ಸಂಡೂರು ವಿಧಾನಸಭೆ ಉಪಚುನಾವಣೆ ಫಲಿತಾಂಶ: ಮತ ಎಣಿಕೆಗೆ ಸಕಲ ಸಿದ್ಧತೆ, ಯಾರಿಗೆ ಗೆಲುವಿನ ಹಾರ?

Published : Nov 23, 2024, 05:09 AM IST
ಸಂಡೂರು ವಿಧಾನಸಭೆ ಉಪಚುನಾವಣೆ ಫಲಿತಾಂಶ: ಮತ ಎಣಿಕೆಗೆ ಸಕಲ ಸಿದ್ಧತೆ, ಯಾರಿಗೆ ಗೆಲುವಿನ ಹಾರ?

ಸಾರಾಂಶ

ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ನ.23ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ. ಹೇಳಿದರು.

ಬಳ್ಳಾರಿ (ನ.23): ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ನ.23ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ. ಹೇಳಿದರು.

ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಗುರುವಾರ ಸಂಜೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಇದಕ್ಕೂ ಮುನ್ನ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಎಕ್ಸಿಟ್ ಪೋಲ್‌ಗಳು ತಲೆಕೆಳಗಾಗಲಿವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿಕೆ ಶಿವಕುಮಾರ

ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ವೀಕ್ಷಕರನ್ನು ನಿಯೋಜಿಸಲಾಗಿದೆ.
ಇದಲ್ಲದೆ 19 ಎಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಮೈಕ್ರೋ ವೀಕ್ಷಕರನ್ನು ಸಹ ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.

ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

ಕರ್ನಾಟಕ ಉಪಚುನಾವಣೆ 2024: ಪಿ-ಮಾರ್ಕ್ ಸಮೀಕ್ಷೆ ಪ್ರಕಾರ ಗೆಲ್ಲುವುದು ಇವರೇ ನೋಡಿ

ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರವಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್‌ಪಿಎಫ್, ಸಿಎಎಸ್‌ಎಫ್, ಕೆಎಸ್‌ಆರ್‌ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ರಾಜೇಶ್.ಹೆಚ್.ಡಿ ಅವರು ವಿವರಿಸಿದರು.

ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಸುದ್ದಿಗೋಷ್ಠಿಯಲ್ಲಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್