
ಬೆಂಗಳೂರು (ಮಾ.11): ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಲವು ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತಳಾಗಿ ಹಂತ ಹಂತವಾಗಿ ಬೆಳೆದಿದ್ದ ಮಂಜುಳಾ, ಬಿಜೆಪಿ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಹುದ್ದೆಗೇರಿದ್ದರು. ಆದರೆ, ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಮಂಜುಳಾ ಕೆಲವು ತಿಂಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದಳು. ಗಂಡನ ನಿಧನದಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಇತ್ತೀಚೆಗೆ ರಾಜಕೀಯ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಲಾಗದೇ ಮಾನಸಿಕ ಖಿನ್ನತೆಯಿಂದ ಹೊರಬರಲಾಗದೇ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಗಳವಾರ ಮಧ್ಯಾಹ್ನ ಮತ್ತಿಕೆರಯ ಮನೆಯಲ್ಲಿ ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂತರ, ಸಾವಿನ ಸ್ಥಳವನ್ನು ಪರಿಶೀಲನೆ ಮಾಡಿದಾಗ ಪೊಲೀಸರಿಗೆ ಮಂಜುಳಾ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.
ಇದನ್ನೂ ಓದಿ: ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸಿನಲ್ಲಿ ಸಚಿವರ ಹೆಸರಲ್ಲ, ಮೊಬೈಲ್‌ನಲ್ಲಿ ರಾಜಕಾರಣಿ ಫೋಟೋನೇ ಸಿಕ್ತು!
ಇನ್ನು ಮಂಜುಳಾ ಬರೆದಿಟ್ಟ ಡೆತ್ ನೋಟ್‌ನಲ್ಲಿ ಜೀವನದಲ್ಲಿ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಉಲ್ಲೇಖ ಮಾಡಿದ್ದಾರಂತೆ. ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ