
ಬೆಂಗಳೂರು, (ಜೂನ್.26): ಭಾರತದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಅಂತರ್ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಕರ್ನಾಟಕದ 2 ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಪುರಸ್ಕಾರ ಲಭಿಸಿದೆ.
ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರ ಮಟ್ಟದಲ್ಲಿ ನಡೆದ ಈ ವಿವಿಧ ಸ್ತರದ ಸ್ಪರ್ಧೆಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿಯ ಡಿಜಿಟಲ್ ಗ್ರಂಥಾಲಯ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ ದೊರಕಿದೆ.
ದಾವಣಗೆರೆ ಟಾಪ್ 15 ಸ್ಮಾರ್ಟ್ ಸಿಟಿ ಆಗಿದ್ದು ಹೇಗೆ?
ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ನೀಡುವ ವಿಶೇಷ ಪುರಸ್ಕಾರ ಬೆಂಗಳೂರು ಸ್ಮಾರ್ಟ್ ಸಿಟಿಗೆ ಲಭಿಸಿದೆ. ಹಾಗೆಯೇ ಕಾಮಗಾರಿಗಳಲ್ಲಿ ಪದವೀಧರರಿಗೆ ಕೆಲಸ ನೀಡಿ ಇಂಟರ್ನ್ ಶಿಪ್ ನೀಡುವ ಯೋಜನೆಗೆ ಬೆಂಗಳೂರು ಸ್ಮಾರ್ಟ್ ಸಿಟಿಯನ್ನು ರನ್ನರ್ ಅಪ್ ಎಂದು ಘೋಷಿಸಲಾಗಿದೆ.
ಹವಾಮಾನ ಮೌಲ್ಯಮಾಪನಕ್ಕೆ ಸಂಬಂಧಿಸಿ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3 ನಕ್ಷತ್ರಗಳನ್ನು ನೀಡಲಾಗಿದೆ. ಈ ಪುರಸ್ಕಾರಗಳನ್ನು ಪಡೆದ ಬೆಂಗಳೂರು ಮತ್ತು ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯ ಅಧ್ಯಕ್ಷರಾಗಿರುವ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಶ್ರಮಿಸಿದ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ