ಕರ್ನಾಟಕದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯ ಹಣವನ್ನು ಕಡಿತಗೊಳಿಸಿದ ಕಾಂಗ್ರೆಸ್ ಸರ್ಕಾರ, ಅಕ್ಟೋಬರ್‌ನಿಂದ 10 ಕೆ.ಜಿ. ಅಕ್ಕಿ ಕೊಡಲಿದೆ.
ಬೆಂಗಳೂರು (ಸೆ.28): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ತಾನು ನುಡಿದಂತೆ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ.ಜಿ. ಅಕ್ಕಿ ಹಾಗೂ ಉಳಿದ 5 ಕೆ.ಜಿ. ಬದಲಾಗಿ ಹಣವನ್ನು ನೀಡುತ್ತಿತ್ತು. ಆದರೆ, ಮುಂದಿನ ತಿಂಗಳಿಂದ ಎಲ್ಲರಿಗೂ ತಲಾ 10 ಕೆ.ಜಿ. ಅಕ್ಕಿಯನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಪ್ರಸಾದ್ ನನಗಿಂತ ಮುಂಚೆ ಬಂದು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಅವರ ಸ್ಥಾನಮಾನ ವಿಚಾರ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇನ್ನು ಬೋರ್ಡ್ ಮತ್ತು ಕಾರ್ಪೊರೇಷನ್ ಬೇಗ ಮಾಡಲು ಮನವಿ ಮಾಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಥಾನಮಾನಗಳನ್ನು ನೀಡಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಶೀಘ್ರವೇ ಪರಿಶೀಲನೆ ಮಾಡಿ ಕ್ರಮಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದರು.
ಕೋಲಾರದಲ್ಲಿ 15 ಅಡಿ ಉದ್ದದ ಮುಸ್ಲಿಂ ಖಡ್ಗ, ಹಸಿರು ಬಟ್ಟೆ, ಉರ್ದು ಬರಹದ ಬ್ಯಾನರ್ ಅಳವಡಿಕೆ
ಮುಯಂದುವರೆದು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಎಲ್ಲ ಅರ್ಹ ಪಡಿತರ ಫಲಾನುಭವಿಗಳಿಗೆ ಮುಂದಿನ ತಿಂಗಳಿನಿಂದ (ಅಕ್ಟೋಬರ್) ಎಲ್ಲ ಸದಸ್ಯರಿಗೂ ತಲಾ 10 ಕೆ.ಜಿ. ಅಕ್ಕಿ ನೀಡುತ್ತೇವೆ. ಈಗಾಗಲೇ ಅಕ್ಕಿ ಸರಬರಾಜು ಮಾಡುವ ಬಗ್ಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಇನ್ನು ಮೊದಲನೆಯದಾಗಿ ಆರಂಭದಲ್ಲಿ ಬರಪೀಡಿತವೆಂದು ಘೋಷಣೆ ಮಾಡಲಾದ ತಾಲೂಕಿನಲ್ಲಿ ಹಣದ ಬದಲು ಅಕ್ಕಿ ಕೊಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.