Karnataka By-election results 2026: ದಾವಣಗೆರೆ ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ: ಗೃಹ ಸಚಿವ ಪರಮೇಶ್ವರ್

Published : May 04, 2026, 12:03 PM IST
Home Minister dr g Parameshwar

ಸಾರಾಂಶ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ನಡೆ ಹಾಗೂ ತಮಿಳುನಾಡಿನಲ್ಲಿ ಡಿಎಂಕೆ ಹಿನ್ನಡೆಯ ಬಗ್ಗೆ ಅವರು ಅಚ್ಚರಿ ವ್ಯಕ್ತಪಡಿಸಿದರು.

ಬೆಂಗಳೂರು (ಮೇ.4): ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೀಡಿಂಗ್ ಕಡಿಮೆ ಇದೆ ಎಂಬ ಬಗ್ಗೆ ಇಷ್ಟು ಬೇಗ ನಿರ್ಧಾರಕ್ಕೆ ಬರುವುದು ಸಮಂಜಸವಲ್ಲ. ಅಭ್ಯರ್ಥಿ ಸಮರ್ಥ್ ಈಗ ಮುನ್ನಡೆಯಲ್ಲಿದ್ದಾರೆ, ಕೊನೆಯವರೆಗೂ ಕಾದು ನೋಡಬೇಕು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿದರು.

ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ

ದಾವಣಗೆರೆ ಬಾಗಲಕೋಟೆ ಉಪಚುನಾವಣಾ ಫಲಿತಾಂಶಗಳ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ನಮಗೆ ಬಂದಿರುವ ಮಾಹಿತಿಯ ಪ್ರಕಾರ ಎರಡು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆ ನನಗಿದೆ. ನಮ್ಮ ಸರ್ಕಾರದ ಉತ್ತಮ ಕಾರ್ಯಕ್ರಮಗಳು ಕೈ ಹಿಡಿಯಲಿವೆ. ಫಲಿತಾಂಶದ ಕೊನೆಯ ಹಂತದವರೆಗೆ ಕಾಯುವುದು ಸೂಕ್ತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳ: ಬಿಜೆಪಿ ನಡೆಯ ಬಗ್ಗೆ ಗೃಹಸಚಿವ ಗರಂ

ಪಶ್ಚಿಮ ಬಂಗಾಳದ ಫಲಿತಾಂಶದ ಕುರಿತು ಮಾತನಾಡಿದ ಅವರು, ಅಲ್ಲಿ ಬಿಜೆಪಿ ಕಾರ್ಯಕರ್ತರು ಹೇಗೆ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ. ಮಮತಾ ಬ್ಯಾನರ್ಜಿ ಅವರು ಮಾಡಿದ್ದ 96 ಲಕ್ಷಕ್ಕೂ ಅಧಿಕ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪ ಗಂಭೀರವಾದದ್ದು. ಒಂದು ವೇಳೆ ಇದು ನಿಜವಾಗಿದ್ದರೆ ಅಲ್ಲಿ ಕಾನೂನು ಎಷ್ಟರ ಮಟ್ಟಿಗೆ ಪಾಲನೆಯಾಗಿದೆ ಎಂಬುದನ್ನು ನೋಡಬೇಕು ಎಂದು ಅವರು ಪ್ರಶ್ನಿಸಿದರು.

ತಮಿಳುನಾಡಿನಲ್ಲಿ ಡಿಎಂಕೆ ಹಿನ್ನಡೆ ಆಶ್ಚರ್ಯ ತಂದಿದೆ

ತಮಿಳುನಾಡಿನ ರಾಜಕೀಯ ಚಿತ್ರಣದ ಬಗ್ಗೆ ಮಾತನಾಡುತ್ತಾ, ಡಿಎಂಕೆ ಪಕ್ಷಕ್ಕೆ ಅಲ್ಲಿ ಹಿನ್ನಡೆಯಾಗಿರುವುದು ನನಗೂ ಆಶ್ಚರ್ಯ ತಂದಿದೆ ಎಂದರು. ನಟ ವಿಜಯ್ ಅವರ ಸಿನಿಮಾ ಅಲೆ ಮತಗಳಾಗಿ ಬದಲಾಗುತ್ತವೆಯೇ ಎಂಬ ಚರ್ಚೆ ಇತ್ತು, ಈಗ ಅದು ನಿಜವಾದಂತೆ ಕಾಣುತ್ತಿದೆ. ವಿಜಯ್ ಅವರಿಗೆ ಉತ್ತಮ ಮುನ್ನಡೆ ಸಿಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.

ಪುದುಚೇರಿಯಲ್ಲಿ ಬಿಜೆಪಿಗೆ ಜಯ

ಪುದುಚೇರಿ ಸಣ್ಣ ರಾಜ್ಯ ಬಿಜೆಪಿ ಗೆಲ್ಲುತ್ತದೆ ಅಂತಿದ್ದರು ಅದೇ ಥರ ಆಗಿದೆ. ಅದರಂತೆಯೇ ಅಲ್ಲಿ ಫಲಿತಾಂಶ ಬರುತ್ತಿದೆ. ಆದರೆ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಹೊರಟಿರುವುದು ಕಾನೂನಾತ್ಮಕವಾಗಿ ಎಷ್ಟರ ಮಟ್ಟಿಗೆ ಸರಿ ಎಂದು ನೋಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Davanagere South election live counting: ದಾವಣಗೆರೆಯಲ್ಲಿ ಮತ ಎಣಿಕೆ: ಎರಡನೇ ಸುತ್ತಿನಲ್ಲೂ ಬಿಜೆಪಿ ಅಬ್ಬರ!
ಹನಿಯೂರು ಚಂದ್ರೇಗೌಡನ ಲ್ಯಾಪ್‌ಟಾಪ್‌ನಲ್ಲಿ ಹಲವು ಮಹಿಳೆಯರ ವಿಡಿಯೋ, ಫೋಟೋಗಳು ಪತ್ತೆ