
ಹುಣಸೂರು(ಜು.07): ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಬಿನಿಯ ಕಾಕನಕೋಟೆ ಅರಣ್ಯದಲ್ಲಿ ಸೋಮವಾರ ಸಂಜೆ ಸಫಾರಿಗೆ ಹೋಗಿದ್ದ ಪ್ರವಾಸಿಗರ ಕಣ್ಣಿಗೆ ಅಪರೂಪದ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದೆ.
ಗುಂಡ್ಲುಪೇಟೆ: ಬಾವಿಯೊಳಗೆ ಅವಿತು ಕುಳಿತಿದ್ದ ಚಿರತೆ ಏಣಿಯಿಂದ ಮೇಲೆ ಬಂತು!
ಕಳೆದ 5 ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ಈ ಕಪ್ಪು ಚಿರತೆಯೊಂದು, 6 ತಿಂಗಳ ಹಿಂದೆ ನಾಗರಹೊಳೆಯಲ್ಲಿ ಪ್ರವಾಸಿಗರಿಗೆ ಕಾಣಿಸಿಕೊಂಡಿತ್ತು. ಆದರೆ ಸೋಮವಾರ ಸಂಜೆ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಈ ಕಪ್ಪು ಚಿರತೆ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.
ಇದು ಹೊಸದೇನಲ್ಲ, ಪ್ರವಾಸಿಗರಿಗೆ ಸಹಜವಾಗಿ ಕಾಣಿಸಿಕೊಂಡಿದ್ದರಿಂದ ವಿಶೇಷವಾಗಿದೆ ಎನ್ನುತ್ತಿದ್ದಾರೆ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿ ಯೋಜನೆ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ