ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಕೊಡುಗೆ: ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂ. ಅನುಮೋದನೆ!

Published : Apr 30, 2026, 07:50 PM IST
dks And siddaramaiah

ಸಾರಾಂಶ

ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನ ಶಮನಗೊಳಿಸಲು, ರಾಜ್ಯ ಸರ್ಕಾರವು ಅವರ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 600 ಕೋಟಿ ರೂಪಾಯಿಗಳ ಬೃಹತ್ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯು 2026-27 ಮತ್ತು 2027-28ನೇ ಸಾಲಿನಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನಂತಹ ಸೌಲಭ್ಯಗಳನ್ನು ಒದಗಿಸುವ ಗುರಿ ಹೊಂದಿದೆ.

ಬೆಂಗಳೂರು (ಏ.30): ಅಲ್ಪಸಂಖ್ಯಾತ ಸಮುದಾಯದಲ್ಲಿ ಉಂಟಾಗಿದ್ದ ಅಸಮಾಧಾನವನ್ನು ಶಮನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗಾಗಿ ಬರೋಬ್ಬರಿ 600 ಕೋಟಿ ರೂಪಾಯಿಗಳ ಬೃಹತ್ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ಕಾಲೋನಿಗಳ ಅಭಿವೃದ್ಧಿಗೆ ಈ ಹಣ ಬಳಕೆಯಾಗಲಿದೆ.

2026-27 ಮತ್ತು 2027-28ನೇ ಸಾಲಿನಲ್ಲಿ ಈ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು 600 ಕೋಟಿ ರೂಪಾಯಿಗಳ ಬೃಹತ್ 'ಕ್ರಿಯಾ ಯೋಜನೆ'ಯನ್ನು ರೂಪಿಸಲಾಗಿದೆ. ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಲ್ಪಸಂಖ್ಯಾತ ಕಾಲೋನಿಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದ ಸಮುದಾಯದ ಮುನಿಸನ್ನು ತಣಿಸಲು ಮತ್ತು ವಿಶ್ವಾಸಕ್ಕೆ ತೆಗೆದುಕೊಳ್ಳಲು ಈ 'ಬಂಪರ್ ಆಫರ್' ನೀಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಚಿವ ಸಂಪುಟದ ಈ ನಿರ್ಧಾರವು ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಲಿದೆ ಎಂದು ಸರ್ಕಾರ ಭಾವಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿಗೆ 'ಆರೆಂಜ್ ಅಲರ್ಟ್, ಆಲಿಕಲ್ಲು ಮಳೆ' ಅಬ್ಬರ: ಮುಂದಿನ 5 ದಿನ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಹೈ-ಅಲರ್ಟ್!
Bengaluru Rains: ವರುಣನ ಅರ್ಭಟಕ್ಕೆ ಸಿಎಂ ನಿವಾಸವೂ 'ಶೇಕ್'! ಮರ ಬಿದ್ದು ಕಾವೇರಿ ಬಂಗಲೆಯ ಕಂಪೌಂಡ್‌ಗೆ ಹಾನಿ