ಹಣದ ಬರ, ಗ್ಯಾರಂಟಿಗಳ ಭಾರ, ನಿರೀಕ್ಷೆಗಳ ಹೊರೆ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಅಣಿಯಾಗಿದ್ದು, ಆರ್ಥಿಕ ಶಿಸ್ತು ಸರಿದಾರಿಗೆ ತರುವ ಜತೆ ಜನರ ನಿರೀಕ್ಷೆ ಈಡೇರಿಕೆಗೂ ಆದ್ಯತೆ ನೀಡುವ ಸಾಧ್ಯತೆಯಿದೆ. ರಾಜ್ಯದ ಮಟ್ಟಿಗೆ ಅತಿ ಹೆಚ್ಚು ಹಾಗೂ ದೇಶದಲ್ಲಿ ಎರಡನೇ ಅತಿ ಹೆಚ್ಚು ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ಕರ್ನಾಟಕದ ಆಯ-ವ್ಯಯ ಲೆಕ್ಕ ಬಿಚ್ಚಿಡಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಡಿವಾಣ ಹಾಕದೆ ಆರ್ಥಿಕ ಶಿಸ್ತು ಪಾಲನೆಗೆ ಬಜೆಟ್‌ನಲ್ಲಿ ಸಿಎಂ ಒತ್ತು ನೀಡುವ ಸಾಧ್ಯತೆ ಇದೆ.
08:36 PM (IST) Mar 06
02:38 PM (IST) Mar 06
01:26 PM (IST) Mar 06
ಈ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, ಮೂಲಸೌಕರ್ಯ ಅಭಿವೃದ್ಧಿ, ಹೊಸ ಕಾಲೇಜುಗಳ ಸ್ಥಾಪನೆ, ಹಾಗೂ 2,000 ಬೋಧಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ವಿದ್ಯಾರ್ಥಿನಿಯರಿಗೆ ವಿಶೇಷ ಸೌಲಭ್ಯ, ಹೊಸ ತಂತ್ರಜ್ಞಾನ ಆಧಾರಿತ ಕೋರ್ಸುಗಳ ಆರಂಭ .
01:05 PM (IST) Mar 06
ಸಿದ್ದರಾಮಯ್ಯನವರು 2026-27ರ ಬಜೆಟ್‌ನಲ್ಲಿ 60 ವರ್ಷ ಹಳೆಯ ಅಬಕಾರಿ ಕಾಯ್ದೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಏಪ್ರಿಲ್ 2026 ರಿಂದ 'ಮದ್ಯದ ಅಂಶ ಆಧಾರಿತ ತೆರಿಗೆ' (AIB) ಪದ್ಧತಿ ಜಾರಿಯಾಗಲಿದ್ದು, ತೆರಿಗೆ ಸೋರಿಕೆ ತಡೆಯಲು ಬ್ಲಾಕ್‌ಚೈನ್ -ಜಿಯೋ-ಫೆನ್ಸ್ಡ್ ಲಾಕ್‌ನಂತಹ ಹೈಟೆಕ್ ತಂತ್ರಜ್ಞಾನ ಅಳವಡಿಕೆ.
01:00 PM (IST) Mar 06
ಉಡುಪಿ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬ್ಯಾನ್ ಮಾಡುತ್ತಿರುವುದನ್ನು ಮನೋವೈದ್ಯ ಡಾ.ಪಿ.ವಿ.ಭಂಡಾರಿ ಸ್ವಾಗತಿಸಿದ್ದಾರೆ. ವಾರ್ಡ್‌ನಲ್ಲಿ ಪ್ರತಿದಿನ ಇಬ್ಬರು ಅಂಡರ್ 18 ಮಕ್ಕಳು ಅಡ್ಮಿಟ್ ಆಗ್ತಾರೆ. ಸಾಮಾಜಿಕ ಜಾಲತಾಣಗಳ ಬಳಕೆಯಿಂದಲೇ ಹೀಗಾಗುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ಅಪರಿಚಿತರಿಂದ ಮೋಸ ಹೋದ ಮಕ್ಕಳೂ ಇವೆ. ಇದು ಸಮಯೋಚಿತ ನಿರ್ಧಾರ. ತಕ್ಷಣವೇ ಇದು ಯಾವ ಪರಿಣಾಮ ಬೀರುತ್ತೋ ಗೊತ್ತಿಲ್ಲ. 18 ವರ್ಷದೊಳಗಿನ ಮಕ್ಕಳಿಗೆ ಬೀಡಿ ಸಿಗರೇಟು ಕೊಡಬಾರದೆಂಬ ಕಾನೂನು ಎಷ್ಟರ ಮಟ್ಟಿಗೆ ಜಾರಿಯಾಗಿದೆ?
ಮೊಬೈಲ್ ಪೋನ್ ಖಾಸಗಿ ಸ್ವತ್ತು. ಅದರಲ್ಲಿ ಮಕ್ಕಳು ಏನು ನೋಡ್ತಾರೆ, ಏನು ನೋಡಲ್ಲ ಅಂತ ಪತ್ತೆ ಮಾಡೋದು ಸುಲಭವಲ್ಲ. ಪೋಷಕರು ಮತ್ತು ಶಾಲಾ ಆಡಳಿತದ ಸಹಕಾರ ಬೇಕು. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಮೊಬೈಲ್ ಜೊತೆ ಶಾಲೆಗೆ ಪ್ರವೇಶ ನೀಡಲ್ಲ. ಸರ್ಕಾರಿ ಶಾಲೆಯೊಳಗೆ ಉಪಯೋಗ ಮಾಡಲ್ಲ.
ಹೊರಗೆ ಕಡಿವಾಣ ಹಾಕೋದು ಕಷ್ಟ
ಇದು ರೂಲ್ ಅಂತ ತಂದ್ರೆ ಮುಂದಿನ ಪೀಳಿಗೆಯನ್ನಾದ್ರೂ ನಿಯಂತ್ರಿಸಬಹುದು.ಈಗಿನ ಟೀನೇಜರ್ಸ್ ಕಡಿವಾಣ ಹಾಕೋದು ಕಷ್ಟ. ಈಗ 10-12 ವರ್ಷದ ಮಕ್ಕಳನ್ನು ನಿಯಂತ್ರಿಸಬಹುದು. ಉಪಯೋಗ ಮಾಡಲು ಇಲ್ಲ ಅನ್ನೋ ಕಾನೂನು ಬಂದ್ರೆ ಸ್ವಲ್ಪ ಜನವಾದರೂ ದೂರ ಸರಿಯುತ್ತಾರೆ. ಯುವಕರು ಆತಂಕ, ಖಿನ್ನತೆಗೆ ಒಳಗಾಗಿದ್ದಾರೆ. ಅತಿಯಾದ ಮೊಬೈಲ್ ಉಪಯೋಗಿಸಿ, ಬಿಡಲಾಗದ ಸ್ಥಿತಿ ತಲುಪಿದ್ದು, ಶಾಲಾ ಕಾಲೇಜು ತೊರೆಯುತ್ತಿದ್ದಾರೆಂದರು.
12:56 PM (IST) Mar 06
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಬಂಪರ್ ಕೊಡುಗೆಗಳನ್ನು ಘೋಷಿಸಲಾಗಿದೆ.
12:45 PM (IST) Mar 06
12:43 PM (IST) Mar 06
• ʻಸಮಸ್ತʼ ಮೊಬೈಲ್ ಅಪ್ಲಿಕೇಶನ್ ಮೂಲಕ ಆರೋಗ್ಯ ಇಲಾಖೆಯ ಎಲ್ಲಾ ಕ್ಷೇತ್ರ ಸಿಬ್ಬಂದಿ ನಿರ್ವಹಿಸುತ್ತಿರುವ ವಹಿಗಳ ಡಿಜಿಟಲೀಕರಣ;
• ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ ಮತ್ತು ಯುಪಿಐ ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ ಜಾರಿ;
• ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಲಿ-ರೇಡಿಯಾಲಜಿ (Scanning) ಮತ್ತು ಟೆಲಿ-ಲೇಬರ್ ರೂಮ್‌ಗಳ (Smart Labour Room) ಅಳವಡಿಕೆ.
12:41 PM (IST) Mar 06
-. ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮ
- ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿ.
-. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ.
- ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ.
- ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ GBA ಸಹಯೋಗದೊಂದಿಗೆ ಸ್ಥಾಪನೆ.
- ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿIVF ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ
- ವಿಕ್ಟೋರಿಯಾ ಆಸ್ಪತ್ರೆ ಇನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.
12:38 PM (IST) Mar 06
- ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸಲು ಕೆಳಕಂಡ ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ:-
- ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ ೯೨ ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. • ೨೩೬ ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು. • ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ ಆಸ್ಪತ್ರೆಯನ್ನು ನಿರ್ಮಿಸಲು ಒಡಂಬಡಿಕೆ.
- 2026-೨೭ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನ. ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಅನುದಾನ ಮೀಸಲು.
-ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ
12:33 PM (IST) Mar 06
ಬಜೆಟ್ ನಲ್ಲೇ 100 ಕೋಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ. ಎಸ್.ಶಿವಶಂಕರಪ್ಪ ನಿಧನದಿಂದ ಮೃತರಾದ ದಾವಣೆಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, 100 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ಮೀಸಲು. ಇನ್ನು ಕೆಲವೇ ತಿಂಗಳಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ.
12:31 PM (IST) Mar 06
ರಸ್ತೆಗಳ ಧೀರ್ಘ ಕಾಲದ ಬಾಳಿಕೆಗಾಗಿ ಮುಂದಿನ ಮೂರು ವರ್ಷಗಳಲ್ಲಿ ವೈಟ್ ಟಾಪಿಂಗ್. 450 KM ಗೂ ಹೆಚ್ಚು ಉದ್ದದ ರಸ್ತೆಗಳನ್ನು 3000 ಕೋಟಿ ವೆಚ್ಚದಲ್ಲಿ ವೈಟ್ ಟಾಪಿಂಗ್. ಬೆಂಗಳೂರು ನಗರ ಪಾಲಿಕೆಗಳ ಸ್ವಂತ ಸಂಪನ್ಮೂಲದಲ್ಲಿ ಮೇಲ್ದರ್ಜೆಗೇರಿಸಲು ಸೂಚನೆ.
ಬಜೆಟ್ ನಲ್ಲಿ ಸೂಚನೆ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ.
3 ವರ್ಷಗಳಲ್ಲಿ 175 ಜಂಕ್ಷನ್ ಗಳ ಸೌಂದರ್ಯೀಕರಣ.
500 ಕಿ.ಮೀ ಉದ್ದದ ಪಾದಚಾರಿ ಮಾರ್ಗ ಮೇಲ್ದರ್ಜೆಗೇರಿಸಲು ನಿರ್ಧಾರ.
100 ಸ್ಕೈವಾಕ್ ಗಳ ನಿರ್ಮಾಣ ಮಾಡಲು ಉದ್ದೇಶ.
GBA 5 ಪಾಲಿಕೆಗಳು ತಮ್ಮ ಬ್ಯಾಲೆನ್ಸ್ ಶೀಟ್ ಆಧಾರದಲ್ಲಿ ಮುನಿಸಿಪಲ್ ಬಾಂಡ್ ಗಳ ಹೊರಡಿಸುವುದು.
ಆ ಮೂಲಕ ಅಭಿವೃದ್ಧಿ ಕಾಮಗಾರಿಗಳ ಸಂಪನ್ಮೂಲ ಕ್ರೋಡೀಕರಿಸಲು ಮುಂದಾದ ಸರ್ಕಾರ.
12:26 PM (IST) Mar 06
ಶಾಸಕ ರಿಜ್ವಾನ್ ಅರ್ಷದ್ ಹೇಳಿಕೆ. ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಗ್ಯಾರಂಟಿ ಸ್ಕಿಂ ಈ ಬಜೆಟ್‌ನಲ್ಲಿ ಮುಂದುವರಿಸಲಾಗಿದೆ. ಸಾರ್ವಜನಿಕರ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಇನ್ವಸ್ಟ್‌ಮೆಂಟ್ ಮಾಡಲಾಗಿದೆ.
ಐಟಿಬಿಟಿ ಉದ್ಯೋಗಕ್ಕೆ ಒತ್ತು
ನಿರ್ಮಾಣ ಕಾರ್ಯಗಳಿಗೆ ಸುಮಾರು 70 ಸಾವಿರ ಕೋಟಿ ಮೀಸಲು ಇಡಲಾಗಿದೆ. ಉತ್ತರ ಕರ್ನಾಟಕಕ್ಕೆ ಹೆಚ್ಚು ಅನುದಾನ ಕೊಡಲಾಗಿದೆ. ಬಿಜೆಪಿಯ ನನ್ನ ಸ್ನೇಹಿತರು ಏನು ಹೇಳಿದ್ರು ಅದನ್ನ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಮಾಡಿ ತೋರಿಸಿದ್ದಾರೆ. ಬೆಂಗಳೂರು ನಗರದ ಟನಲ್, ಕೆರೆಗಳಿಗೆ ಅನುದಾನ ಬಜೆಟ್‌ನಲ್ಲಿ ಕೊಡಲಾಗಿದೆ
ಫೆರಿಫರಲ್ ರಿಂಗ್ ರೋಡ್ ಬಜೆಟ್ ಮೀಸಲು
ಬಿಜೆಪಿ ಕಾಲದಲ್ಲಿ 510 ಸಾವಿರ ಕೋಟಿ ಕೊಟ್ಟು ಕೈ ತೋಳದುಕೊಳ್ಳತ್ತಾ ಇದ್ರು. ಆದ್ರೆ ಸಿದ್ದರಾಮಯ್ಯ ಬೆಂಗಳೂರಿಗೆ ಲಕ್ಷಾಂತರ ಕೋಟಿ ಅನುದಾನ ಬೆಂಗಳೂರಿಗೆ ಕೋಡಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ವಿಚಾರ
ಸೋಷಿಯಲ್ ಮೀಡಿಯಾ ಮಕ್ಕಳ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಎಲ್ಲಾರ ಮನೆಯಲ್ಲೂ ಸಣ್ಣ ಮಕ್ಕಳು ಇದ್ದಾರೆ. ಅವರಿಗೆ ಮಾಹಿತಿ ಫಿಲ್ಟರ್ ಆಗಿ ಹೋಗಬೇಕಾಗುತ್ತೆ. ಚಿಕ್ಕ ಮಕ್ಕಳನ್ನ ಸೋಷಿಯಲ್ ಮೀಡಿಯಾದಿಂದ ದೂರ ಇಡಬೇಕು.ಇದು ಯಾವ ರೀತಿ ಮಾಡಬೇಕು ಅನ್ನೋದು ಚರ್ಚೆ ಆಗ್ತಾ ಇದೆ.
12:21 PM (IST) Mar 06
ರಾಜ್ಯದ ಎಲ್ಲಾ ಕಾರಾಗೃಹ ಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಎಐ ಡಿಟಕ್ಷನ್ ಸಿಸ್ಟಮ್. ಮೊಬೈಲ್, ಗಾಂಜಾ ಹಾಗೂ ಇತರೆ ನಿಷೇಧಿತ ವಸ್ತುಗಳ ಬಳಕೆ ಹಾಗೂ ಅಕ್ರಮ ಚಟುವಟಿಕೆಗಳ ತಡೆಗಟ್ಟಲು ಕಠಿಣ ಕ್ರಮ.
12:20 PM (IST) Mar 06
16 ವರ್ಷದ ಮಕ್ಕಳಿಗೆ ಮೊಬೈಲ್ ಬ್ಯಾನ್ ವಿಚಾರ . MLC ಪುಟ್ಟಣ್ಣ ಹೇಳಿಕೆ
ಮಕ್ಕಳಿಗೆ ಮೊಬೈಲ್ ಬ್ಯಾನ ಮಾಡಿರೋದು ಒಳ್ಳೆಯ ಕೆಲಸ. ಮಾದಕ ವಸ್ತು ಯಾವ ರೀತಿ ಮಕ್ಕಳ ಹಾಳು ಮಾಡ್ತಿದೆ. ಅದಕ್ಕಿಂತ ಹೆಚ್ಚಿನ ರೀತಿಯಲ್ಲಿ ಮೊಬೈಲ್ ಮಕ್ಕಳನ್ನ ಹಾಳು ಮಾಡ್ತಿದೆ. ಸಿಎಂ ಮೊಬೈಲ್ ಬ್ಯಾನ್ ಮಾಡಿರೋದನ್ನ ಸ್ವಾಗತಿಸುತ್ತೇವೆ. ಮಾನಸಿಕ ತಜ್ಞರನ್ನ ನೇಮಕ ಮಾಡುತ್ತೇವೆ ಎಂದಿದ್ದಾರೆ
ಪೋಷರಿಗೆ ಕೌನ್ಸಿಲಿಂಗ್ ಮಾಡಬೇಕು. ಉನ್ನತ ಶಿಕ್ಷಣ ಇಲಾಖೆಯಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗಿದೆ. ಮೊದಲ ಹಂತದಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಇದೇ ರೀತಿಯಲ್ಲಿ ಗಲ್ಲು ಶಿಕ್ಷೆಯಂತಹ ಕಾನೂನು ಬರಬೇಕು. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳನ್ನ ಸೆಳೆಯುತ್ತಿರುವ ವಿಚಾರಗಳನ್ನ ಬ್ಯಾನ್ ಮಾಡಬೇಕೆಂದು ಆಗ್ರಹಿಸಿದ್ದಾರೆ.
12:18 PM (IST) Mar 06
ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಹಣ ಮೀಸಲಿಟ್ಟ ಸರ್ಕಾರ
* ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿ ಹಣ ಮೀಸಲು
* ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ಮೀಸಲು
* ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10578 ಕೋಟಿ ಮೀಸಲು
* ಶಕ್ತಿ ಯೋಜನೆಗೆ 5300 ಕೋಟಿ ಹಣ ಮೀಸಲು
ಯುವ ನಿಧಿಗೆ ಯಾವುದೇ ಅನುದಾನ ಮೀಸಲಿಡದ ಸರ್ಕಾರ
12:17 PM (IST) Mar 06
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. ನರೇಗಾ ರದ್ದತಿಯನ್ನು ಖಂಡಿಸಿ, ಗ್ರಾಮ ಪಂಚಾಯಿತಿಗಳ ಮರುನಾಮಕರಣ, 'ಅನಂತ' ಸೋಲಾರ್ ಯೋಜನೆ, ಮತ್ತು 'ಕಲ್ಯಾಣ ಪಥ' ಹಾಗೂ 'ಪ್ರಗತಿ ಪಥ' ರಸ್ತೆ ಯೋಜನೆಗಳಂತಹ ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ.
12:14 PM (IST) Mar 06
2026-27ರ ಬಜೆಟ್‌ನಲ್ಲಿ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಹೊರರಾಜ್ಯದ ಪುಣ್ಯಕ್ಷೇತ್ರಗಳಲ್ಲಿ ಯಾತ್ರಿನಿವಾಸಗಳನ್ನು ಅಭಿವೃದ್ಧಿಪಡಿಸಲು ಅನುದಾನ ಘೋಷಿಸಲಾಗಿದೆ.
12:07 PM (IST) Mar 06
12:06 PM (IST) Mar 06
- AnitaB.org India ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿ.
- ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದು ಮುಂದುವರೆಯಲಿದೆ.
-. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.
11:53 AM (IST) Mar 06
ಐದು ಪಾಲಿಕೆ ಮಾಡಿ ವಿಂಗಡಣೆ.
* 2025-26ನೇ ಸಾಲಿಗೆ ಬೆಂಗಳೂರು ಅಭಿವೃದ್ಧಿಗೆ 3 ಸಾವಿರ ಕೋಟಿ ಬದಲು, 7ಸಾವಿರ ಕೋಟಿಗೆ ಅನುದಾ ಹೆಚ್ಚಳ
* 3 ಸಾವಿರ ಕೋಟಿ ವೆಚ್ಚದಲ್ಲಿ 450 k.m ವೈಟ್ ಟಾಪಿಂಗ್ ರಸ್ತೆ ನಿರ್ಮಾಣ.
* 175 ಜಂಕ್ಷನ್ ಸೌಂದರ್ಯೀಕರಣ.
* 500 k.m ಪಾದಚಾರಿ ಮಾರ್ಗ ಮೇಲ್ದರ್ಜೆಗೆ.
* 100 ಸ್ಕೈ ವಾಕ್ ನಿರ್ಮಾಣದ ಉದ್ದೇಶ.
11:50 AM (IST) Mar 06
- 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣ ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಆರಂಭ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು.
- ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ. ರಾಯಚೂರಿನ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜ್ ಸ್ಥಾಪನೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಲಬುರಗಿಯ ನಿಂಬರಗಾ, ಯಾದಗಿರಿಯ ಕಕ್ಕೇರಾ, ರಾಯಚೂರಿನ ಅಂಬಾಮಠ ಮತ್ತು ಕೊಪ್ಪಳದ ಬೇವೂರಿನಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ.
- ಸರ್ಕಾರದ 11 ಪಾಲಿಟೆಕ್ನಿಕ್ಸ್. ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್‌ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್ ಆರಂಭ.
11:47 AM (IST) Mar 06
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಮೇಕೆದಾಟು, ಎತ್ತಿನಹೊಳೆ, ಮತ್ತು ಭದ್ರಾ ಮೇಲ್ದಂಡೆ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ವೇಗ ನೀಡುವ ಘೋಷಣೆ ಮಾಡಲಾಗಿದೆ. ಮೇಕೆದಾಟು ಯೋಜನೆಗೆ ಕಾನೂನು ಜಯ ಸಿಕ್ಕಿರುವುದನ್ನು ಪ್ರಸ್ತಾಪಿಸಿದ್ದಾರೆ.
11:43 AM (IST) Mar 06
ರಾಜ್ಯದ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. 2026-27ನೇ ಸಾಲಿನ ಬಜೆಟ್‌ನಲ್ಲಿ ನಿರುದ್ಯೋಗಿ ಯುವಜನತೆಗೆ ಬಂಪರ್ ಕೊಡುಗೆ, ವಿವಿಧ ಪ್ರಮುಖ ಇಲಾಖೆಗಳಲ್ಲಿ ಧೂಳು ಹಿಡಿಯುತ್ತಿದ್ದ ಬರೋಬ್ಬರಿ 56,432 ಹುದ್ದೆಗಳ ಭರ್ತಿ ಮಾಡಲು ಹಸಿರು ನಿಶಾನೆ ತೋರಿಸಲಾಗಿದೆ.
11:41 AM (IST) Mar 06
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ರೊಳಗೆ 15,000 ಶಿಕ್ಷಕರ ನೇಮಕಾತಿ ಮತ್ತು 3,900 ಕೋಟಿ ರೂ. ವೆಚ್ಚದಲ್ಲಿ 800 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣವನ್ನು ಘೋಷಿಸಿದ್ದಾರೆ. ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಡಿಜಿಟಲ್ ಕಲಿಕೆಗಾಗಿ AI ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ.
11:38 AM (IST) Mar 06
-. ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯ.
11:33 AM (IST) Mar 06
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.
ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
11:32 AM (IST) Mar 06
- ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು.
- ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
-. IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.
- 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
- ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು.
- ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ.
11:31 AM (IST) Mar 06
- ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.
- ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.
-. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
11:25 AM (IST) Mar 06
11:24 AM (IST) Mar 06
ಹೆಚ್ಚುವರಿ ಅಬಕಾರಿ ಸುಂಕವನ್ನು ನಿರ್ದಿಷ್ಟ ಮಿತಿಯೊಳಗೆ ex-factory ದರ ಪಟ್ಟಿಗಳ ಆಧಾರ ಮೇಲೆ ವಿಧಿಸಲಾಗುತ್ತದೆ.
ಮುಂದಿನ 3-4 ವರ್ಷದಲ್ಲಿ ಎಲ್ಲಾ ಪಾನೀಯಗಳ ಪ್ರತಿ ಲೀಟರ್ ನ ಮದ್ಯದ ಅಂಶ ಆಧರಿಸಿ ಅಬಕಾರಿ ಸುಂಕ.
ಈ ಪ್ರಕ್ರಿಯೆಗೆ ಹಂತಹಂತವಾಗಿ ಪರಿವರ್ತನೆಗೊಳ್ಳುತ್ತೇವೆ ಎಂದಿರುವ ಸರ್ಕಾರ
11:23 AM (IST) Mar 06
ʻʻಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲʼʼ -ವಚನಕಾರ ಶಿವಲೆಂಕ ಮಂಚಣ್ಣ
ʻರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದೆʼ ಎಂಬ ನಂಬಿಕೆಯಿಂದ ಪ್ರೇರಿತವಾಗಿ ನಮ್ಮ ಸರ್ಕಾರ ಬಿತ್ತನೆಯಿಂದ ಮಾರಾಟದವರೆಗೆ ರೈತರಿಗೆ ಸಮಗ್ರ ಬೆಂಬಲ ನೀಡುವ ನಾಲ್ಕು ಆಧಾರಸ್ತಂಭಗಳ ಮೇಲೆ ಕೃಷಿ ಅಭಿವೃದ್ಧಿ ತಂತ್ರವನ್ನು ರೂಪಿಸಿದೆ.
11:20 AM (IST) Mar 06
ಕರ್ನಾಟಕವು ರಾಷ್ಟ್ರೀಯ, ಅಂತಾರಾಷ್ಟ್ರೀಯ ವಾಣಿಜ್ಯ ರಂಗದಲ್ಲಿ ಅದ್ವಿತೀಯ ಪಾತ್ರ ವಹಿಸುತ್ತಿದೆ. ಕೃತಕ ಬುದ್ಧಿಮತ್ತೆಯ (AI) ಕ್ರಾಂತಿಕಾರಕ ಬೆಳವಣಿಗೆಗಳಿಂದ ಜಾಗತಿಕ ಉತ್ಪಾದನಾ ವಿಧಾನಗಳು ದಿನ ದಿನಕ್ಕೂ ಬದಲಾಗುತ್ತಿವೆ. ವಿಜ್ಞಾನ-ತಂತ್ರಜ್ಞಾನಗಳಲ್ಲಿನ ಹೊಸತನಗಳು ರಾಜ್ಯದ ಸ್ಥಿತಿ-ಗತಿಗಳನ್ನು ನಿರ್ಧರಿಸುವ ನಿರ್ಣಾಯಕ ಸಂಗತಿಗಳಾಗಿವೆ. ಬೆಂಕಿಯನ್ನು ಬೆಳಕಾಗಿಸಿಕೊಳ್ಳುವ ಸಂಕಲ್ಪ ಹೊತ್ತು ಮುನ್ನಡೆಯಬೇಕಾಗಿರುವ ಸಂದರ್ಭವನ್ನು ಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ ಸಿದ್ದರಾಮಯ್ಯ.
11:18 AM (IST) Mar 06
ಮದ್ಯದ ಮೇಲೆ ಹೊಸ ರೂಪದ ತೆರಿಗೆ ವಿಧಿಸಲು ಮುಂದಾದ ಸರ್ಕಾರ
ಈ ಬಗ್ಗೆ ಬಜೆಟ್ ನಲ್ಲಿ ಘೋಷಿಸಿರುವ ಸರ್ಕಾರ
ಜಾಗತಿಕ ಮಟ್ಟದಲ್ಲಿರುವ ಮದ್ಯದಲ್ಲಿರುವ ಮಧ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲಾಗ್ತಿತ್ತು
ಈ ತೆರಿಗೆ ಪದ್ದತಿಯು ಗೋಲ್ಡ್ ಸ್ಟ್ಯಾಂಡರ್ಡ್ ಆಗಿದೆ.
ಏಪ್ರಿಲ್ 2026ರಿಂದ ಪಾನೀಯಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ ಘೋಷಣೆ
ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡ ನಿಮ್ಹಾನ್ಸ್ ಸಂಸ್ಥೆಗಳಲ್ಲಿ ಸ್ಥಾಪನೆ ಮಾಡುವುದಾಗಿ ಘೋಷಣೆ
ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಸ್ಥಾಪನೆ
11:16 AM (IST) Mar 06
ಕರ್ನಾಟಕದ್ದೇ ಆದ ಸಶಕ್ತ ಹಾಗೂ ಸುಸ್ಥಿರ ಅಭಿವೃದ್ಧಿ ಮಾದರಿಗಳನ್ನು ರೂಪಿಸುತ್ತಿದ್ದೇವೆ. ಅವನ್ನು 11ಜಿ ಮಾದರಿ ಆರ್ಥಿಕತೆಗಳೆಂದು ವ್ಯಾಖ್ಯಾನ
i. ಗ್ಯಾರಂಟಿ ಎಕಾನಮಿ-ಕಲ್ಯಾಣ ಹಾಗೂ ಲಿಂಗ ಸಮಾನತೆಯ ಹಾದಿಯತ್ತ ಕರ್ನಾಟಕ
ii. ಗುಡ್ ಪಬ್ಲಿಕ್ ಎಜುಕೇಶನ್-ಸರ್ವರ ಏಳಿಗೆ ಬಯಸುವ ಸಮರ್ಥ ಸಾರ್ವಜನಿಕ ಶಿಕ್ಷಣ
iii. ಗುಡ್ ಹೆಲ್ತ್ ಟು ಆಲ್-ಸಮಗ್ರ ಆರೋಗ್ಯ - ಸದೃಢ ಕರ್ನಾಟಕ
iv. ಗ್ರಾಸ್ ರೂಟ್ ಎಕಾನಮಿ- ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳು
v. ಗುಡ್ ಗವರ್ನೆನ್ಸ್- ಜನಸ್ನೇಹಿ ಆಡಳಿತ
vi. ಗಿಗ್ ಎಕಾನಮಿ – ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳು
vii. ಜಿಯೋಗ್ರಾಫಿಕಲ್ ಈಕ್ವಾಲಿಟಿ- ಪ್ರಾದೇಶಿಕ ಅಸಮಾನತೆಯ ನಿವಾರಣೆ
viii. ಗ್ಲೋಬಲ್ ಟ್ರೇಡ್ ಎಕಾನಮಿ ಅಥವಾ ವ್ಯಾಪಾರ ಮತ್ತು ಕೈಗಾರಿಕಾಭಿವೃದ್ಧಿ
ix. ಗ್ಲೋಬ್ ಟ್ರೋಟಿಂಗ್ ಎಕಾನಮಿ- ಪ್ರವಾಸೋದ್ಯಮ ಆರ್ಥಿಕತೆ
x. ಗ್ರೀನ್ ಎಕಾನಮಿ- ನವೀಕರಿಸಬಹುದಾದ ಇಂಧನ ಸೇರಿಪರಿಸರ ಪೂರಕ ಆರ್ಥಿಕ ಚಟುವಟಿಕೆಗಳು
xi. ಗ್ರೋಯಿಂಗ್ ಅರ್ಬನ್ ಎಕಾನಮಿ- ನಗರ ಕೇಂದ್ರಿತ ಸುಸ್ಥಿರ ಆರ್ಥಿಕತೆ
11:11 AM (IST) Mar 06
ಸಿದ್ದರಾಮಯ್ಯ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆಯನ್ನು ನಿಷೇಧಿಸಿದೆ. ಮಕ್ಕಳ ಮೇಲೆ ಮೊಬೈಲ್ ಬಳಕೆಯ ಅಡ್ಡಪರಿಣಾಮಗಳನ್ನು ತಡೆಯುವ ಈ ನಿರ್ಧಾರಕ್ಕೆ ಬೆಂಬಲ. ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ ಮೂಲಕ ಈ ನಿಯಮವನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.
11:11 AM (IST) Mar 06
ಹಂಚಿಕೆಗಳು ಕೋಟಿ ರೂಗಳಲ್ಲಿ
ಪಶುಸಂಗೋಪನೆ, ಮೀನುಗಾರಿಕೆ - 4084
ಕೃಷಿ ತೋಟಗಾರಿಕೆ 8373
ಆಹಾರ ನಾಗರಿಕ ಸರಬರಾಜು 7942
ಲೋಕೋಪಯೋಗಿ 11424
ಸಮಾಜಕಲ್ಯಾಣ 18612
ಕಂದಾಯ 19843
ಆರೋಗ್ಯ 17817
ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ 34929
ಇಂಧನ 29942
ಗ್ರಾಮೀಣಾಭಿವೃದ್ಧಿ 26559
ನೀರಾವರಿ 22436
ನಗರಾಭಿವೃದ್ಧಿ ಮತ್ತು ವಸತಿ 22203
ಒಳಾಡಳಿತ ಸಾರಿಗೆ 23100
ಶಿಕ್ಷಣ-47224
11:07 AM (IST) Mar 06
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ, ಅಭಿವೃದ್ಧಿ ಪ್ರಾಧಿಕಾರ ರಚನೆ.
11:04 AM (IST) Mar 06
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ರ ಬಜೆಟ್‌ನಲ್ಲಿ, ರಾಜ್ಯವು ದಾಖಲೆಯ 1,32,190 ಕೋಟಿ ರೂಪಾಯಿಗಳ ಸಾಲವನ್ನು ಪಡೆಯಲು ನಿರ್ಧರಿಸಿದೆ. ಈ ನಿರ್ಧಾರದಿಂದಾಗಿ, ಆರ್ಥಿಕ ವರ್ಷದ ಅಂತ್ಯಕ್ಕೆ ಕರ್ನಾಟಕದ ಒಟ್ಟು ಸಾಲದ ಹೊರೆಯು 8,27,389 ಕೋಟಿ ರೂಪಾಯಿಗಳಿಗೆ ತಲುಪುವ ಅಂದಾಜಿದೆ.
11:04 AM (IST) Mar 06
ಬೌದ್ಧ ಧರ್ಮದ ಧರ್ಮಾಚರಿಗಳಿಗೆ ಮಾಸಿಕ 6 ಸಾವಿರ ಗೌರವ ಧನ...
ಜೈನ್ ಬೌದ್ಧ ಸಿಖ್ ಸಮುದಾಯಗಳ ಕಲ್ಯಾಣಕ್ಕೆ ನೂರು ಕೋಟಿ
ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರ