತ್ತದೆ. ಏಕಾಏಕಿ ಇಡೀ ದಿನ ಸಿನಿಮಾ ಪ್ರದರ್ಶನ ನಿಲ್ಲಿಸಿದರೆ ನಿರ್ಮಾಪಕರಿಗೆ ತೊಂದರೆ ಆಗುತ್ತದೆ. ಹೀಗಾಗಿ ಒಂದು ಶೋ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದೇವೆ’ ಎಂದರು.
- ಕನ್ನಡಪರ ಕೆಲಸಗಳಿಗೆ ನಮ್ಮ ಬೆಂಬಲವಿದೆ: ನರಸಿಂಹಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ