ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳವ ಸಲುವಾಗಿ ತಮಿಳುನಾಡು ಸಿಎಂಗೆ ಬಿಎಸ್‌ವೈ ಪತ್ರ

By Suvarna NewsFirst Published Jul 3, 2021, 4:26 PM IST
Highlights

* ತಮಿಳುನಾಡು ಮುಖ್ಯಮಂತ್ರಿಗೆ ಬಿಎಸ್ ಯಡಿಯೂರಪ್ಪ ಪತ್ರ 
* ಮೇಕೆದಾಟುಇದು ಎರಡೂ ರಾಜ್ಯಕ್ಕೆ ಉಪಯುಕ್ತವಾಗುವ ಯೋಜನೆ.
* ಕುಡಿಯುವ ನೀರಿನ ಯೋಜನೆ ವಿಚಾರವಾಗಿ ಪತ್ರ


ಬೆಂಗಳೂರು, (ಜುಲೈ.03): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇಕೆದಾಟು ಕುಡಿಯುವ ನೀರು ಯೋಜನೆ ವಿಚಾರವಾಗಿ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಪತ್ರ ಬರೆದಿದ್ದಾರೆ.

ಸುಪ್ರೀಂಕೋರ್ಟ್ ಆದೇಶದನ್ವಯ ನಾವು ಯೋಜನೆಯನ್ನ ಕೈಗೆತ್ತಿಕೊಳ್ಳಲಿದ್ದೇವೆ. ಇದಕ್ಕೆ ಅಡ್ಡಿಮಾಡಬೇಡಿ ಎಂದು ಪತ್ರದ ಮೂಲಕ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಮೇಕೆದಾಟು ಯೋಜನೆ: ಎನ್‌ಜಿಟಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್

ಸುಪ್ರೀಂಕೋರ್ಟ್ 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಿತ್ತು. 4.75 ಟಿಎಂಸಿ ನೀರು ಕುಡಿಯುವ ನೀರಿಗೆ ಅವಕಾಶ ನೀಡಿತ್ತು. ಇದು ಎರಡೂ ರಾಜ್ಯಕ್ಕೆ ಉಪಯುಕ್ತವಾಗುವ ಯೋಜನೆ. ಈ ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ನಾವೂ ಕೂಡ ಯೋಜನೆಗೆ ಅನುಮತಿ ಕೋರಿ ಕೇಂದ್ರ ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದೇವೆ. ತಮಿಳುನಾಡು ಕೂಡ ಕಾವೇರಿ ನೀರನ್ನ ಬಳಕೆ ಮಾಡಿಕೊಂಡು ಪವರ್ ಪ್ರಾಜೆಕ್ಟ್ ಆರಂಭಿಸಲು ನಿರ್ಧರಿಸಿದೆ.
 
ಎರಡೂ ರಾಜ್ಯದ ನಡುವೆ ಸಾಮರಸ್ಯ ಮುಂದುವರೆಸಲು ಹಾಗೂ ಮೇಕೆದಾಟು ಯೋಜನೆಗೆ ಅಡ್ಡಿಪಡಿಸದಂತೆ ತಮಿಳುನಾಡು ಸಿಎಂಗೆ ಬಿಎಸ್‌ವೈ ಮನವಿ ಮಾಡಿದ್ದಾರೆ.

click me!