
ವಿಧಾನ ಪರಿಷತ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವು ಪ್ರಕರಣವನ್ನು ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿ, ಸರ್ಕಾರ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ಆರೋಪದ ಹಿಂದಿರುವ ನಿಜ ಸ್ವರೂಪ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.
ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ರಾಜ್ಯದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರ ಧರ್ಮಸ್ಥಳ ಲಕ್ಷಾಂತರ ಹಿಂದು ಭಕ್ತರ ಭಾವನೆಯ ಕೇಂದ್ರವಾಗಿದೆ. ಇಂತಹ ಪವಿತ್ರ ಸ್ಥಳದ ವಿರುದ್ಧ ಅನಾಮಿಕ ವ್ಯಕ್ತಿಯೊಬ್ಬ ದೃಢ ಸಾಕ್ಷ್ಯಾಧಾರವಿಲ್ಲದೆ ಮಾಡಿರುವ ಆರೋಪವು ಕೆಲ ಮಾಧ್ಯಮಗಳಲ್ಲಿ, ಡಿಜಿಟಲ್ ವೇದಿಕೆಗಳಲ್ಲಿ ವರದಿಯಾಗಿದೆ. ಇಂತಹ ಸಂಗತಿ ಖಂಡನೀಯ. ಇದರಿಂದ ಹಿಂದು ಸಮಾಜದ ಭಾವನೆಗೆ ಅವಮಾನವಾಗಿದೆ ಎಂದರು.
ಸುಳ್ಳು ಮತ್ತು ದುರುದ್ದೇಶಪೂರ್ವಕ ಆರೋಪಗಳಿಂದ ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡುವುದು ಧರ್ಮವಿರೋಧಿ ಶಕ್ತಿಗಳ ಹಳೆಯ ಕ್ರಮ. ಧರ್ಮಸ್ಥಳದ ಹೆಗ್ಗಳಿಕೆ ಹಾಳು ಮಾಡುವ ಯತ್ನಗಳು ನಡೆಯುತ್ತಾ ಬಂದಿವೆ. ಜನರ ಭಕ್ತಿ ಭಾವಗಳಿಗೆ ಧಕ್ಕೆಯುಂಟು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿರಬೇಕು. ತನಿಖೆ ತ್ವರಿತಗೊಳಿಸಿ ಆರೋಪದ ಹಿಂದಿರುವ ನಿಜ ಸ್ವರೂಪ ಬಹಿರಂಗಪಡಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ