ಮೌಢ್ಯಾಚರಣೆ ವಿರೋಧಿ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಎಷ್ಟುಬಾರಿ ಹೋಗಿದ್ದಾರೆ?

By Sathish Kumar KHFirst Published Jul 2, 2023, 8:54 PM IST
Highlights

ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ಚಾಮರಾಜನಗರಕ್ಕೆ ಹೋದರೆ ಮುಖ್ಯಮಂತ್ರಿ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ.

ಬೆಂಗಳೂರು (ಜು.02): ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ. ಚಾಮರಾಜನಗರಕ್ಕೆ ಹೋದರೆ ಮುಖ್ಯಮಂತ್ರಿ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಸಿಎಂ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ "ನೀನಲ್ಲದೆ ಮತ್ತಾರೂ ಇಲ್ಲವಯ್ಯಾ" ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು  ಉದ್ಘಾಟಿಸಿ ಮಾತನಾಡಿದರು. ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥಾ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಡ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದರು. 

Latest Videos

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನು ಸನ್ಮಾನಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆಶಯದಂತೆ ಕಾಯಕ, ದಾಸೋಹಗಳ ಮೌಲ್ಯ ಹೆಚ್ಚಾಗಬೇಕು:  ಬಸವಣ್ಣನವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಹೀಗೆ ಸಮಾಜದ ಉತ್ಪಾದನೆ, ಸಮಾಜದ ಎಲ್ಲರಿಗೂ ವಿತರಣೆ ಆಗಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಈ ಕಾರಣಕ್ಕೆ. ಎಲ್ಲಾ ಜಾತಿ ವರ್ಗಗಳಿಗೂ ಸಮಾನವಾದ ಅವಕಾಶ ಮತ್ತು ಸ್ಥಾನ‌ಮಾನ ಕಲ್ಪಿಸುವ ಆಶಯ ಆಗಿನ ಪಾರ್ಲಿಮೆಂಟ್ ಆಗಿದ್ದ ಅನುಭವ ಮಂಟಪಕ್ಕೆ ಇತ್ತು. ಇದೇ ಆಶಯ ನಮ್ಮ ಸರ್ಕಾರದ್ದೂ ಆಗಿದೆ ಎಂದರು. 

ಧರ್ಮಕ್ಕೆ ಹೊಸ ಭಾಷ್ಯ ಆರಂಭ: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಎಲ್ಲವೂ ಸಂಸ್ಕೃತದ ಪ್ರಾಬಲ್ಯದಿಂದ ಕೂಡಿದ್ದ 12ನೇ ಶತಮಾನದಲ್ಲಿ ಬಸವಣ್ಣನವರು ಕನ್ನಡವನ್ನು ಬಳಸುವ ಮೂಲಕ ಲಿಂಗಾಯತ ಧರ್ಮಕ್ಕೆ ಹೊಸ ಭಾಷ್ಯವನ್ನೇ ಬರೆದರು. ಆ ಆದರ್ಶವು ಒಂಬೈನೂರು ವರ್ಷಗಳ ನಂತರವೂ ಕರ್ನಾಟಕವನ್ನು ಮುನ್ನಡೆಸುತ್ತಿದೆ ಎಂದು ಹೇಳಿದರು. ಬಸವಣ್ಣನವರು ದೇವರೊಂದಿಗೆ ಕನ್ನಡದಲ್ಲಿ ಮಾತನಾಡಿದ ಮಹಾನುಭಾವರು ಎಂದು ಎಂ.ಎಂ. ಕಲಬುರ್ಗಿಯವರು ಸದಾ ಹೇಳುತ್ತಿದ್ದರು. ಇದರಂತೆ ಈ ನೃತ್ಯ ರೂಪಕವು ಕನ್ನಡೇತರ ಭಾಷೆಯಲ್ಲಿ ಮೈದಾಳಿರುವುದು ವಚನ ಸಾಹಿತ್ಯದ ಕಿರೀಟಕ್ಕೆ ಇನ್ನೊಂದು ಗರಿಯಾಗಿದೆ ಎಂದು ಬಣ್ಣಿಸಿದರು.

ಸಾವಿನ ದವಡೆಯಲ್ಲಿದ್ದ ಮಕ್ಕಳಿಗೆ ಮರುಜನ್ಮ ನೀಡಿ, ಪ್ರಾಣಬಿಟ್ಟ ಮಹಾತಾಯಿ

ಬಸವಣ್ಣನವರ ಖ್ಯಾತಿ ದೇಶದೆಲ್ಲೆಡೆ ಹರಡಲಿ:  ಈ ಹಿಂದೆ ಅ.ನ.ಕೃಷ್ಣರಾಯರು ಮತ್ತು 'ವಚನ ಪಿತಾಮಹ' ಫ.ಗು.ಹಳಕಟ್ಟಿ ಅವರ ದೂರದೃಷ್ಟಿಯಿಂದ ವಚನಗಳ ಗಾಯನ ಸಂಪ್ರದಾಯ ಆರಂಭವಾಯಿತು. ಆಗ ಮಲ್ಲಿಕಾರ್ಜುನ ಮನ್ಸೂರ್‍‌ ಅವರಂತಹ ಗಾಯಕರು ಇದರಲ್ಲಿ ಮುಂಚೂಣಿಯಲ್ಲಿದ್ದರು. ಈಗ ಈ ನೃತ್ಯರೂಪಕವು ಭಾರತದ ಎಲ್ಲೆಡೆ ಬಸವಣ್ಣನವರ ಖ್ಯಾತಿಯನ್ನು ಹಬ್ಬಿಸಲಿ. ಪ್ರಜಾಪ್ರಭುತ್ವ ಮತ್ತು ನಿಜವಾದ ಧರ್ಮ ಎರಡನ್ನೂ ಬೆಸೆಯುವ ಪ್ರಯತ್ನ ಮಾಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ದೇವರನ್ನು ಬಡಬಗ್ಗರ ಹತ್ತಿರಕ್ಕೆ ಕೊಂಡೊಯ್ದ ಅವರು ಅನುಭವ ಮಂಟಪದ ಭಾಗವೂ ಆಗಿದ್ದರು. ಶರಣರ ಇಂತಹ ಸಾಧನೆಗಳನ್ನು ನಾವು ಕನ್ನಡೇತರ ಸಮುದಾಯಗಳಿಗೂ ತಲುಪಿಸಬೇಕು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. 

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ "ನೀನಲ್ಲದೆ ಮತ್ತಾರೂ ಇಲ್ಲವಯ್ಯಾ" ಎಂಬ ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಪಂಡಿತಾರಾಧ್ಯ ಶ್ರೀಗಳ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಶಾಸಕರಾದ ಶ್ರೀನಿವಾಸ್, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯ, ಶ್ಯಾಮನೂರು ಶಿವಶಂಕರಪ್ಪ ಸೇರಿ ಹಲವರು ಉಪಸ್ಥಿತರಿದ್ದರು.

click me!