ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಸಿದ್ದರಾಮಯ್ಯ ಕರೆ

Kannadaprabha News   | Asianet News
Published : Mar 04, 2021, 09:02 AM IST
ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಸಿದ್ದರಾಮಯ್ಯ ಕರೆ

ಸಾರಾಂಶ

ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟವಾಗಿದೆ. ಭ್ರಷ್ಟ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್‌ ಅಧಿಕಾರಕ್ಕೆ ತರುವ ಅಗತ್ಯವಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

 ಬೆಂಗಳೂರು (ಮಾ.04):  ರಾಜ್ಯದಲ್ಲಿ ಅನೈತಿಕ ಶಿಶುವಾಗಿ ಜನಿಸಿರುವ ಬಿ.ಎಸ್‌.ಯಡಿಯೂರಪ್ಪ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಬಡವರು, ರೈತರು ಸೇರಿದಂತೆ ಎಲ್ಲಾ ವರ್ಗದವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಆಫ್‌ ಆಗಿರುವ ಸರ್ಕಾರವನ್ನು ಕಿತ್ತೊಗೆದು ರಾಜ್ಯ ಉಳಿಸಲು ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ದೇವನಹಳ್ಳಿಯ ಜನಧ್ವನಿ ಜಾಥಾ ಉದ್ಘಾಟಿಸಿ ಮಾತನಾಡಿದ ಅವರು, ಯಡಿಯೂರಪ್ಪ ಜನರ ಆಶೀರ್ವಾದ ಇಲ್ಲದಿದ್ದರೂ ಜೆಡಿಎಸ್‌, ಕಾಂಗ್ರೆಸ್‌ ಶಾಸಕರನ್ನು ಖರೀದಿ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯ ಸರ್ಕಾರದ ಬಸ್ಸು ನಿಂತುಹೋಗಿದ್ದು, ನಿಂತು ಹೋಗಿರುವ ಬಸ್ಸಿನ ಸ್ಟೇರಿಂಗ್‌ ತಿರುಗಿಸುತ್ತಾ ಭ್ರಷ್ಟಾಚಾರ ಮಾಡಿ ರಾಜ್ಯ ಲೂಟಿ ಹೊಡೆಯುತ್ತಿದ್ದಾರೆ. ಜನರಿಗೆ ನೀಡಿರುವ ಒಂದು ಭರವಸೆಯನ್ನೂ ಈಡೇರಿಸಿಲ್ಲ ಎಂದು ಕಿಡಿ ಕಾರಿದರು.

ಸಿದ್ದರಾಮಯ್ಯಗೆ ಆಹ್ವಾನಿಸಿದ BJP ಶಾಸಕ : 10 ಎಕರೆ ಜಮೀನು ನೀಡುವುದಾಗಿ ಹೇಳಿಕೆ ..

ರೈತರು, ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರು ಕಷ್ಟಕ್ಕೆ ಸಿಲುಕಿದ್ದಾರೆ. ನರೇಂದ್ರ ಮೋದಿ ಉದ್ಯೋಗ ಸೃಷ್ಟಿಮಾಡುವ ಬದಲು ಪಕೋಡಾ ಮಾರಿ ಎನ್ನುತ್ತಾರೆ. ನೋಟು ಅಮಾನ್ಯೀಕರಣ ಬಳಿಕ ಲಕ್ಷಾಂತರ ಜನ ಬೀದಿಪಾಲಾಗಿದ್ದಾರೆ. ಅಚ್ಛೇ ದಿನ್‌ ಆಯೇಗಾ ಎಂದವರು ಗ್ಯಾಸ್‌ ಸಿಲಿಂಡರ್‌, ಪೆಟ್ರೋಲ್‌-ಡೀಸೆಲ್‌, ಅಗತ್ಯ ವಸ್ತುಗಳ ದರ ಗಗನಕ್ಕೇರಿಸಿದ್ದಾರೆ. ಕೇವಲ ಅಂಬಾನಿ, ಅದಾನಿ ಅಭಿವೃದ್ಧಿಗೆ ಸೀಮಿತವಾಗಿ ರೈತ ವಿರೋಧಿ ಕಾನೂನು ಜಾರಿಗೆ ತಂದಿದ್ದಾರೆ. ನರೇಂದ್ರ ಮೋದಿಯವರಿಗೆ ಮಾನ, ಮರ್ಯಾದೆ ಎಂಬುದು ಇಲ್ಲದಂತಾಗಿದೆ ಎಂದು ಟೀಕಿಸಿದರು.

ಜನರ ಕಷ್ಟಗಳಿಗೆ ಸ್ಪಂದಿಸದ ಈ ಸರ್ಕಾರವನ್ನು ಕಿತ್ತೊಗೆಯಬೇಕು. ಹೀಗಾಗಿ ಜನರ ನೋವಿಗೆ ಧ್ವನಿಯಾಗಲು 100 ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾ ಹಮ್ಮಿಕೊಂಡಿದ್ದೇವೆ. ಟಿಪ್ಪು ಸುಲ್ತಾನ್‌ ಹುಟ್ಟಿದ ದೇವನಹಳ್ಳಿಯಿಂದ ಜಾಥಾ ಪ್ರಾರಂಭಿಸುತ್ತಿದ್ದೇವೆ. ನಾಡು, ದೇಶ ಉಳಿಸಲು ಕಾಂಗ್ರೆಸ್‌ ಅಧಿಕಾರಕ್ಕೆ ಬರಲೇಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ