ದಾವೋಸ್‌ ಶೃಂಗದಲ್ಲಿ ಪಾಲ್ಗೊಳ್ಳಲು ಸ್ವಿಜರ್ಲೆಂಡ್ ಗೆ ಪ್ರಯಾಣಿಸಲಿರುವ ಬೊಮ್ಮಾಯಿ

Published : May 06, 2022, 05:45 AM IST
ದಾವೋಸ್‌ ಶೃಂಗದಲ್ಲಿ ಪಾಲ್ಗೊಳ್ಳಲು ಸ್ವಿಜರ್ಲೆಂಡ್ ಗೆ ಪ್ರಯಾಣಿಸಲಿರುವ ಬೊಮ್ಮಾಯಿ

ಸಾರಾಂಶ

- ಮೇ 18ಕ್ಕೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ - 22ರಿಂದ 26ರವರೆಗೆ ಆರ್ಥಿಕ ಶೃಂಗ - ಎಂಟು ದಿನಗಳ ಕಾಲ ಪ್ರವಾಸ  

ಬೆಂಗಳೂರು (ಮೇ. 5): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief minister Basavaraj bommai ) ಅವರು ಸ್ವಿಜರ್ಲೆಂಡ್ ನ ದಾವೋಸ್‌ನಲ್ಲಿ (Davos)  ನಡೆಯಲಿರುವ ವಿಶ್ವ ಆರ್ಥಿಕ ಶೃಂಗ (World Economic Forum) ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ತಿಂಗಳ 22ರಿಂದ 26ರವರೆಗೆ ಐದು ದಿನಗಳ ಕಾಲ ಸಭೆ ನಡೆಯಲಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ(bs yediyurappa) ಅವರೂ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು. ಇದೀಗ ಬೊಮ್ಮಾಯಿ ಅವರೂ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಬೊಮ್ಮಾಯಿ ಅವರ ಮೊದಲ ವಿದೇಶ ಪ್ರವಾಸ ಇದಾಗಲಿದ್ದು, ಎಂಟು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಸಂಬಂಧ ಅವರು ಇದೇ ತಿಂಗಳ 18ರ ಮಧ್ಯರಾತ್ರಿ ಪ್ರಯಾಣ ಆರಂಭಿಸಲಿದ್ದಾರೆ. ಮೊದಲಿಗೆ ಲಂಡನ್‌ಗೆ (London) ತೆರಳಲಿರುವ ಬೊಮ್ಮಾಯಿ ಅವರು ಬರುವ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಿಗದಿಯಾಗಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅಲ್ಲಿನ ಉದ್ಯಮಿಗಳನ್ನು ಆಹ್ವಾನಿಸಲಿದ್ದಾರೆ. ಅಲ್ಲಿಂದ ದಾವೋಸ್‌ಗೆ ತೆರಳಲಿದ್ದಾರೆ. ಮೇ 27ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಳೆ 70 ಸಂಚಾರಿ ಪಶು ಚಿಕಿತ್ಸೆ ವಾಹನಕ್ಕೆ ಚಾಲನೆ
ಬೆಂಗಳೂರು (ಮೇ.5):
  ರೈತನ ಮನೆ ಬಾಗಿಲಲ್ಲೇ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ಪಶು ಸಂಜೀವಿನಿ (prabhu chauhan) ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿರುವ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳ ಪೈಕಿ 70 ವಾಹನ ಮೇ 7ರ ಶನಿವಾರ ಲೋಕಾರ್ಪಣೆಗೊಳ್ಳಲಿವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ದೇಶದಲ್ಲೇ ಮೊದಲಬಾರಿಗೆ ಆರಂಭಿಸಿರುವ ಈ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಪರ್ಷೋತ್ತಮ ರೂಪಾಲ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗ ಶನಿವಾರ ಬೆಳಗ್ಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದರು.

NEWS HOUR ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಗೆ ಕಾಂಗ್ರೆಸ್ ಬೆಂಬಲ!

ನಾನು ಸಚಿವನಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಮುಖ್ಯಮಂತ್ರಿ ಅವರ ಸಹಕಾರದಿಂದ 15 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಆರಂಭಿಸಿದ್ದೇನೆ. ಅವುಗಳು ರಾಜ್ಯದ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ನಿರಂತರ ಪ್ರಯತ್ನದ ಫಲವಾಗಿ ಇದೀಗ ಕೇಂದ್ರದಿಂದ 44 ಕೋಟಿ ರು. ಅನುದಾನದಲ್ಲಿ ರಾಜ್ಯಕ್ಕೆ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳು ಮಂಜೂರಾಗಿವೆ. ಈ ಪೈಕಿ ಶನಿವಾರ 70 ವಾಹನಗಳಿಗೆ ಚಾಲನೆ ಸಿಗಲಿದೆ. ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕಿಗೊಂದು ವಾಹನ ನೀಡಲಾಗುವುದು. ರಾಜ್ಯದಲ್ಲಿ ಒಟ್ಟು 290 ಲಕ್ಷ ಜಾನುವಾರು ಹಾಗೂ ಇತರೆ ಪ್ರಾಣಿಗಳಿದ್ದು, ಪ್ರತಿ ಲಕ್ಷ ಜಾನುವಾರುಗಳಿಗೊಂದು ಚಿಕಿತ್ಸಾ ವಾಹನ ಒದಗಿಸಲಾಗುವುದು ಎಂದರು.

Chamarajanagar: ಬುಡಕಟ್ಟು ಸೋಲಿಗ ಯುವತಿಯನ್ನು ಪ್ರೇಮಿಸಿ ಕೈ ಕೊಟ್ಟ ಯುವಕ

ಪ್ರತಿ ವಾಹನದಲ್ಲಿ ಒಬ್ಬ ಪಶು ವೈದ್ಯ, ಒಬ್ಬ ಪಶುವೈದ್ಯ ಸಹಾಯಕ, ವಾಹನ ಚಾಲಕ ಕಂ ‘ಡಿ’ದರ್ಜೆ ನೌಕರರು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ವಾಹನಗಳ ಮೇಲೆ ನಿಗಾ ವಹಿಸಲು ಪ್ರತ್ಯೇಕ ಕಾಲ್‌ ಸೆಂಟರ್‌ ಸ್ಥಾಪಿಸಲಾಗುವುದು. ಸಿಬ್ಬಂದಿ ವೇತನ, ವಾಹನಗಳ ನಿರ್ವಹಣಾ ವೆಚ್ಚವನ್ನು ಸೇರಿ ಪ್ರತಿ ವಾಹನಕ್ಕೆ ಮಾಸಿಕ 1.56 ಲಕ್ಷ ರು. ಅನುದಾನ ಒದಗಿಸಲಾಗುವುದು. ಇದಕ್ಕೆ ವಾರ್ಷಿಕ ಒಟ್ಟಾರೆ 54.78 ಕೋಟಿ ರು. ಅನುದಾನ ಬೇಕಾಗಲಿದೆ. ಇದಕ್ಕೆ ಕೇಂದ್ರ ಸರ್ಕಾರ ಶೇ.60ರಷ್ಟುಮತ್ತು ರಾಜ್ಯ ಸರ್ಕಾರ ಶೇ.40ರಷ್ಟುಅನುದಾನ ದೊರೆಯುತ್ತದೆ ಎಂದು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!