
ಬೆಂಗಳೂರು (ಮೇ.21): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯದ ವಿವಿಧ ವ್ಯವಸ್ಥೆಗಳ ಸುಧಾರಣೆ ಸಂಬಂಧ ಮೇ 27 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ಸಭೆಯಲ್ಲಿ ಅನೇಕ ರೀತಿಯ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ. ಲಾಕ್ ಡೌನ್ ಅವಧಿಯಲ್ಲಿ ತೊಂದರೆ ಅನುಭವಿಸಿರುವ ಉದ್ಯಮಗಳಿಗೆ ಕೆಲ ವಿನಾಯಿತಿ ಘೋಷಣೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ.
ರಾಜ್ಯದ 21 ಜಿಲ್ಲೆಗಳಲ್ಲಿ ಸೋಂಕಿತರಿಗಿಂತ ಚೇತರಿಕೆ ಹೆಚ್ಚಳ ...
ತುರ್ತಾಗಿ ಆರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ಆರ್ಥಿಕ ಅನುದಾನ ನೀಡುವುದು. ಕೋರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ಮತ್ತು ಬೋರ್ಡ್ ಪರೀಕ್ಷೆ ನಡೆಸುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಇನ್ನು ವಿವಿಧ ನಿಗಮಗಳಲ್ಲಿರುವ ಅನುದಾನವನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡುವ ಬಗ್ಗೆಯು ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಕೋರೋನಾ ನಿರ್ವಹಣೆಗೆ ಸರ್ಕಾರದ ಜೊತೆಗೆ ಸಹಭಾಗಿತ್ವ ನೀಡುವ ಖಾಸಗಿ ಕಂಪನಿಗಳಿಗೆ ವಿನಾಯಿತಿ ನೀಡುವ ಬಗ್ಗೆಯೂ ಚರ್ಚೆ ನಡೆಯಲಿದೆ.
ಪ್ಯಾಕೇಜ್ ಘೋಷಣೆ ವೇಳೆ ಕೈಬಿಟ್ಟಿರುವ ಸಮುದಾಯ ಮತ್ತು ವೃತ್ತಿ ಗಳಿಗೆ ನೆರವು ಘೋಷಣೆ ಬಗ್ಗೆಯು ಮೇ 27 ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ