ಕರ್ನಾಟಕದಲ್ಲಿ ಮಳೆಯ ಆರ್ಭಟ: 16 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

By Gowthami K  |  First Published Oct 14, 2024, 5:31 PM IST

ಕರ್ನಾಟಕದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದು ಉತ್ತಮ ಮಳೆಯಾಗಲಿದ್ದು, ಅಕ್ಟೋಬರ್ 17 ರವರೆಗೆ 16 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.


ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ನವರಾತ್ರಿ ಮುಗಿದರೂ ಮಳೆಯ ಆರ್ಭಟ ಮುಂದುವರಿದಿದೆ.  ಅಲ್ಲಲ್ಲಿ ಅನಾಹುತಗಳು ಆಗುತ್ತಲೇ ಇದೆ. ಈ ನಡುವೆ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದು ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಅ.20ರವರೆಗೆ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು 5 cm ,  ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ 4 cm ಮಳೆಯಾಗಿದೆ. ಇಂದಿನಿಂದ ಅಕ್ಟೋಬರ್ 17 ರವರೆಗೂ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದ್ದು ಅಲರ್ಟ್ ಘೋಷಿಸಲಾಗಿದೆ.

ಚಾಣಕ್ಯ ನೀತಿ: ಹಣಕ್ಕಿಂತಲೂ ಮುಖ್ಯವಾದ ಈ ಮೂರು ವಿಚಾರಗಳು ತಿಳಿದಿರಲೇಬೇ ...

Latest Videos

undefined

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ,ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಿಗೆ ಭಾರಿ ಮಳೆ ಆಗಲಿದೆ

ಹೀಗಾಗಿ ಅಕ್ಟೋಬರ್ 17 ವೆರೆಗೆ ಆರೇಂಜ್, ಎಲ್ಲೋ ಆರ್ಟ್ ಘೋಷಣೆಯಾಗಿದೆ. ಒಟ್ಟು 16 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೇಂಜ್, ಎಲ್ಲೋ ಆರ್ಲಟ್  ನೀಡಿದೆ  ಬೆಂಗಳೂರಿನಲ್ಲಿ ಇಂದಿನಿಂದ ಅಕ್ಟೋಬರ್17 ವರೆಗೆ ಸಾಧಾರಣ ಮಳೆ ಜೊತೆಗೆ ಕೆಲಮೊಮ್ಮೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

ಚೀನಿ ಬೀಜ ತಿನ್ನೋದ್ರಿಂದ ಆಗೋ ಆರೋಗ್ಯ ಲಾಭ ಒಂದೆರಡಲ್ಲ

ಬುಧವಾರದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬುಧವಾರದಿಂದ ಕರಾವಳಿ ಹಾಗೂ ಒಳನಾಡು ಭಾಗದಲ್ಲಿ ಇನ್ನಷ್ಟು ಮಳೆ ಹೆಚ್ಚಾಗಲಿದೆ. ಹಾಗಾಗಿ, ಅ.16 ಮತ್ತು 17ಕ್ಕೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಅ.18ಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.18 ಮತ್ತು 19ಕ್ಕೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ.18ಕ್ಕೆ ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

click me!