
ಬೆಳಗಾವಿ, [ಡಿ.11]: ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ರಿಸೆಲ್ಟ್ ಹೊರ ಬಿದ್ದಿದ್ದು, ಈ ಫಲಿತಾಂಶ ಎಲ್ಲರ ಊಹೆ ಉಲ್ಟಾ ಪಲ್ಟಾ ಮಾಡಿದೆ.
ಕಳೆದ ಕೆಲ ವರ್ಷಗಳಿಂದ ದೇಶಾದ್ಯಂತ ಗೆಲುವಿನ ನಾಗಲೋಟ ಮುಂದುವರಿಸಿದ್ದ ಪ್ರಧಾನಿ ಮೋದಿಗೆ ಇವತ್ತು ಬ್ರೇಕ್ ಬಿದ್ದಿದೆ. ಸ್ವತಃ ಮೋದಿಯೇ ನಿಂತು ಸಾಲು ಸಾಲು ರ್ಯಾಲಿ, ಸಮಾವೇಶಗಳನ್ನು ಮಾಡಿದರೂ 5 ರಾಜ್ಯಗಳ ಪೈಕಿ ಒಂದರಲ್ಲೂ ಅಧಿಕಾರಕ್ಕೇರುವಲ್ಲಿ ವಿಫಲವಾಗಿದೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ
ಇನ್ನು ಈ ಫಲಿತಾಂಶವನ್ನ ರಾಜಕೀಯ ನಾಯಕರು ತಮ್ಮದೇ ರೀತಿಯಲ್ಲಿ ಬಣ್ಣಿಸಿದ್ದು, ಕೆಲವರು ಈ ರಿಸಲ್ಟ್ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎನ್ನುತ್ತಿದ್ದರೆ, ಬಿಜೆಪಿ ನಾಯಕರು ಮಾತ್ರ ಇದನ್ನು ತಳ್ಳಿಹಾಕಿದ್ದಾರೆ.
ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ. ನರೇಂದ್ರ ಮೋದಿವರನ್ನ ಬಿಟ್ಟರೆ ಪ್ರಧಾನಿ ಆಗೋ ಅರ್ಹತೆ ಯಾರಿಗಿದೆ ಹೇಳಿ ಎಂದು ಪ್ರಶ್ನಿಸಿದರು.
ಈ ಚುನಾವಣೆಯಲ್ಲಿ ಹಿನ್ನೆಡೆ ಆಗಿರೋದು ನಿಜ. ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರ ಸಿಗುತ್ತೆ ಅಂದುಕೊಂಡಿದ್ದೇವು. ಆದ್ರೆ ಆಡಳಿತ ವಿರೋಧಿ ಅಲೆ ಕೆಲಸ ಮಾಡಿದ್ದು, ಎಲ್ಲಿ ತಪ್ಪಾಗಿದೆಯೋ ಅಲ್ಲಿ ಅದನ್ನು ಪಕ್ಷ ಕೂತು ಚರ್ಚೆ ಮಾಡುತ್ತೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ