ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳು ಯಾರ ಮಡಿಲಿಗೆ? - ಕಾಂಗ್ರೆಸ್‌, ಬಿಜೆಪಿ ನಡುವೆ ನೇರ ಹಣಾಹಣಿ, ಬೆಳಗ್ಗೆ 8ರಿಂದ ಎಣಿಕೆ, 12ರ ವೇಳೆಗೆ ರಿಸಲ್ಟ್‌

Kannadaprabha News   | Kannada Prabha
Published : May 04, 2026, 04:31 AM IST
Karnataka Bypolls Results Live Updates

ಸಾರಾಂಶ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು, ಫಲಿತಾಂಶದ ಕುತೂಹಲ ಹೆಚ್ಚಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕರ ನಿಧನದಿಂದ ತೆರವಾದ ಈ ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ದಾವಣಗೆರೆ/ಬಾಗಲಕೋಟೆ: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ಸೋಮವಾರ ನಡೆಯಲಿದೆ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನ ಎಚ್.ವೈ.ಮೇಟಿ ಅವರ ನಿಧನದಿಂದ ಸ್ಥಾನಗಳು ತೆರವಾಗಿದ್ದು, ಏ.9ರಂದು ಮತದಾನ ನಡೆದಿತ್ತು.

ದಾವಣಗೆರೆ ದಕ್ಷಿಣ ಕ್ಷೇತ್ರದ ಮತಗಳ ಎಣಿಕೆ ನಗರದ ಡಿ.ಆರ್.ಆರ್.ವಿದ್ಯಾಸಂಸ್ಥೆಯಲ್ಲಿ, ಬಾಗಲಕೋಟೆ ಕ್ಷೇತ್ರದ ಮತಗಳ ಎಣಿಕೆ ನಗರದ ತೋಟಗಾರಿಕೆ ವಿವಿಯಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಲಿದ್ದು, 8.30ಕ್ಕೆ ಇವಿಎಂ ಯಂತ್ರಗಳ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ.

ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಗೇಟಿನಿಂದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಕಾಂಗ್ರೆಸ್‌-ಬಿಜೆಪಿ ಸಮರ:

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಬಿಗ್‌ ಫೈಟ್‌ ಏರ್ಪಟ್ಟಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ.ದಾಸಕರಿಯಪ್ಪ ಸೇರಿದಂತೆ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದರೆ, ಅತ್ತ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

‘ಕೈ’ಗೆ ಎದುರಾದ ಭಿನ್ನಮತ:

ಕಾಂಗ್ರೆಸ್‌ಗೆ ಎರಡೂ ಕ್ಷೇತ್ರದಲ್ಲಿ ಭಿನ್ನಮತ ಎದುರಾಗಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್‌ ಟಿಕೆಟ್‌ಗೆ ಪಟ್ಟು ಹಿಡಿದಿದ್ದರಿಂದ ಸಮಸ್ಯೆ ಎದುರಾಗಿತ್ತು. ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತ ನಾಯಕರಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಬಳಿಕ, ಕಣದಿಂದ ನಿವೃತ್ತಿಯಾಗಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್ ಆರಂಭದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದೆ ಅಂತರ ಕಾಯ್ದುಕೊಂಡಿದ್ದರು. ಅಂತಿಮವಾಗಿ, 14 ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಾಂಗ್ರೆಸ್‌ಗೆ ಬಂಡಾಯವಾಗಿ, ಪಕ್ಷೇತರರಾಗಿ ಕಣದಲ್ಲಿದ್ದಾರೆ.

ಇನ್ನು, ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟು, ಭಿನ್ನಮತಕ್ಕೆ ಕಾರಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ಪಲ್ಟಿ ಹೊಡೆದ ಎಳನೀರು ವಾಹನ, ಭೀಕರ ದೃಶ್ಯ ಸೆರೆ
ಇಬ್ಬರು ಮಕ್ಕಳಿಗೆ ವಿಷವುಣಿಸಿದ ತಾಯಿ, ಗಂಡನ ಜೊತೆ ಜಗಳದಲ್ಲಿ ಅಮಾಯಕ ಜೀವಗಳು ಬಲಿ