ಲೋಕಾಯುಕ್ತಕ್ಕೆ ಬಲ: ಎಸಿಬಿ ರದ್ದತಿ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಇಲ್ಲ

By Govindaraj SFirst Published Aug 26, 2022, 7:14 AM IST
Highlights

ಲೋಕಾಯುಕ್ತಕ್ಕೆ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸುವ ಮುನ್ನ ತಮ್ಮ ಪೂರ್ವಾನುಮತಿ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಅವರು, ಸಶಕ್ತ, ಪ್ರಾಮಾಣಿಕ ಹಾಗೂ ದಕ್ಷತೆ ಮಾತ್ರವಲ್ಲದೆ ದೈಹಿಕ ಆರೋಗ್ಯವಂತ ಅಧಿಕಾರಿಗಳನ್ನು ನಿಯೋಜಿಸುವಂತೆ ಕೂಡ ಸಲಹೆ ನೀಡಿದ್ದಾರೆ. 

ಬೆಂಗಳೂರು (ಆ.26): ಲೋಕಾಯುಕ್ತಕ್ಕೆ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸುವ ಮುನ್ನ ತಮ್ಮ ಪೂರ್ವಾನುಮತಿ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಅವರು, ಸಶಕ್ತ, ಪ್ರಾಮಾಣಿಕ ಹಾಗೂ ದಕ್ಷತೆ ಮಾತ್ರವಲ್ಲದೆ ದೈಹಿಕ ಆರೋಗ್ಯವಂತ ಅಧಿಕಾರಿಗಳನ್ನು ನಿಯೋಜಿಸುವಂತೆ ಕೂಡ ಸಲಹೆ ನೀಡಿದ್ದಾರೆ. 

ಅಲ್ಲದೆ ಭ್ರಷ್ಟಾಚಾರದ ಬಗ್ಗೆ ಜನರು ದೂರು ಸಲ್ಲಿಸಿದರೆ ತಕ್ಷಣವೇ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಲೋಕಾಯುಕ್ತರು ಕಟ್ಟಪ್ಪಣೆ ಮಾಡಿದ್ದಾರೆ. ಲೋಕಾಯುಕ್ತ ಸಂಸ್ಥೆಯನ್ನು ಬಲಯುತಗೊಳಿಸಲು ಹಾಗೂ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಪಡಿಸಿದ ಹೈಕೋರ್ಟ್‌ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

PSI Recruitment Scam: ಪಿಎಸ್‌ಐ ಹಗರಣ ಲೋಕಾಯುಕ್ತಕ್ಕೆ?, ಭ್ರಷ್ಟರಿಗೆ ನಡುಕ

ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅನೌಪಚಾರಿಕ ಚರ್ಚೆ ನಡೆಯಿತು. ಆ ವೇಳೆ ಲೋಕಾಯುಕ್ತ ಸಂಸ್ಥೆಗೆ ಬಲ ತುಂಬಲು ನಿರ್ಧರಿಸಲಾಯಿತು. ಹೀಗಾಗಿ ಸಂಸ್ಥೆಗೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್‌ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು ಮಾಡುವಂತೆ ಆದೇಶ ನೀಡಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದಿರಲು ಸರ್ಕಾರ ತೀರ್ಮಾನಿಸದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಬಿಜೆಪಿಯ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದಂತೆ ಲೋಕಾಯುಕ್ತ ಸಂಸ್ಥೆ ಬಲಪಡಿಸಲು ಹಂತ-ಹಂತವಾಗಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಲೋಕಾಯುಕ್ತ ಸಂಸ್ಥೆಗೆ ಏನೇನು ಬೇಕೋ ಅದನ್ನು ನೀಡಲು ಸರ್ಕಾರ ಕ್ರಮ ವಹಿಸಲಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜತೆ ಚರ್ಚೆ ನಡೆಸಲಾಗಿದೆ. ಸಂಸ್ಥೆಗೆ ಸಿಬ್ಬಂದಿ ಸೇರಿದಂತೆ ಅಗತ್ಯ ಸೌಕರ್ಯ ನೀಡಲು ಲೋಕಾಯುಕ್ತ ಸಂಸ್ಥೆಯ ಜತೆ ಚರ್ಚಿಸಿ ಅಗತ್ಯತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ ಎಂದರು.

ಸ್ವಾತಂತ್ರ್ಯ ದಿನದ 2 ಘೋಷಣೆಗೆ ಸಂಪುಟದ ಒಪ್ಪಿಗೆ: ಕರ್ತವ್ಯನಿರತ ಸಮಯದಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಅವಲಂಬಿತ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸಲು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ರೈತ ವಿದ್ಯಾನಿಧಿ ಯೋಜನೆಯನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆ ವೇಳೆ ಈ ಕುರಿತು ಸಿಎಂ ಘೋಷಣೆ ಮಾಡಿದ್ದರು.

ಎಸಿಬಿ ರದ್ದು ಮಾಡಿದ ಕೋರ್ಟ್‌, ಸಿದ್ಧರಾಮಯ್ಯ ಜನರ ಕ್ಷಮೆ ಕೇಳಲಿ ಎಂದ ರಾಜೀವ್‌ ಚಂದ್ರಶೇಖರ್‌!

7 ಜಿಲ್ಲೆಗಳಲ್ಲಿ ಹೊಸ ವಿವಿ ಸ್ಥಾಪನೆಗೆ ಅಸ್ತು: ಬಜೆಟ್‌ ಘೋಷಣೆಯಂತೆ ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ- 2000ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಿಂದಾಗಿ ಚಾಮರಾಜನಗರ, ಬೀದರ್‌, ಹಾವೇರಿ, ಹಾಸನ, ಕೊಪ್ಪಳ, ಬಾಗಲಕೋಟೆ ಹಾಗೂ ಹಾವೇರಿಯಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿವೆ.

click me!