‘ಶಾಸಕ ಗಣೇಶ್‌ರನ್ನು ಬಂಧಿಸಿ ಪೌರುಷ ತೋರಿಸಿ’: ಸಿಎಂಗೆ ಚಾಲೆಂಜ್!

Published : Feb 03, 2019, 10:52 AM IST
‘ಶಾಸಕ ಗಣೇಶ್‌ರನ್ನು ಬಂಧಿಸಿ ಪೌರುಷ ತೋರಿಸಿ’: ಸಿಎಂಗೆ ಚಾಲೆಂಜ್!

ಸಾರಾಂಶ

‘ಶಾಸಕ ಗಣೇಶ್‌ರನ್ನು ಬಂಧಿಸಿ ಪೌರುಷ ತೋರಿಸಿ’| ರವಿ ಪೂಜಾರಿ ಬಂಧನದ ಕ್ರೆಡಿಟ್‌ ಪಡೆದ ಸಿಎಂಗೆ ಬಿಜೆಪಿ ಟಾಂಗ್‌

ಬೆಂಗಳೂರು[ಫೆ.03]: ಭೂಗತ ಪಾತಕಿ ರವಿ ಪೂಜಾರಿ ಬಂಧನವು ಸಮ್ಮಿಶ್ರ ಸರ್ಕಾದ ಯಶಸ್ಸು ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ‘ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಾವೇ ಎಂದು ಕೀರ್ತಿ ಪಡೆಯುವ ಮೊದಲು ಕಂಪ್ಲಿ ಶಾಸಕ ಗಣೇಶ್‌ ಅವರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ’ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ಸೆನೆಗಲ್‌ನಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಅದರ ಯಶಸ್ಸನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಿದ್ದಾರೆ. ಉಗ್ರಗಾಮಿ ಬಿನ್‌ಲಾಡೆನ್‌ನನ್ನು ಅಮೆರಿಕ ಹತ್ಯೆ ಮಾಡಿದ್ದರ ಯಶಸ್ಸನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಪಡೆದುಕೊಂಡಂತೆ ಈಗ ರವಿ ಪೂಜಾರಿಯನ್ನು ಸೆನೆಗಲ್‌ ಪೊಲೀಸರು ಬಂಧಿಸಿದ್ದರ ಯಶಸ್ಸನ್ನು ಕುಮಾರಸ್ವಾಮಿ ಪಡೆದುಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.

ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಗಣೇಶ್‌ರನ್ನು ಸರ್ಕಾರ ಬಂಧಿಸಿಲ್ಲ. ಮೊದಲು ಎಚ್ಚರಕೊಂಡು ಕರ್ನಾಟಕದಲ್ಲಿ ಅಪರಾಧಗಳನ್ನು ನಿಯಂತ್ರಿಸಬೇಕು. ಸರ್ಕಾರ ನಡೆಸುವುದು ಎಂದರೆ ಸಿನಿಮಾ ನಿರ್ಮಿಸಿದಂತೆ ಅಲ್ಲ ಎಂದೂ ಕಿಡಿಕಾರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತೆಲಂಗಾಣ ಮಾದರಿ ಒಳಮೀಸಲಾತಿ ನೀತಿ ಬೇಕು: ಮಾದಿಗ ಸಮುದಾಯದ ಮಹತ್ವದ ನಿರ್ಣಯ!
5 States Assembly Election Results 2026: 'ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಲ ಬಿಚ್ಚಲು ಸಾಧ್ಯವಿಲ್ಲ' ತಮಿಳುನಾಡು, ಬಂಗಾಳ ಫಲಿತಾಂಶದ ಬಗ್ಗೆ ಬಿಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ!