
ಕನ್ನಡಪ್ರಭ ವಾರ್ತೆ ಬೆಂಗಳೂರು (ಜು.3): ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಿಂದ ಶೀಘ್ರ ವಾಪಸಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್‌ನೊಂದಿಗೆ ಚಚಿರ್ಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಕಾರ್ಯಕಾರಿ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.5ರಂದು ದೆಹಲಿಗೆ ತೆರಳುವ ಸಾಧ್ಯತೆಯಿದೆ.
ಮಾಹಿತಿ ಪ್ರಕಾರ ಜು.5ರಂದು ರಾಹುಲ್ ಗಾಂಧಿ ಅವರು ವಿದೇಶದಿಂದ ದೆಹಲಿಗೆ ವಾಪಸಾಗಲಿದ್ದಾರೆ. ಅಂದೇ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ನಾಯಕರು ಜಿಲ್ಲಾವಾರು, ಸಮುದಾಯವಾರು ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಜು.6 ಮತ್ತು 7ರಂದು ದೆಹಲಿಯಲ್ಲೇ ಇದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾಗಾಂಧಿ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ ಜು.10ರಿಂದ 12ರೊಳಗೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದೇ ವೇಳೆ, ಜು.22ರಂದು ಅವಧಿ ಪೂರ್ಣಗೊಳ್ಳಲಿರುವ ವಿಧಾನ ಪರಿಷತ್‌ನ ಐವರು ನಾಮನಿರ್ದೇಶಿತ ಸದಸ್ಯರ ಸ್ಥಾನಗಳಿಗೆ ಹೊಸದಾಗಿ ಯಾರನ್ನು ಸರ್ಕಾರದಿಂದ ನಾಮನಿರ್ದೇಶನ ಮಾಡಬೇಕೆಂಬ ಬಗ್ಗೆಯೂ ಇಬ್ಬರೂ ನಾಯಕರು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.
ಮಾಹಿತಿ ಪ್ರಕಾರ ಬೆಳಗಾವಿ ಜಿಲ್ಲೆಯಿಂದ ಲಕ್ಷ್ಮಣ ಸವದಿ ಹೆಸರು ಕೇಳಿಬಂದಿದೆ. ಹುಬ್ಬಳ್ಳಿ-ಧಾರವಾಡದಿಂದ ಶಾಸಕರಾದ ಪ್ರಸಾದ್ ಅಬ್ಬಯ್ಯ, ಕಲ್ಯಾಣ ಕರ್ನಾಟಕ ಭಾಗದ ಮುಸ್ಲಿಂ ಪ್ರಾತಿನಿಧ್ಯದ ಹೆಸರಿನಲ್ಲಿ ವಿಧಾನ ಪರಿಷತ್‌ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್ ಅವರ ಹೆಸರಿದೆ.
ಬಾಗಲಕೋಟೆಯಿಂದ ಯಶವಂತರಾಯ ಪಾಟೀಲ-ಅಪ್ಪಾಜಿ ನಾಡಗೌಡ, ಬಳ್ಳಾರಿಯಿಂದ ನಾಗೇಂದ್ರ, ಕೊಪ್ಪಳದಿಂದ ಬಸವರಾಜ ರಾಯರೆಡ್ಡಿ, ಚಿತ್ರದುರ್ಗದಿಂದ ರಘುಮೂರ್ತಿ, ದಾವಣಗೆರೆಯಿಂದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್/ಡಿ.ಜಿ.ಶಾಂತನಗೌಡ, ತುಮಕೂರಿನಿಂದ ಶ್ರೀನಿವಾಸ್(ವಾಸು), ಹಾಸನದಿಂದ ಶಿವಲಿಂಗೇಗೌಡ, ಮಂಡ್ಯ ಚಲುವರಾಯಸ್ವಾಮಿ, ಚಾಮರಾಜನಗರ ಪುಟ್ಟರಂಗಶೆಟ್ಟಿ, ಬೆಂಗಳೂರು ನಗರದಿಂದ ಮಾಜಿ ಸಚಿವ ಜಮೀರ್ ಅಹಮದ್/ರಿಜ್ವಾನ್ ಅರ್ಷದ್, ಲೇಔಟ್ ಕೃಷ್ಣಪ್ಪ, ಕೋಲಾರ ಶರತ್ ಬಚ್ಚೇಗೌಡ/ಸುಬ್ಬಾರೆಡ್ಡಿ, ಶಿವಮೊಗ್ಗದಿಂದ ಬೇಳೂರು ಗೋಪಾಲಕೃಷ್ಣ, ಉತ್ತರ ಕನ್ನಡದಿಂದ ಆರ್.ವಿ.ದೇಶಪಾಂಡೆ/ಮಾಂಕಾಳವೈದ್ಯ, ಹಾವೇರಿಯಿಂದ ರುದ್ರಪ್ಪ ಲಮಾಣಿ ಹೆಸರುಗಳು ಸಂಭಾವ್ಯ ಸಚಿವರ ಪಟ್ಟಿಯಲ್ಲಿವೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ